ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸಿದ್ದರಾಮನಹುಂಡಿ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಮತ ಚಲಾಯಿಸಿದರು. 
ರಾಜಕೀಯ

ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ, ದೇವೇಗೌಡರ ಕಣ್ಣೀರು ಕೃತಕ: ತವರಿನಲ್ಲಿ ಸಿಎಂ ಸಿದ್ದರಾಮಯ್ಯ ಮತ ಚಲಾವಣೆ

ಮೈಸೂರು: ಲೋಕಸಭೆ ಚುನಾವಣೆ 2024ರ 2ನೇ ಹಂತದ ಮತದಾನವಾದ ಇಂದು ಏಪ್ರಿಲ್ 26ರ ಶುಕ್ರವಾರ ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಬಿರುಬಿಸಿಲು ಇರುವುದರಿಂದ ಬೆಳಗ್ಗೆಯೇ ಮತದಾರರು ತಮ್ಮ ಹಕ್ಕು ಚಲಾಯಿಸಲು ಉತ್ಸುಕತೆ ತೋರಿಸುತ್ತಿದ್ದಾರೆ. ಸಂಜೆ 6 ಗಂಟೆಯ ತನಕ ಮತದಾನ ಮಾಡಲು ಅವಕಾಶವಿದೆ.

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ನಗರ ಸೇರಿ ಇಂದು 14 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ತಮ್ಮ ತವರು ಜಿಲ್ಲೆ ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ತಮ್ಮ ಹಕ್ಕು ಚಲಾಯಿಸಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ, ಕರ್ನಾಟಕದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂದರು.

ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜನ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿದ್ದಾರೆ. ಹಾಗೆಯೇ ಈ ಬಾರಿಯ ಚುನಾವಣೆಯಲ್ಲಿಯೂ ಜನ ಆಶೀರ್ವಾದ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹಾಗೂ ಮೊನ್ನೆ 2ನೇ ಹಂತದ ಚುನಾವಣೆ ಇರುವ ಕ್ಷೇತ್ರಗಳಲ್ಲಿ ಪ್ರಚಾರ ಮಾಡಿದೆ. ಈ ವೇಳೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿದೆ. ಬೀದರ್ ಹಾಗೂ ಕಲಬುರಗಿ ಎರಡು ಕ್ಷೇತ್ರವನ್ನು ಗೆಲ್ಲುತ್ತೇವೆ ಎಂದರು. 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎಷ್ಟು ಸ್ಥಾನ ಗೆಲ್ಲುತ್ತೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗುಪ್ತ ಮತದಾನವಾಗಿದ್ದರಿಂದ ಎಷ್ಟು ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂಬುದನ್ನು ಹೇಳೋಕೆ ಆಗಲ್ಲ. ಆದರೆ ಹೆಚ್ಚು ಸ್ಥಾನದಲ್ಲಿ ಗೆಲ್ಲುತ್ತೇವೆ. ಚಾಮರಾಜನಗರ ಹಾಗೂ ಮೈಸೂರಿನಲ್ಲಿಯೂ ನಾವು ಗೆಲ್ಲುತ್ತೇವೆ ಎಂದರು.

ಜೆಡಿಎಸ್ ವರಿಷ್ಠ ದೇವೇಗೌಡರ ಕಣ್ಣೀರು ಕೃತಕವಾದದ್ದು. ರಾಜಕಾರಣ ವಿಚಾರದಲ್ಲಿ ಕಣ್ಣೀರು ಬರಬಾರದು. ಅದರೆ ದೇವೇಗೌಡರ ಕುಟುಂಬ ಯಾವಾಗಲೂ ಕಣ್ಣೀರು ಹಾಕುತ್ತಾರೆ. ಇದೆಲ್ಲ ಕೃತಕವಾದದ್ದು ಎಂದು ಸಹ ವಾಗ್ದಾಳಿ ನಡೆಸಿದರು.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಬೆಳಗ್ಗೆ 11 ಗಂಟೆಗೆ ಶೇಕಡಾ 25.01 ರಷ್ಟು ಮತದಾನವಾಗಿದೆ. ಗ್ರಾಮಾಂತರ ಪ್ರದೇಶಗಳಲ್ಲಿ ಅದರಲ್ಲೂ ಮಹಿಳೆಯರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗಳಿಗೆ ಬಂದು ತಮ್ಮ ಹಕ್ಕು ಚಲಾಯಿಸಿರುವುದು ಕಂಡುಬಂತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT