ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್ 
ರಾಜಕೀಯ

ಬರ ಪರಿಹಾರ: ನಾಳೆ ಕೇಂದ್ರದ ವಿರುದ್ಧ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

Lingaraj Badiger

ಬೆಂಗಳೂರು: ಬರ ಪರಿಹಾರ ವಿಚಾರದಲ್ಲಿ ಮಲತಾಯಿ ಧೋರಣೆ ತೋರುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೆ ಭಾನುವಾರ ಬೆಳಗ್ಗೆ ಪ್ರತಿಭಟನೆಗೆ ನಡೆಸಲು ನಿರ್ಧರಿಸಿದೆ.

ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ. ಮಾತ್ರ ಬಿಡುಗಡೆ ಮಾಡಿದೆ. ನಾವು ಕೇಳಿದ್ದು 18, 172 ಕೋಟಿ ರೂಪಾಯಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅಲ್ಲದೆ ಅತ್ಯಂತ ಕಡಿಮೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರದ ನಡೆ ವಿರೋಧಿಸಿ ಭಾನುವಾರ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಾಳೆ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಕೇಂದ್ರದ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಬಹಳ ಕಡಿಮೆ ಬರ ಪರಿಹಾರ ಕೊಟ್ಟಿದ್ದಾರೆಂದು ಮಹಾತ್ಮ ಗಾಂಧಿ ಪ್ರತಿಮೆ ಎದುರು ನಮ್ಮ ಪಕ್ಷದ ನಾಯಕರು ಪ್ರತಿಭಟನೆ ಹಮ್ಮಿಕೊಂಡಿದ್ದೇವೆ. ನಾನೂ ಭಾಗವಹಿಸುತ್ತೇನೆ ಎಂದರು.

223 ತಾಲೂಕುಗಳಲ್ಲಿ ಬರವಿದೆ. 120 ವರ್ಷಗಳ ಇತಿಹಾಸದಲ್ಲಿ ಹೀಗಾಗಿರಲಿಲ್ಲ. ಬೆಂಗಳೂರಿಗೆ ನೀರಿನ ಬವಣೆ ಹೆಚ್ಚಾಗಿತ್ತು. ಆದರೂ ಬವಣೆಯಾಗದಂತೆ ನಿರ್ವಹಿಸುತ್ತಿದ್ದೇವೆ. 56.9 ಲಕ್ಷ ಹೆಕ್ಟೇರ್ ಬೆಳೆ ನಷ್ಟವಾಗಿತ್ತು. ಎನ್‌ಡಿಆರ್‌ಎಫ್ ನಾರ್ಮ್ಸ್ ಪ್ರಕಾರ ಡಿಕ್ಲೇರ್ ಮಾಡಿದ್ದೆವು. ಆಗಸ್ಟ್ನಲ್ಲೇ ಕೇಂದ್ರದ ಟೀಂ ಬಂದು ಪರಿಶೀಲಿಸಿತ್ತು. ನಾವು ಕಂಪ್ಲೀಟ್ ದಾಖಲೆ ಕೇಂದ್ರಕ್ಕೆ ಕೊಟ್ಟಿದ್ದೇವೆ. ಇಷ್ಟಾದರೂ ಬರ ಪರಿಹಾರವನ್ನು ಬಿಡುಗಡೆ ಮಾಡಿಲ್ಲ ಎಂದು ಡಿಕೆ ಶಿವಕುಮಾರ್ ಕಿಡಿಕಾರಿದರು.

SCROLL FOR NEXT