ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ 
ರಾಜಕೀಯ

ರಾಜ್ಯಪಾಲರ ನೋಟಿಸ್ ಗೆ ಸಂಪುಟ ಸಭೆ ಆಕ್ಷೇಪ; ವಾಪಸ್ ಪಡೆಯುವಂತೆ ನಿರ್ಣಯ ಅಂಗೀಕಾರ

ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಕ್ಕೆ ಗುರುವಾರ ಸಚಿವ ಸಂಪುಟ ಸಭೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೀಡಿರುವ ನೋಟಿಸ್​ ಹಿಂಪಡೆಯುವಂತೆ ಒತ್ತಾಯಿಸಿ ನಿರ್ಣಯ ಕೈಗೊಳ್ಳಲಾಗಿದೆ ಮತ್ತು ನೋಟಿಸ್ ವಿರುದ್ಧ ಕಾನೂನು ಹೋರಾಟ ನಡೆಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರಿ ಸಚಿವ ಕೆಎನ್ ರಾಜಣ್ಣ ಅವರು, ಸಿಎಂಗೆ ಶೋಕಾಸ್ ನೋಟಿಸ್ ನೀಡಿರುವ ಬಗ್ಗೆ ಚರ್ಚಿಸಲಾಗಿದೆ. ನೋಟಿಸ್ ವಿರುದ್ಧ ಕಾನೂನು ಹೋರಾಟ ನಡೆಸಲು ನಿರ್ಧರಿಸಲಾಗಿದೆ ಮತ್ತು ರಾಜ್ಯಪಾಲರಿಗೆ ನೋಟಿಸ್ ವಾಪಸ್ ಪಡೆಯುವಂತೆ ಕೋರಿ ನಿರ್ಣಯ ಕೈಗೊಳ್ಳಲಾಗಿದೆ ಎಂದರು.

ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರ ನೋಟಿಸ್ ಸಂಪೂರ್ಣ ರಾಜಕೀಯ ಪ್ರೇರಿತವಾಗಿದ್ದು, ನೋಟಿಸ್ ತಿರಸ್ಕರಿಸಲು ನಿರ್ಣಯ ಕೈಗೊಂಡಿದ್ದೇವೆ ಎಂದು ಸಂಪುಟ ಸಭೆ ಬಳಿಕ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಹೇಳಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಿಸಲು ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ಹಾಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡುವಂತೆ ಕೋರಿ ನೋಟೀಸ್ ನೀಡಿದ್ದಾರೆ. ಈ ಕುರಿತು ಈಗಾಗಲೆ ಹಲವಾರು ಸಚಿವರು, ಕಾಂಗ್ರೆಸ್ ನಾಯಕರು ಕಿಡಿಕಾರಿದ್ದು, ರಾಜ್ಯಪಾಲರ ಮೂಲಕ ರಾಜ್ಯ ಸರ್ಕಾರ ಕೆಡವಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರ ಅನುಪಸ್ಥಿತಿಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ರಾಜ್ಯಪಾಲರ ನಡೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ