ಬಿಜೆಪಿ-ಕಾಂಗ್ರೆಸ್ ಜಾಹೀರಾತು 
ರಾಜಕೀಯ

ಲೋಕಸಭೆ ಚುನಾವಣೆ 2024: 'ಚೊಂಬು' ಜಾಹೀರಾತಿಗೆ ಕೆರಳಿದ ಬಿಜೆಪಿ, ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು

ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಸುಳ್ಳು ಮತ್ತು ಅವಹೇಳನಕಾರಿ ಜಾಹಿರಾತು ನೀಡಿದೆ’ ಎಂದು ಕೆಪಿಸಿಸಿ ಮತ್ತು ಅದರ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಬೆಂಗಳೂರು: ಕನ್ನಡ ಮತ್ತು ಇಂಗ್ಲಿಷ್‌ ಪತ್ರಿಕೆಗಳ ಮುಖಪುಟದಲ್ಲಿ ಬಿಜೆಪಿ ಬಗ್ಗೆ ಸುಳ್ಳು ಮತ್ತು ಅವಹೇಳನಕಾರಿ ಜಾಹಿರಾತು ನೀಡಿದೆ’ ಎಂದು ಕೆಪಿಸಿಸಿ ಮತ್ತು ಅದರ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು ನೀಡಿದೆ.

ಈ ಜಾಹಿರಾತು ನೀಡಿರುವ ಡಿ.ಕೆ.ಶಿವಕುಮಾರ್‌, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ವಿರುದ್ಧ ತಕ್ಷಣವೇ ಎಫ್‌ಐಆರ್‌ ದಾಖಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದೆ.

ಕಾಂಗ್ರೆಸ್‌ ಪಕ್ಷ ಚೊಂಬು ಹೆಸರಿನಲ್ಲಿ ಜಾಹೀರಾತು ನೀಡಿದೆ. ಇದು ಸುಳ್ಳು ಮಾಹಿತಿಗಳಿಂದ ಕೂಡಿರುವ ಮಾನಹಾನಿಕಾರ ಜಾಹಿರಾತು. ವಂಚಿಸಲಾಗಿದೆ ಮತ್ತು ಮೋಸ ಮಾಡಲಾಗಿದೆ ಎಂಬುದಕ್ಕೆ ಆಡು ಮಾತಿನಲ್ಲಿ ಈ ಪದ ಬಳಸಲಾಗುತ್ತದೆ. ವಿಧಾನಸಭಾ ಚುನಾವಣೆಯಲ್ಲೂ ಇದೇ ರೀತಿ ಸುಳ್ಳು ಮಾಹಿತಿಗಳನ್ನು ಜಾಹಿರಾತುಗಳ ಮೂಲಕ ಹರಡಿತ್ತು. ಈ ಜಾಹಿರಾತಿಗಳಿಗೆ ಸಂಬಂಧಿಸಿದ ಪ್ರಕರಣ ಹೈಕೋರ್ಟ್‌ನಲ್ಲಿದೆ. ಇದೀಗ ಕಾಂಗ್ರೆಸ್‌ ಮತ್ತೆ ತನ್ನ ಹಳೇ ಚಾಳಿ ಆರಂಭಿಸಿದೆ ಎಂದು ದೂರಿನಲ್ಲಿ ತಿಳಿಸಿದೆ.

ಕಾಂಗ್ರೆಸ್‌ ಪಕ್ಷ ಸುಳ್ಳು ಮಾಹಿತಿ ಒಳಗೊಂಡ ಜಾಹಿರಾತು ನೀಡುವುದನ್ನು ತಡೆಯಬೇಕು. ಕಾಂಗ್ರೆಸ್‌ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದೆ.

ಬಿಜೆಪಿ ವಿರುದ್ಧ ಕಾಂಗ್ರೆಸ್ ಪಕ್ಷ ನೀಡಿದ್ದ ಚೊಂಬು ಜಾಹೀರಾತು ನಂತರ ರಾಜ್ಯದಲ್ಲಿ ಜಾಹೀರಾತು ಸಮರಕ್ಕೆ ಕಾರಣವಾಗಿತ್ತು. ಕಾಂಗ್ರೆಸ್​​ನ ಚೊಂಬು ಜಾಹೀರಾತಿನಿಂದ ಕೆರಳಿದ್ದ ಬಿಜೆಪಿ, 2013ರಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚೊಂಬು ಹಿಡಿದುಕೊಂಡು ಬಯಲುಶೌಚಕ್ಕೆ ಹೋಗುತ್ತಿರುವ ಮತ್ತು 2023ರಲ್ಲಿ ಚೊಂಬು ಹಿಡಿದುಕೊಂಡು ಶೌಚಾಲಯಕ್ಕೆ ಹೋಗುತ್ತಿರುವ ಎಡಿಟೆಡ್ ಚಿತ್ರವನ್ನು ಟ್ವೀಟ್ ಮಾಡಿ ‘ಇಷ್ಟೇ ವ್ಯತ್ಯಾಸ’ ಎಂದು ವ್ಯಂಗ್ಯವಾಡಿತ್ತು.

ನಂತರ ಉಭಯ ಪಕ್ಷಗಳ ಜಾಹೀರಾತು ಸಮರ ಮುಂದುವರಿದಿದ್ದು, ‘ಕಾಂಗ್ರೆಸ್ ಡೇಂಜರ್’ ಎಂಬ ಜಾಹೀರಾತನ್ನು ಬಿಜೆಪಿ ನೀಡಿತ್ತು. ಬಳಿಕ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಜನತೆ ಕೈಗೆ ಚಿಪ್ಪು ನೀಡಲಾಗಿದೆ ಎಂದು ಜಾಹೀರಾತು ನೀಡಿತ್ತು. ನಂತರ ಕಾಂಗ್ರೆಸ್ ಪಿಕ್​ಪಾಕೆಟ್ ಮಾಡುತ್ತಿದೆ ಎಂದು ಜಾಹೀರಾತು ನೀಡಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

SCROLL FOR NEXT