ರಾಹುಲ್ ಗಾಂಧಿ 
ರಾಜಕೀಯ

ಲೋಕಸಭಾ ಚುನಾವಣೆ: ವಿಜಯಪುರ, ಬಳ್ಳಾರಿಯಲ್ಲಿ ರಾಹುಲ್ ಗಾಂಧಿ ಚುನಾವಣಾ ಪ್ರಚಾರ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಿಜಯಪುರ ಮತ್ತು ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ವಿಜಯಪುರ ಮತ್ತು ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷ ತಿಳಿಸಿದೆ.

ಇಂದು ಬೆಳಗ್ಗೆ 11ಕ್ಕೆ ದೆಹಲಿಯಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಆಗಮಿಸುವ ರಾಹುಲ್ ಗಾಂಧಿ, ಬಳಿಕ ವಿಜಯಪುರಕ್ಕೆ ಹೆಲಿಕಾಪ್ಟರ್ ನಲ್ಲಿ ಬರಲಿದ್ದಾರೆ. ಮಧ್ಯಾಹ್ನ 12.30 ಸೋಲಾಪುರ ರಸ್ತೆಯಲ್ಲಿರುವ ಬಿಎಲ್ ಡಿಇ ಹೊಸ ಕ್ಯಾಂಪಸ್ ನಲ್ಲ ನಡೆಯಲಿರುವ ಚುನಾವಣಾ ರ್‍ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಸಮಾವೇಶದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನರು ಭಾಗವಹಿಸುವ ನಿರೀಕ್ಷೆಯಿದೆ. ಸಮಾವೇಶಕ್ಕಾಗಿ ಬೃಹತ್ ಪೆಂಡಾಲ್ ಹಾಕಲಾಗಿದೆ. ಕೂರಲು ಆಸನದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.

ನಂತರ ಮಧ್ಯಾಹ್ನ 3.30ಕ್ಕೆ ಆರಂಭವಾಗಲಿರುವ ಎರಡನೇ ಸಾರ್ವಜನಿಕ ಸಭೆಗಾಗಿ ಬಳ್ಳಾರಿಗೆ ತೆರಳಲಿದ್ದಾರೆ. ಮೇ 7 ರಂದು ಚುನಾವಣೆ ರಾಜ್ಯದ 14 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT