ಡಾ. ಜಿ. ಪರಮೇಶ್ವರ್
ಡಾ. ಜಿ. ಪರಮೇಶ್ವರ್ 
ರಾಜಕೀಯ

ಚುನಾವಣೆ ನಡೆಯುತ್ತಿರುವ 14 ಸ್ಥಾನಗಳಲ್ಲಿ ಕಾಂಗ್ರೆಸ್ ಬಹುಮತ ಗಳಿಸಲಿದೆ- ಡಾ. ಜಿ.ಪರಮೇಶ್ವರ್

Nagaraja AB

ತುಮಕೂರು: ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದಲ್ಲಿ ನಡೆಯುತ್ತಿರುವ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದ್ದಾರೆ. ಮತದಾನ ಮಾಡಿದ ನಂತರ ಪಿಟಿಐ ಜೊತೆಗೆ ಮಾತನಾಡಿದ ಅವರು, ಈ ದೇಶದ ಪ್ರತಿಯೊಂದು ವಿದ್ಯಮಾನಗಳು ಮತ್ತು ಪ್ರಜಾಪ್ರಭುತ್ವ, ಸಾಂವಿಧಾನಿಕ ಸಂಸ್ಥೆಗಳಲ್ಲಿನ ಹಸ್ತಕ್ಷೇಪವನ್ನು ಜನರು ಗಮನಿಸುತ್ತಿದ್ದಾರೆ ಎಂದರು.

ಕೇಂದ್ರ ಸರಕಾರ ದೇಶದಲ್ಲಿ ಒಕ್ಕೂಟ ವ್ಯವಸ್ಥೆಗೆ ಹೇಗೆ ಧಕ್ಕೆ ತಂದಿದೆ ಎಂಬುದನ್ನು ರಾಜ್ಯದ ಮತದಾರರು ನೋಡಿದ್ದು, ರಾಜ್ಯಕ್ಕೆ ನೀಡಬೇಕಾದ ಪರಿಹಾರವನ್ನು ನೀಡಲು ಅವರಿಗೆ ಸಾಧ್ಯವಾಗುತ್ತಿಲ್ಲ. ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಭಾವಿಸಿರುವುದಾಗಿ ಹೇಳಿದರು.

ಕರ್ನಾಟಕದಲ್ಲಿ ಮೊದಲ ಹಂತದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಉಡುಪಿ-ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಕ್ಷೇತ್ರಗಳಿವೆ. ಉಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದ ಚುನಾವಣೆ ಮೇ 7 ರಂದು ನಡೆಯಲಿದೆ.

SCROLL FOR NEXT