ಡಿ.ಕೆ. ಸುರೇಶ್ 
ರಾಜಕೀಯ

ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ನಾನೂ ನೋಡಿದ್ದೇನೆ, ತಾಯಿ ವಯಸ್ಸಿನ ಮನೆಗೆಲಸದವರೊಂದಿಗೆ ಅಸಹ್ಯ ನೋಡೋಕಾಗ್ಲಿಲ್ಲ: ಡಿ.ಕೆ. ಸುರೇಶ್

ನಾನೂ ವಾಟ್ಸ್ ಆಪ್ ನಲ್ಲಿ ಬಂದಂತಹ ಸಂಸದ ಪ್ರಜ್ವಲ್ ರೇವಣ್ಣ ಅವರ ಕೆಲವು ಅಶ್ಲೀಲ್ ವಿಡಿಯೋಗಳನ್ನು ನೋಡಿದ್ದೇನೆ.

ಬೆಂಗಳೂರು: ನಾನೂ ವಾಟ್ಸ್ ಆಪ್ ನಲ್ಲಿ ಬಂದಂತಹ ಸಂಸದ ಪ್ರಜ್ವಲ್ ರೇವಣ್ಣ ಅವರ ಕೆಲವು ಅಶ್ಲೀಲ್ ವಿಡಿಯೋಗಳನ್ನು ನೋಡಿದ್ದೇನೆ. ಅವರ ನೀಚ ಕೃತ್ಯದ ವಿಡಿಯೋವನ್ನು ಎರಡು ಕ್ಷಣವೂ ನೋಡಲು ಆಗಲಿಲ್ಲ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಸುರೇಶ್ ಅವರು, ಒಬ್ಬ ಹುಡುಗ ತನ್ನ ತಾಯಿ ವಯಸ್ಸಿನ ಮನೆಗೆಲಸದ ಮಹಿಳೆಯೊಂದಿಗೆ ನಡೆದುಕೊಂಡಿರುವುದು ಅಸಹ್ಯಕರ. ಆ ಅಸಹ್ಯವನ್ನು ಎರಡು ಕ್ಷಣವೂ ನೋಡಲು ಆಗಲಿಲ್ಲ. ಯಾವ ನಂಬಿಕೆ ಇಟ್ಟುಕೊಂಡು ಮಹಿಳೆಯರು ಕೆಲಸಕ್ಕೆ ಹೋಗುವುದು? ಎಂದು ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ರಾಸಲೀಲೆ ವಿಡಿಯೋ ಪೆನ್ ಡ್ರೈವ್ ಮೊದಲು ಡಿಕೆ ಬ್ರದರ್ಸ್ ಕೈ ಸೇರಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆ ಸುರೇಶ್, ನಮಗೆ ವಿಷಯ ಗೊತ್ತಿದ್ದರೇ ಇನ್ನು ಮುಂಚೆಯೇ ಹೊರ ಬರುತ್ತಿತ್ತು. ಆರೋಪ ಮಾಡುವುದಕ್ಕಾಗಿ ನಮ್ಮ ಹೆಸರುಗಳನ್ನು ತರಲಾಗುತ್ತಿದೆ. ಗುಸು ಗುಸು ಸುದ್ದಿ ಹಾಸನದಲ್ಲಿ ಇತ್ತು. ಆದರೆ ಸೂಕ್ತ ದಾಖಲೆಗಳು ಇಲ್ಲದೇ ಮಾತನಾಡುವುದು ಸೂಕ್ತವಲ್ಲ. ಹಾಸನದ ಬಿಜೆಪಿ ನಾಯಕ ದೇವರಾಜೇಗೌಡ ಉನ್ನತ ನಾಯಕರಿಗೆ ಪತ್ರ ಬರೆದಿದ್ದರು. ಪ್ರಕರಣದ ಬಗ್ಗೆ ಪ್ರಧಾನಿಗಳು ಹಾಗೂ ಅವರ ಕಾರ್ಯಾಲಯ ಮತ್ತು ಕುಟುಂಬಕ್ಕೆ ಗೊತ್ತಿದ್ದರೂ ಉದ್ದೇಶಪೂರ್ವಕವಾಗಿ ಮುಚ್ಚಿಟ್ಟು ಎನ್ ಡಿಎ ಅಭ್ಯರ್ಥಿಯನ್ನಾಗಿ ಮಾಡಿ. ಇಡೀ ದೇಶದಲ್ಲೇ ಕನ್ನಡಿಗರಿಗೆ, ಹಾಸನ ಜಿಲ್ಲೆಗೆ ಅವಮಾನ ಮಾಡಿದ್ದಾರೆ ಎಂದರು.

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಇಡೀ ಜಗತ್ತಿನಲ್ಲಿಯೇ ಅತಿ ದೊಡ್ಡ ಹಗರಣವಾಗಿದೆ. ಇದು ನಮ್ಮ ರಾಜ್ಯಕ್ಕೆ ಹಾಗೂ ರಾಜ್ಯದ ಮಹಿಳೆಯರಿಗೆ ಆಗಿರುವ ಅತಿ ದೊಡ್ಡ ಅವಮಾನವಾಗಿದೆ. ಸಂತ್ರಸ್ತರಿಗೆ ನ್ಯಾಯ ಕೊಡಿಸಬೇಕಿದೆ. ಸಂಸದನಾಗಿ ತನ್ನ ಕಚೇರಿಯನ್ನೇ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಇದು ಮನುಕುಲದ ದೊಡ್ಡ ಅವಮಾನಕರ ಘಟನೆ. ಸಂಸ್ಕೃತಿ ಬಗ್ಗೆ ಮಾತನಾಡುವ ಇವರು ಈ ಪ್ರಕರಣದ ಬಗ್ಗೆ ಮಾತನಾಡಲಿ. ನೇಹಾ ಪ್ರಕರಣವನ್ನು ರಾಷ್ಟ್ರೀಯ ಮಟ್ಟಕ್ಕೆ ತೆಗೆದುಕೊಂಡು ಹೋದಂತೆ, ಈ ಪ್ರಕರಣವನ್ನು ತೆಗೆದುಕೊಂಡು ಹೋಗಲಿ. ಈ ಪ್ರಕರಣದ ಹಿಂದೆ ಇರುವ ಎಲ್ಲರಿಗೂ ಶಿಕ್ಷೆಯಾಗಬೇಕು. ಇದರಲ್ಲಿ ಸಿಲುಕಿಕೊಂಡಿರುವ ಮಹಿಳೆಯರಿಗೆ ಸೂಕ್ತ ರೀತಿಯಲ್ಲಿ ರಕ್ಷಣೆ ಕೊಟ್ಟು, ಕಾಪಾಡಬೇಕು ಎಂದರು.

ಇನ್ನು ನಮಗೆ ಮೊದಲೇ ಗೊತ್ತಿತ್ತು ಎಂದು ಬಿಜೆಪಿ ನಾಯಕರೇ ಒಪ್ಪಿಕೊಂಡಿದ್ದಾರೆ. ಪ್ರಜ್ವಲ್ ಅವರ ತಂದೆ ರೇವಣ್ಣ ಅವರೇ ಹಳೆಯ ವಿಡಿಯೋಗಳು ಎಂದು ಒಪ್ಪಿಕೊಂಡಿದ್ದಾರೆ. ಎಲ್ಲದಕ್ಕೂ ಮೊದಲು ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಿರುವುದು ಸರ್ಕಾರದ ಮೊದಲ ಕೆಲಸ. ಇಲ್ಲಿ ಸುಮಾರು 500 ಕ್ಕೂ ಹೆಚ್ಚು ಮಹಿಳೆಯರು ಶೋಷಣೆಗೆ ಒಳಗಾಗಿದ್ದಾರೆ ಎಂದು ಕಾಂಗ್ರೆಸ್ ಸಂಸದ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT