ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ 
ರಾಜಕೀಯ

ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನೈತಿಕತೆ ಪ್ರಶ್ನೆ ಸಭೆ; BJP ಜತೆ ಜೆಡಿಎಸ್ ವಿಲೀನ- ಡಿಕೆಶಿ ವ್ಯಂಗ್ಯ

ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಹಗರಣ, ಅನ್ಯಾಯಗಳ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ. ನಮ್ಮ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ತಿಳಿಸಿದರು. ಬಿಜೆಪಿ ನಾಯಕರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೋ ಅಲ್ಲಿ ಒಂದೊಂದು ದಿನ ಮುಂಚಿತವಾಗಿ ಈ ಕಾರ್ಯಕ್ರಮ ಮಾಡುತ್ತೇವೆ.

ಬೆಂಗಳೂರು: ಬಿಜೆಪಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ಪಕ್ಷ ನಾಳೆಯಿಂದ ಬಿಜೆಪಿ ನಾಯಕರ ನೈತಿಕತೆ ಪ್ರಶ್ನಿಸುವ ಸಭೆ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಕಾಲದ ಅಕ್ರಮ, ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯ, ಸಂವಿಧಾನ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬಿಜೆಪಿ ಅವಧಿಯಲ್ಲಿ ರಾಜ್ಯದಲ್ಲಿ ಆಗಿರುವ ಹಗರಣ, ಅನ್ಯಾಯಗಳ ಬಗ್ಗೆ ಪ್ರಶ್ನೆ ಮಾಡಿ ಜನರಿಗೆ ತಿಳಿಸುತ್ತೇವೆ. ನಮ್ಮ ಪ್ರಶ್ನೆಗಳಿಗೆ ಬಿಜೆಪಿ ನಾಯಕರು ಉತ್ತರ ನೀಡಬೇಕು ಎಂದು ತಿಳಿಸಿದರು. ಬಿಜೆಪಿ ನಾಯಕರು ಎಲ್ಲೆಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೋ ಅಲ್ಲಿ ಒಂದೊಂದು ದಿನ ಮುಂಚಿತವಾಗಿ ಈ ಕಾರ್ಯಕ್ರಮ ಮಾಡುತ್ತೇವೆ. ಆಗಸ್ಟ್ 2ರಂದು ಬಿಡದಿ, 3ರಂದು ರಾಮನಗರ, 4ರಂದು ಚನ್ನಪಟ್ಟಣ, 5ರಂದು ಮದ್ದೂರು, 6ರಂದು ಮಂಡ್ಯದಲ್ಲಿ, 9ರಂದು ಮೈಸೂರಿನಲ್ಲಿ ಈ ಕಾರ್ಯಕ್ರಮ ಮಾಡಲಾಗುವುದು" ಎಂದು ಮಾಹಿತಿ ನೀಡಿದರು. ಇದೇ ವೇಳೆ ಬಿಜೆಪಿ ನಮ್ಮ ಸರ್ಕಾರವನ್ನು ಅಸ್ಥಿರಗೊಳಿಸಲು ಯಾವ ರೀತಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜನರಿಗೆ ತಿಳಿಸುತ್ತೇವೆ. ಪ್ರತಿನಿತ್ಯ ಸಚಿವರುಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಶಾಸಕರು ಹಾಗು ಕಾರ್ಯಕರ್ತರು ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಇದು ಎನ್ ಡಿಎ ಅಲ್ಲ, ಬಿಜೆಪಿ ಪಾದಯಾತ್ರೆ:

ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಘೋಷಣೆ ಮಾಡಿದ್ದಾರೆ. ಇಷ್ಟುದಿನ ಕೇಂದ್ರ ಸಚಿವರಾದ ಕುಮಾರಸ್ವಾಮಿ ಹಾಗೂ ಜೆಡಿಎಸ್ ನವರು ಈ ವಿಚಾರದಲ್ಲಿ ಅತಂತ್ರವಾಗಿದ್ದರು. ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದರು. ಜೆಡಿಎಸ್ ಕಾರ್ಯಕಾರಿ ಸಮಿತಿ ಮುಖ್ಯಸ್ಥರು ಪಾದಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದನ್ನೂ ಗಮನಿಸಿದ್ದೇನೆ. ಬಿಜೆಪಿಯವರು ಕೂಡ ಗೊಂದಲದಲ್ಲಿದ್ದರು. ಈಗ ಎರಡೂ ಪಕ್ಷಗಳ ನಾಯಕರು ಪಾದಯಾತ್ರೆ ಮಾಡುವುದಾಗಿ ಘೋಷಣೆ ಮಾಡಿದ್ದು, ಅದಕ್ಕೂ ಮುನ್ನ ನಾವು ಅವರನ್ನು ಪ್ರಶ್ನೆ ಮಾಡಬೇಕಿದೆ. ಈ ಪಾದಯಾತ್ರೆಯನ್ನು ಎನ್ ಡಿಎ ಮೈತ್ರಿಕೂಟ ಘೋಷಣೆ ಮಾಡಿಲ್ಲ. ಕೇವಲ ಬಿಜೆಪಿ ಮಾತ್ರ ಘೋಷಣೆ ಮಾಡಿದೆ. ಪಾದಯಾತ್ರೆ ಸಂಬಂಧ ಪೊಲೀಸರು ಹಾಗೂ ಮಾಧ್ಯಮಗಳಿಗೆ ನೀಡಿರುವ ಮಾಹಿತಿಯಲ್ಲಿ ಬಿಜೆಪಿಯ ಪಾದಯಾತ್ರೆ ಎಂದು ಹೇಳಲಾಗಿದೆ ಹೊರತು, ಜೆಡಿಎಸ್ ಪಕ್ಷದ ಚಿಹ್ನೆ ಸಹ ಇಲ್ಲ. ಪಾದಯಾತ್ರೆಗೆ ಅಪಸ್ವರ ಎತ್ತಿದ್ದ ಜೆಡಿಎಸ್ ನಾಯಕರು ಒಪ್ಪಿದ್ದಾರೆ. ಜೆಡಿಎಸ್ ಪ್ರಾಬಲ್ಯ ಇರುವ ಕ್ಷೇತ್ರದಲ್ಲಿ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ಜೆಡಿಎಸ್ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಭಾವಿಸಿದ್ದೆ" ಎಂದರು.

ಪಾದಯಾತ್ರೆಗೆ ಸ್ವಾಗತ

ಅವರ ಪಾದಯಾತ್ರೆಗೆ ನಮ್ಮ ವತಿಯಿಂದ ಯಾವುದೇ ಅಡ್ಡಿ ಮಾಡುವುದಿಲ್ಲ. ಬೆಂಗಳೂರಿನಲ್ಲಿ ನಗರದ ಒಳಗೆ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂಬ ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡುತ್ತೇವೆ. ಅವರ ಪಾದಯಾತ್ರೆ ಬೇಡ ಎಂದು ನಾನೇಕೆ ಹೇಳಲಿ. ನಾನು ಅವರ ಪಾದಯಾತ್ರೆ ಸ್ವಾಗತಿಸುತ್ತೇವೆ. ನಮ್ಮನ್ನು ನೋಡಿ ಅವರು ಕಲಿಯುವ ಪ್ರಯತ್ನ ಮಾಡುತ್ತಿದ್ದಾರೆ, ಮಾಡಲಿ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅವರು ಅವರ ವಿಚಾರ ತಿಳಿಸಲಿ, ನಮ್ಮ ವಿಚಾರ ನಾವು ತಿಳಿಸುತ್ತೇವೆ" ಎಂದು ತಿಳಿಸಿದರು. ನಾವು ಪಾದಯಾತ್ರೆ ಮಾಡುವುದಿಲ್ಲ. ಸತ್ಯ ಹರಿಶ್ಚಂದ್ರರಂತೆ ಪಾದಯಾತ್ರೆ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಅವರ ಕಾಲದಲ್ಲಿನ ಅಕ್ರಮಗಳ ಬಗ್ಗೆ, ರಾಜ್ಯಕ್ಕೆ ಮಾಡಿರುವ ಅನ್ಯಾಯ, ಸಾಂವಿಧಾನಿಕ ಸಂಸ್ಥೆಗಳ ದುರ್ಬಳಕೆ ಬಗ್ಗೆ ಪ್ರಶ್ನೆ ಮಾಡುತ್ತೇವೆ. ಬಿಜೆಪಿ ಹಾಗೂ ಜೆಡಿಎಸ್ ಅಧಿಕಾರಾವಧಿಯಲ್ಲಿ ಆಗಿರುವ ಅಕ್ರಮಗಳ ಬಗ್ಗೆ ನಮ್ಮ ಬಳಿಯೂ ದಾಖಲೆಗಳಿವೆ. ದಾಖಲೆ ಸಮೇತ ನಾವು ಪ್ರಶ್ನೆ ಮಾಡುತ್ತೇವೆ ಎಂದು ತಿಳಿಸಿದರು.

ಬಿಜೆಪಿ ಜತೆ ಜೆಡಿಎಸ್ ವಿಲೀನ ಮಾಡಿಕೊಂಡಿರಬೇಕು

ಅವರು ಏನಾದರೂ ಮಾಡಿಕೊಳ್ಳಲಿ. ಕುಮಾರಸ್ವಾಮಿ ಅವರ ಮಾತು, ವಿಚಾರ ನೋಡಿದ್ದೇನೆ. ಬಿಜೆಪಿ ಜತೆ ಜೆಡಿಎಸ್ ಅನ್ನು ವಿಲೀನ ಮಾಡಿಕೊಂಡಿರಬೇಕು. ಹೀಗಾಗಿ ಬಿಜೆಪಿ ಹೆಸರಿನಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಬಿಜೆಪಿಗೆ ನೆಲೆ ಇಲ್ಲ. ಹೀಗಾಗಿ ಪಾದಯಾತ್ರೆ ಮಾಡುತ್ತಿದ್ದಾರೆ" ಎಂದು ತಿಳಿಸಿದರು.

ಪಕ್ಷ ಉಳಿಸಿಕೊಳ್ಳುವುದು ಅವರಿಗೆ ಬಿಟ್ಟ ವಿಚಾರ:

ಯಾವುದಾದರೂ ಒತ್ತಡಕ್ಕೆ ಮಣಿದು ಕುಮಾರಸ್ವಾಮಿ ಅವರು ಕೊನೆ ಗಳಿಗೆಯಲ್ಲಿ ಪಾದಯಾತ್ರೆಗೆ ಸಮ್ಮತಿ ಸೂಚಿಸಿದ್ದಾರಾ ಎಂದು ಕೇಳಿದಾಗ, "ಜೆಡಿಎಸ್ ಪಕ್ಷವನ್ನು ಉಳಿಸಿಕೊಳ್ಳುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ. ಜೆಡಿಎಸ್ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡಬಹುದು. ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಲು ಪಾದಯಾತ್ರೆ ವಿರೋಧಿಸುತ್ತಿದ್ದಾರೆ ಎಂದು ಭಾವಿಸಿದ್ದೆ. ಅದು ಅವರ ಇಚ್ಛೆ. ಅವರು ಒಟ್ಟಿಗೆಯಾದರೂ ಮಾಡಲಿ, ವಿಲೀನವಾದರೂ ಮಾಡಿಕೊಳ್ಳಲಿ. ನಮ್ಮ ಅಭ್ಯಂತರವಿಲ್ಲ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ" ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT