ರಾಜಕೀಯ

ಡಾ.ಮಂಜುನಾಥ್ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಲು ಮೋದಿ ಮತ್ತು ಅಮಿತ್ ಶಾ ಉತ್ಸುಕ: ಹೆಚ್ ಡಿ ದೇವೇಗೌಡ

ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ ಜೊತೆಗಿನ ಸಂವಾದವನ್ನು ನೆನಪಿಸಿಕೊಂಡ ಗೌಡರು, ಮೋದಿ ಅವರು ನಮ್ಮ ನೋವನ್ನು ಅರ್ಥಮಾಡಿಕೊಳ್ಳುತ್ತಾರೆ. ಕಾವೇರಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.

ಬೆಂಗಳೂರು: ಕೇಂದ್ರ ಸಚಿವ ಸಂಪುಟಕ್ಕೆ ತಮ್ಮ ಅಳಿಯ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್.ಮಂಜುನಾಥ್ ಅವರನ್ನು ಸೇರ್ಪಡೆ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ಸುಕರಾಗಿದ್ದಾರೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಸುಳಿವು ನೀಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ತಾವು ವಿರಮಿಸುವುದಿಲ್ಲ ಎಂದು ಗೌಡರು ಪಣತೊಟ್ಟಿದ್ದಾರೆ.

ರಾಮನಗರ ಜಿಲ್ಲೆಯಲ್ಲಿ ನಿನ್ನೆ ಮಂಗಳವಾರ ಡಾ.ಮಂಜುನಾಥ್ ಪರ ಪ್ರಚಾರ ನಡೆಸಿದ ಅವರು, ಮಂಜುನಾಥ್ ಅವರು ತಮ್ಮ ವೈದ್ಯ ವೃತ್ತಿಯಲ್ಲಿ ಎಂಟು ಲಕ್ಷಕ್ಕೂ ಅಧಿಕ ಆಪರೇಷನ್ ಮಾಡಿ ಬಡವರಿಗೆ ಸಹಾಯ ಮಾಡಿದ್ದಾರೆ, ಹೀಗಾಗಿ ರಾಷ್ಟ್ರೀಯ ನಾಯಕರು ಅವರನ್ನು ತಮ್ಮ ಸಂಪುಟದಲ್ಲಿ ಸೇರಿಸಬೇಕೆಂದು ಬಯಸಿದ್ದಾರೆ. ನಾನು ಇಲ್ಲಿನ ಜನರನ್ನು ಮತ ಚಲಾಯಿಸುವಂತೆ ಒತ್ತಾಯಿಸುತ್ತೇನೆ ಎಂದು ಕೇಳಿಕೊಂಡರು.

ಕೇಂದ್ರದಲ್ಲಿ ಮೋದಿ ಮತ್ತು ಶಾ ಅವರು ಡಾ ಮಂಜುನಾಥ್ ಅವರ ಶಕ್ತಿಯನ್ನು ಗುರುತಿಸಿ ಬೆಂಗಳೂರು ಗ್ರಾಮಾಂತರದಿಂದ ಬಿಜೆಪಿ ಟಿಕೆಟ್‌ನಲ್ಲಿ ಸ್ಪರ್ಧಿಸಲು ಅವಕಾಶ ನೀಡುವಂತೆ ಕೇಳಿಕೊಂಡರು. ಮಂಜುನಾಥ್ ಅವರ ಸೇವೆ ರಾಷ್ಟ್ರಮಟ್ಟದಲ್ಲಿ ಅಗತ್ಯವಿದೆ ಎಂದು ಬಿಜೆಪಿ ನಾಯಕರು ಹೇಳಿದ್ದರು. ಇದು ಅನಿವಾರ್ಯ ಎಂದು ಹೇಳಿದರು ಎಂದರು. ಮಂಜುನಾಥ್ ಅವರು 16 ವರ್ಷಗಳಿಂದ ಬೆಂಗಳೂರಿನ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸಾಕಷ್ಟು ಗುರುತರ ಕೆಲಸ ಮಾಡಿದ್ದಾರೆ ಎಂದರು.

'ಬಿಎಸ್ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ, ಜಯದೇವದಲ್ಲಿ ಡಾ.ಮಂಜುನಾಥ್‌ಗೆ ಅವಧಿ ವಿಸ್ತರಿಸಿದ್ದರು. ಮಂಜುನಾಥ್ ಅವರು ಆಸ್ಪತ್ರೆಯಲ್ಲಿ ಹಾಸಿಗೆಯ ಸಾಮರ್ಥ್ಯವನ್ನು ಹೆಚ್ಚಿಸಿದರು ಎಂದು ತಮ್ಮ ಅಳಿಯ ಮಾಡಿರುವ ಕೆಲಸ ಬಗ್ಗೆ ಹೇಳಿ ಕ್ಷೇತ್ರದ ಮತದಾರರ ಗಮನ ಸೆಳೆಯುವ ಪ್ರಯತ್ನ ಮಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಗೌಡರು. ಇಂತಹ ಭ್ರಷ್ಟ ಸರ್ಕಾರವನ್ನು ರಾಜ್ಯದಿಂದ ಕಿತ್ತೊಗೆಯುವವರೆಗೂ ನಾನು ವಿರಮಿಸುವುದಿಲ್ಲ. ಮೇ 5ರವರೆಗೆ ಕರ್ನಾಟಕದಾದ್ಯಂತ ಸಂಚರಿಸಿ ಮತ ಯಾಚಿಸುತ್ತೇನೆ ಎಂದರು.

ಮೇಕೆದಾಟು ಮಂಜೂರಾತಿ ಸಿಗಲಿದೆ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಪ್ರಧಾನಿ ಮೋದಿ ಜೊತೆಗಿನ ಸಂವಾದವನ್ನು ನೆನಪಿಸಿಕೊಂಡ ಗೌಡರು, ಮೋದಿ ಅವರು ನಮ್ಮ ನೋವನ್ನು ಅರ್ಥಮಾಡಿಕೊಳ್ಳುತ್ತಾರೆ. ಕಾವೇರಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026 : ಚಿನ್ನ ಗೆದ್ದ ಭಾರತದ ಪುರುಷರ ಹಾಕಿ ತಂಡ; ಒಲಿಂಪಿಕ್ಸ್‌ಗೆ ಅರ್ಹತೆ

ಆಸ್ಪತ್ರೆಗೆ ಭೇಟಿ ನೀಡಿ, ಫ್ಲೈದುಬೈ ಹೀರೋ ಸ್ಮಿತ್ ಮಚ್ಚಾರ್ ಹಣೆಗೆ ಮುತ್ತಿಟ್ಟ ದುಬೈ ಕ್ರೌನ್ ಪ್ರಿನ್ಸ್! ಹೇಳಿದ್ದೇನು?

ವಿಂಡೀಸ್ ವಿರುದ್ಧದ ಪಂದ್ಯದಲ್ಲಿ 9ನೇ ಶತಕ ಸಿಡಿಸಿದ KL Rahul: 10,000 ಅಂತಾರಾಷ್ಟ್ರೀಯ ರನ್!

ಅಂತಿಮ ಹಂತದಲ್ಲಿ 21 ಚಿನ್ನದ ಪದಕಗಳು: 2026 ರ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಒಟ್ಟು 85 ಪದಕ!

Asian Games 2026: ಪಾಕಿಸ್ತಾನ ಬಗ್ಗು ಬಡಿದ ಭಾರತಕ್ಕೆ ಮತ್ತೊಂದು ಚಿನ್ನ: ಗೋಲ್ಡ್ ಗೆದ್ದ ಕುಸ್ತಿಪಟು ಅಮನ್!