ಜೆಪಿ.ನಡ್ಡಾ 
ರಾಜಕೀಯ

ಕಾಂಗ್ರೆಸ್ ಸರ್ಕಾರ PFI, SDPI ಪರ ಮೃದು ಧೋರಣೆ ತೋರುತ್ತಿದೆ: ಜೆಪಿ.ನಡ್ಡಾ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಿಎಫ್‌ಐ ಮತ್ತು ಎಸ್‌ಡಿಪಿಐನಂತಹ ಸಂಘಟನೆಗಳ ಕುರಿತು ಮೃದು ಧೋರಣೆ ತೋರುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.

ಹುಮನಾಬಾದ್ (ಬೀದರ್ ಜಿಲ್ಲೆ): ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಿಎಫ್‌ಐ ಮತ್ತು ಎಸ್‌ಡಿಪಿಐನಂತಹ ಸಂಘಟನೆಗಳ ಕುರಿತು ಮೃದು ಧೋರಣೆ ತೋರುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಹೇಳಿದ್ದಾರೆ.

‘ವಿಜಯ ಸಂಕಲ್ಪ’ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತವಿರುವ ಕರ್ನಾಟಕದಲ್ಲಿ ಭಯದ ವಾತಾವರಣವಿದೆ ಎಂದು ಹೇಳಿದರು. ಈ ವೇಳೆ ಬೆಂಗಳೂರಿನ ಕೆಫೆಯಲ್ಲಿ ಇತ್ತೀಚೆಗೆ ನಡೆದ ಬಾಂಬ್ ಸ್ಫೋಟ ಮತ್ತು ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳ ಹತ್ಯೆಯ ಘಟನೆಗಳನ್ನು ಉಲ್ಲೇಖಿಸಿದರು.

ಜನರು ನಿರ್ಭೀತ ಸಮಾಜ ಮತ್ತು ಮಹಾತ್ಮಾ ಗಾಂಧೀಜಿಯವರು ಕನಸು ಕಂಡ ನನಸಾಗಬೇಕಾದರೆ, ಜನರು ಬಿಜೆಪಿಗೆ ಮತ ಹಾಕಬೇಕು. ಭ್ರಷ್ಟಚಾರದಲ್ಲಿ ತೊಡಗಿದ್ದ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಹಲವು ನಾಯಕರು ಭ್ರಷ್ಟಾಚಾರದಲ್ಲಿ ತೊಡಗಿದ್ದಕ್ಕಾಗಿ ಜೈಲಿನಲ್ಲಿದ್ದಾರೆ. ಕೆಲವರು ಜಾಮೀನಿನ ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ನಾಯಕರು ತಮ್ಮ ಭ್ರಷ್ಟಾರಾಕ್ಕಾಗಿ ಭೂಮಿ, ಆಕಾಶ, ಸಮುದ್ರವನ್ನೂ ಬಿಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದರು.

ಇದೇ ವೇಳೆ ಪ್ರಧಾನಿ ಮೋದಿಯವರನ್ನು ಕೊಂಡಾಡಿದರು. ಮೋದಿಯವರ ಸಾಧನೆಗಳನ್ನು ವಿವಿಧ ದೇಶಗಳು ಶ್ಲಾಘಿಸುತ್ತಿವೆ. ಧಾನ್ಯ ಉತ್ಪಾದನೆ, ಔಷಧಗಳು, ಆಟಿಕೆಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ನಾವು ಸ್ವಾವಲಂಬನೆ ಸಾಧಿಸಿದ್ದೇವೆ. ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ನಮ್ಮ ದೇಶವು ಹಲವಾರು ದೇಶಗಳಿಗೆ ಔಷಧಿಗಳು ಮತ್ತು ಲಸಿಕೆಗಳನ್ನು ಪೂರೈಸಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮದ್ದೂರಿನಲ್ಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲಾಠಿಚಾರ್ಜ್; 21 ಮಂದಿ ಬಂಧನ; ಪೊಲೀಸರಿಗೆ ಸಿಎಂ ಖಡಕ್ ಸೂಚನೆ

Mehul Choksi ಹಸ್ತಾಂತರಿಸಿದರೆ, ಮುಂಬೈ ಜೈಲಿನಲ್ಲಿ ವೈದ್ಯಕೀಯ ಆರೈಕೆ, ಹಾಸಿಗೆ, ವೈಯಕ್ತಿಕ ಸ್ಥಳಾವಕಾಶ ವ್ಯವಸ್ಥೆ: ಬೆಲ್ಜಿಯಂಗೆ ಭಾರತ ಭರವಸೆ!

Ramayana: ಸೀತಾ ಪಾತ್ರಕ್ಕೆ Miss Universe India 2025 'ಮಣಿಕಾ' ಆಯ್ಕೆ!

ಮದ್ದೂರಿನಲ್ಲಿ ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ, ನಾಲ್ವರು ಹೋಂಗಾರ್ಡ್​ ಸೇರಿ 8 ಮಂದಿ ಗಾಯ,ಸೆಕ್ಷನ್ 144 ಜಾರಿ

ಜಿಎಸ್‌ಟಿ ಕಡಿತ: ಕಾರು ಪ್ರಿಯರಿಗೆ ಬಂಪರ್, Hyundai India ಬೆಲೆಯಲ್ಲಿ ಭಾರಿ ಇಳಿಕೆ! ಎಷ್ಟು ಅಗ್ಗ ಗೊತ್ತಾ?

SCROLL FOR NEXT