ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಎಚ್.ಡಿಕೆ
ಸಿದ್ದರಾಮಯ್ಯ, ಶಿವಕುಮಾರ್ ಮತ್ತು ಎಚ್.ಡಿಕೆ 
ರಾಜಕೀಯ

ಘಟಾನುಘಟಿಗಳಿಗೆ ಪ್ರತಿಷ್ಠೆಯ ಕದನ: ಹಳೆ ಮೈಸೂರು ಭಾಗದತ್ತ ಎಲ್ಲರ ಚಿತ್ತ!

Shilpa D

ಮೈಸೂರು: ಏಪ್ರಿಲ್ 26 ರಂದು 14 ಲೋಕಸಭಾ ಸ್ಥಾನಗಳಿಗೆ ಮತದಾನ ನಡೆಯಲಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಡಿ.ಕೆ.ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಈ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಕಾಂಗ್ರೆಸ್, ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ - ದಕ್ಷಿಣ ಕರ್ನಾಟಕದ ಹಳೇ ಮೈಸೂರು ಪ್ರದೇಶದಲ್ಲಿ ಬಹುಪಾಲು ಸ್ಥಾನಗಳನ್ನು ಪಡೆಯಲು ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮ್ಮ ತವರು ಮೈಸೂರು-ಕೊಡಗು, ಚಾಮರಾಜನಗರ, ಮಂಡ್ಯ ಸೇರಿದಂತೆ ಹೆಚ್ಚು ಕ್ಷೇತ್ರಗಳ ಮೇಲೆ ಹಿಡಿತ ಸಾಧಿಸಲು ಮುಂದಾಗಿದ್ದಾರೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಮಾತ್ರ ಗೆದ್ದಿತ್ತು. ಈ ಬಾರಿ ಹೆಚ್ಚಿನ ಸಂಖ್ಯೆಯ ಸ್ಥಾನ ಗೆಲ್ಲಬೇಕೆಂಬ ಕಾರಣದಿಂದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಹೆಚ್ಚಿನ ಸ್ಥಾನ ಗೆಲ್ಲಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಮುಂದೆ ಒಕ್ಕಲಿಗರು ಜೆಡಿಎಸ್ ಜೊತೆ ಇಲ್ಲ ಎಂಬ ಬಲವಾದ ಸಂದೇಶವನ್ನು ರವಾನಿಸಲು ಮಂಡ್ಯದಲ್ಲಿ ಇವರಿಬ್ಬರು ಈಗ ಬದ್ಧ ಪ್ರತಿಸ್ಪರ್ಧಿ ಕುಮಾರಸ್ವಾಮಿಗೆ ಸವಾಲು ಒಡ್ಡಿದ್ದಾರೆ.

ಮೈಸೂರು-ಕೊಡಗುನಿಂದ ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. 10 ವರ್ಷಗಳ ನಂತರ ಗದ್ದುಗೆ ಹಿಡಿಯಲು, ಸಿದ್ದರಾಮಯ್ಯ ಅವರು 47 ವರ್ಷ ವಯಸ್ಸಿನ ಒಕ್ಕಲಿಗೆ ಕಾಂಗ್ರೆಸ್ಸಿನಿಂದ ಎಂ.ಲಕ್ಷ್ಮಣ ಅವರನ್ನು ಕಣಕ್ಕಿಳಿಸಿದರು.

ಚಾಮರಾಜನಗರದಲ್ಲಿ ಮಹದೇವಪ್ಪ ಅವರ ಪುತ್ರ ಸುನೀಲ್ ಬೋಸ್, ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಎಸ್ ಬಾಲರಾಜ್ ಅವರನ್ನು ಕಣಕ್ಕಿಳಿಸುತ್ತಿರುವುದರಿಂದ ಮಗನನ್ನು ಗೆಲ್ಲಿಸುವುದು ಪ್ರತಿಷ್ಠೆಯ ವಿಷಯವಾಗಿದೆ. 2019 ರ ಚುನಾವಣೆಯಲ್ಲಿ ಬಿಜೆಪಿಯ ವಿ.ಶ್ರೀನಿವಾಸ ಪ್ರಸಾದ್ ಅವರು ಗೆದ್ದಿದ್ದ ಸ್ಥಾನವನ್ನು ವಶಪಡಿಸಿಕೊಳ್ಳಲು ಕಾಂಗ್ರೆಸ್ ಸಿದ್ಧವಾಗಿದೆ.

ಹೃದ್ರೋಗ ತಜ್ಞ ಹಾಗೂ ಎಚ್ ಡಿ ದೇವೇಗೌಡರ ಅಳಿಯ ಡಾ ಸಿ.ಎನ್ ಮಂಜುನಾಥ್ ಅವರು ಶಿವಕುಮಾರ್ ಅವರ ಸಹೋದರ ಡಿ ಕೆ ಸುರೇಶ್ ಅವರೊಂದಿಗೆ ಕಣಕ್ಕಿಳಿದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲೂ ಬಿಜೆಪಿ-ಜೆಡಿಎಸ್ ಕಣ್ಣಿಟ್ಟಿದೆ. ಏತನ್ಮಧ್ಯೆ, ಹಾಸನದಿಂದ ಹಾಲಿ ಜೆಡಿಎಸ್ ಸಂಸದ, ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ಅವರು ಎರಡು ದಶಕಗಳಿಂದ ಜೆಡಿಎಸ್ ಕುಟುಂಬದ ಭದ್ರಕೋಟೆಯಾಗಿ ಸ್ಥಾನವನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಹಾಗಾಗಿ ಎಲ್ಲರ ಕಣ್ಣು ಹಳೆ ಮೈಸೂರಿನತ್ತ ನೆಟ್ಟಿದ್ದು, ಮತದಾರರು ಯಾರಿಗೆ ಕಡಿವಾಣ ಹಾಕುತ್ತಾರೆ ಎಂಬ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

SCROLL FOR NEXT