ಅಮಿತ್ ಶಾ 
ರಾಜಕೀಯ

ಅಮಿತ್ ಶಾ ತುಮಕೂರು ರ‍್ಯಾಲಿ ರದ್ದು: ಕಾಂಗ್ರೆಸ್‌ನತ್ತ ಕಾಡುಗೊಲ್ಲರ ಒಲವು!

ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಬುಧವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದುಳಿದ ವರ್ಗಗಳ ಸಮಾವೇಶವನ್ನು ರದ್ದುಗೊಳಿಸಲಾಗಿದೆ.

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಕಿಬ್ಬನಹಳ್ಳಿ ಕ್ರಾಸ್‌ನಲ್ಲಿ ಬುಧವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹಿಂದುಳಿದ ವರ್ಗಗಳ ಸಮಾವೇಶವನ್ನು ರದ್ದುಗೊಳಿಸಲಾಗಿದೆ.

ಅಮಿತ್ ಶಾ ಅವರು ತುಮಕೂರಿನಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪರ ಪ್ರಚಾರ ಮಾಡಬೇಕಿತ್ತು. 2019 ರಲ್ಲಿ, ಪ್ರಚಾರದ ಕೊನೆಯ ದಿನದಂದು ಹಾಲಿ ಸಂಸದ ಜಿ ಎಸ್ ಬಸವರಾಜು ಅವರ ರೋಡ್ ಶೋನಲ್ಲಿ ಅಮಿತ್ ಶಾ ಭಾಗವಹಿಸಿದ್ದರು. ಈ ಬಾರಿ ಸಿದ್ಧತೆ ನಡೆದಿದ್ದರೂ ಸಮಯದ ಕೊರತೆಯಿಂದ ರ‍್ಯಾಲಿ ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

"ನವದೆಹಲಿಯಲ್ಲಿ ನಿರ್ಧಾರ ಕೈಗೊಂಡಿದ್ದರಿಂದ ಅಮಿತ್ ಶಾ ಅವರ ರ‍್ಯಾಲಿಯನ್ನು ಏಕೆ ರದ್ದುಗೊಳಿಸಲಾಯಿತು ಎಂಬುದು ನಮಗೆ ತಿಳಿದಿಲ್ಲ" ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ.

ಬೆಂಗಳೂರಿನಲ್ಲಿ ರೋಡ್ ಶೋ ಬಳಿಕ ಕೇರಳಕ್ಕೆ ತೆರಳಿದ ಅಮಿತ್ ಶಾ, ಬುಧವಾರ ಪಕ್ಷದ ಅಲಪ್ಪುಳ ಲೋಕಸಭಾ ಅಭ್ಯರ್ಥಿ ಶೋಭಾ ಸುರೇಂದ್ರನ್ ಪರ ಪ್ರಚಾರ ನಡೆಸಿದರು. ರಾಹುಲ್ ಗಾಂಧಿಯವರ ಆಪ್ತ, ಹಿರಿಯ ಕಾಂಗ್ರೆಸ್ ನಾಯಕ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ(ಸಂಘಟನೆ) ಕೆಸಿ ವೇಣುಗೋಪಾಲ್ ಅವರನ್ನು ಸೋಲಿಸುವ ಸವಾಲನ್ನು ಶಾ ಸ್ವೀಕರಿಸಿದ್ದಾರೆ. ಆಲಪ್ಪುಳದಲ್ಲೂ ಶುಕ್ರವಾರ ಮತದಾನ ನಡೆಯಲಿದೆ.

ತುಮಕೂರಿನಲ್ಲಿ, ಹಿಂದುಳಿದ ವರ್ಗದ ಸಮುದಾಯದ ಸದಸ್ಯರು, ವಿಶೇಷವಾಗಿ ಕಾಡುಗೊಲ್ಲರು, ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರು ನೀಡಿದ ಭರವಸೆಯಂತೆ ಸಮುದಾಯವನ್ನು ಎಸ್‌ಟಿ ಸೇರಿಸಲು ಅಮಿತ್ ಶಾ ಅವರನ್ನು ಒಪ್ಪಿಸುತ್ತಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಅವರಿಗೆ ನಿರಾಸೆಯಾಗಿದೆ.

ತುಮಕೂರಿನಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿದ ಕಾಡುಗೊಲ್ಲ ಸಮಾಜದ ಮುಖಂಡರ ಗುಂಪು ಕಾಂಗ್ರೆಸ್‌ಗೆ ಬೆಂಬಲ ಘೋಷಿಸಿದೆ. ದೇವೇಗೌಡರಿಂದ ನಾವು ಇದನ್ನು ನಿರೀಕ್ಷಿಸಿರಲಿಲ್ಲ. ಆದರೆ ಅಮಿತ್ ಶಾ ಅವರು ನಮ್ಮ ಸಮುದಾಯವನ್ನು ಎಸ್‌ಟಿ ಸೇರಿಸುವ ಬಗ್ಗೆ ಘೋಷಣೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇವೆ ಎಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಮದ್ದನಕುಂಟೆಯ ಕಾಡುಗೊಲ್ಲ ವೆಲ್‌ಫೇರ್ ಅಸೋಸಿಯೇಷನ್‌ ನಿರ್ದೇಶಕ ಡಿಟಿ ಸಂಪತ್ ಕುಮಾರ್ ಹೇಳಿದರು.

ಕರ್ನಾಟಕ ರಾಜ್ಯ ಕಾಡುಗೊಲ್ಲ ಬೂದಕಟ್ಟು ಮಹಾಸಭಾದ ಅಧ್ಯಕ್ಷ ಡಾ.ದೊಡ್ಡಮಲ್ಲಯ್ಯ ಮಾತನಾಡಿ, ಈ ಸಮುದಾಯವು ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Venezuela Earth quake: 40 ಸೆಕೆಂಡ್​​ ನಲ್ಲಿ 2 ಬಾರಿ ಭೂಕಂಪ, ಭಾರೀ ವಿನಾಶ, ಕನಿಷ್ಠ 32 ಸಾವು, ಸಾವಿನ ಸಂಖ್ಯೆ 1 ಲಕ್ಷಕ್ಕೇರುವ ಸಾಧ್ಯತೆ!

ಭಾರೀ ಭೂಕಂಪಕ್ಕೆ ವೆನೆಜುವೆಲಾ ತತ್ತರ: ಮೃತರ ಕುಟುಂಬಗಳಿಗೆ ಪ್ರಧಾನಿ ಮೋದಿ ಸಂತಾಪ, ಮಾನವೀಯ ನೆರವಿಗೆ ಭಾರತ ಸಜ್ಜು..!

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: 1975ರ ಕರಾಳ ಅಧ್ಯಾಯ ಸ್ಮರಿಸಿದ ಪ್ರಧಾನಿ ಮೋದಿ..!

ಕೋಲ್ಕತ್ತಾದಲ್ಲಿ ಭೀಕರ ದುರಂತ: ನಿರ್ಮಾಣ ಹಂತದ ಗೋದಾಮು ಕುಸಿದು 5 ಕಾರ್ಮಿಕರ ಸಾವು, 20 ಮಂದಿ ರಕ್ಷಣೆ; TMC ಅವಧಿಯ ಯೋಜನೆಗಳಿಗೆ CM ಸುವೇಂದು ಬ್ರೇಕ್..!

ಇರಾನ್ ಸಂಘರ್ಷಕ್ಕೆ $70 ಬಿಲಿಯನ್ ತುರ್ತು ನಿಧಿ ಕೋರಿದ ಅಮೆರಿಕಾ: ಟ್ರಂಪ್ ವಿರುದ್ಧ ಸಿಡಿದೆದ್ದ Republican senator, ಸ್ವಪಕ್ಷದಲ್ಲೇ ಭಿನ್ನಮತ ಸ್ಫೋಟ..!