ಪ್ರಧಾನಿ ಮೋದಿ 
ರಾಜಕೀಯ

ಲೋಕಸಭಾ ಚುನಾವಣೆ: ಇಂದು ಬಾಗಲಕೋಟೆ, ಮಹಾರಾಷ್ಟ್ರದಲ್ಲಿ ಪ್ರಧಾನಿ ಮೋದಿ ಪ್ರಚಾರ

ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ನವದೆಹಲಿ: ಲೋಕಸಭೆ ಚುನಾವಣೆಯ ಪ್ರಚಾರವನ್ನು ತೀವ್ರಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಕರ್ನಾಟಕದಲ್ಲಿ ಒಂದು ಮತ್ತು ಮಹಾರಾಷ್ಟ್ರದಲ್ಲಿ ಮೂರು ಸೇರಿದಂತೆ ನಾಲ್ಕು ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಬಾಗಲಕೋಟೆಯಲ್ಲಿ ಮಧ್ಯಾಹ್ನ 12-15ಕ್ಕೆ ಮೊದಲ ಬೃಹತ್ ಸಭೆ ನಡೆಯಲಿದೆ. ಬಾಗಲಕೋಟೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಿ.ಪಿ ಗದ್ದಿಗೌಡ ಮತ್ತು ವಿಜಯಪುರ ಅಭ್ಯರ್ಥಿ ರಮೇಶ್​ ಜಿಗಜಿಣಗಿ ಪರವಾಗಿ ಪ್ರಧಾನಿ ಮತಯಾಚಿಸಲಿದ್ದಾರೆ. ಅಲ್ಲಿಂದ ಮಹಾರಾಷ್ಟ್ರಕ್ಕೆ ತೆರಳಿ ಮಧ್ಯಾಹ್ನ 2:15ಕ್ಕೆ ಸೊಲ್ಲಾಪುರದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅಲ್ಲಿ ಕಾಂಗ್ರೆಸ್‌ನ ಪ್ರಣಿತಿ ಶಿಂಧೆ ವಿರುದ್ಧ ಬಿಜೆಪಿ ಅಭ್ಯರ್ಥಿ ರಾಮ್ ಸತ್ಪುತೆ ಕಣಕ್ಕಿಳಿದಿದ್ದಾರೆ.

ಸಂಜೆ 4:30ಕ್ಕೆ ಸತಾರಾ ಕ್ಷೇತ್ರದ ಎನ್‌ಸಿಪಿ-ಶರದ್‌ಚಂದ್ರ ಪವಾರ್ ಅಭ್ಯರ್ಥಿ ಶಶಿಕಾಂತ್ ಶಿಂಧೆ ವಿರುದ್ಧ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿ ಉದಯನರಾಜೆ ಭೋಸ್ಲೆ ಪರ ಪ್ರಧಾನಿ ಮೋದಿ ಅವರು ಕರಾಡ್‌ನಲ್ಲಿ ರ್‍ಯಾಲಿ ನಡೆಸಲಿದ್ದಾರೆ. ಪುಣೆಯ ಹಡಪ್ಸರ್‌ನಲ್ಲಿರುವ ರೇಸ್ ಕೋರ್ಸ್ ಮೈದಾನದಲ್ಲಿ ಸಂಜೆ 6-30ಕ್ಕೆ ಪ್ರಧಾನ ಮಂತ್ರಿಯವರ ನಾಲ್ಕನೇ ರ್‍ಯಾಲಿ ಆಯೋಜಿಸಲಾಗಿದೆ. ಪುಣೆಯ ಬಿಜೆಪಿ ಅಭ್ಯರ್ಥಿ ಮುರಳೀಧರ್ ಮೊಹೋಲ್ ಪರ ಪ್ರಚಾರ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT