ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜಕೀಯ

ಲೋಕಸಭೆ ಚುನಾವಣೆ 2024: ನಾನು ಬಸವಣ್ಣನವರ ಅನುಯಾಯಿ- ಮುಖ್ಯಮಂತ್ರಿ ಸಿದ್ದರಾಮಯ್ಯ

Ramyashree GN

ಕಲಬುರಗಿ: ನಾನು 12ನೇ ಶತಮಾನದ ಸಮಾಜ ಸುಧಾರಕ ಬಸವಣ್ಣನವರ ಅನುಯಾಯಿಯಾಗಿದ್ದು, ಸಂತರ ತತ್ವಗಳನ್ನು ಬದ್ಧತೆಯಿಂದ ಅನುಷ್ಠಾನಗೊಳಿಸುತ್ತಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ತಿಳಿಸಿದ್ದಾರೆ.

ಕಲಬುರಗಿಯಲ್ಲಿ ಚುನಾವಣಾ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ವರಿಗೂ ಸಮಬಾಳು ಎಂದು ಹೋರಾಡಿದ ಬಸವಣ್ಣನವರ ಕರ್ಮಭೂಮಿ ಬೀದರ್ ಜಿಲ್ಲೆಯಾಗಿದೆ. ಬಸವಣ್ಣನವರ ಬಹುತೇಕ ತತ್ವಗಳನ್ನು ಡಾ. ಬಿಆರ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸೇರಿಸಿದ್ದಾರೆ ಎಂದರು.

'ನಮ್ಮ ಸರ್ಕಾರ ಬಸವಣ್ಣ ಅವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿತು ಮತ್ತು ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಅವರ ಭಾವಚಿತ್ರವನ್ನು ಹಾಕಲು ಆದೇಶ ನೀಡಿದೆ. ಬಸವಣ್ಣನವರ ಅನುಯಾಯಿಗಳೆಂದು ಹೇಳಿಕೊಂಡು ಮುಖ್ಯಮಂತ್ರಿಗಳಾಗಿದ್ದ ಬಿಎಸ್ ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅವರು ಬಸವಣ್ಣನವರನ್ನು ರಾಜ್ಯದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದರೇ ಹೇಳಿ' ಎಂದು ಪ್ರಶ್ನಿಸಿದರು.

ನಮ್ಮ ಐದು ಖಾತರಿಗಳು ಬಸವಣ್ಣನವರ ಬಡವರಿಗೆ ಸಹಾಯ ಮಾಡುವ ತತ್ವದಡಿಯಲ್ಲಿವೆ. ಬಡವರಿಗೆ ಅಕ್ಕಿ ನೀಡುತ್ತಿದ್ದೇವೆ. ಆದರೆ, ಮೋದಿ ಸರ್ಕಾರ ಉಚಿತ ಅಕ್ಕಿ ಪೂರೈಕೆಗೆ ಅಡ್ಡಿಪಡಿಸಲು ಪ್ರಯತ್ನಿಸಿತು. ಅಂತಹ ವ್ಯಕ್ತಿ ನಿಮಗೆ ಅಧಿಕಾರದಲ್ಲಿ ಇರಬೇಕೇ? ಎಂದು ಪ್ರಶ್ನಿಸಿದರು.

ಕಲ್ಯಾಣ-ಕರ್ನಾಟಕದ ಏಳು ಜಿಲ್ಲೆಗಳ ಯುವಕರಿಗೆ ಉದ್ಯೋಗ ಮತ್ತು ಉನ್ನತ ಶಿಕ್ಷಣ ನೀಡಲು ಸಹಾಯ ಮಾಡಿದ 371 ಜೆ ಕಲಂಗೆ ತಿದ್ದುಪಡಿ ತಂದಿದ್ದಕ್ಕಾಗಿ ಈ ಭಾಗದ ಜನರು ಕಾಂಗ್ರೆಸ್‌ಗೆ, ವಿಶೇಷವಾಗಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೃತಜ್ಞರಾಗಿರಬೇಕು. ಜನರು ಇದನ್ನು ನೆನಪಿನಲ್ಲಿಟ್ಟುಕೊಂಡು ರಾಧಾಕೃಷ್ಣ ದೊಡ್ಡಮನಿ ಅವರಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.

SCROLL FOR NEXT