ಬೆಂಗಳೂರು: ಮುಡಾ ಮತ್ತು ಎಸ್‌ಟಿ ನಿಗಮದಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಮತ್ತು ಬಿಜೆಪಿ ಶನಿವಾರ ಪಾದಯಾತ್ರೆ ಆರಂಭಿಸಿವೆ.
ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ ಅವರನ್ನು ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿರುವ ಹಳೇ ಮೈಸೂರು ಭಾಗದಲ್ಲಿ ದೇವೇಗೌಡರ ಕುಟುಂಬದ ವಾರಸುದಾರನೆಂದು ಸಾಬೀತು ಪಡಿಸಲು ಈ ವೇದಿಕೆ ಲಾಂಚ್ ಪ್ಯಾಡ್ ಆಗಿ ಮಾರ್ಪಟ್ಟಿದೆ.
ಒಕ್ಕಲಿಗರ ನಾಯಕತ್ವದ ಮೇಲೆ ಹಿಡಿತ ತಪ್ಪಿದ್ದಕ್ಕೆ ಕುಮಾರಸ್ವಾಮಿ ಆತಂಕಗೊಂಡಿದ್ದರು. ಇತ್ತೀಚೆಗೆ ನಡೆದ ಪಾದಯಾತ್ರೆಯ ಪೂರ್ವಸಿದ್ಧತಾ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆದ ಹಾಸನದ ಮಾಜಿ ಶಾಸಕ ಪ್ರೀತಂ ಗೌಡರಿಗೆ ವೇದಿಕೆ ಹಂಚಿಕೊಳ್ಳಲು ಅವಕಾಶ ನೀಡಿದ್ದಕ್ಕೆ ಬಿಜೆಪಿ ವಿರುದ್ಧ ಕುಮಾರಸ್ವಾಮಿ ಹರಿಹಾಯ್ದಿದ್ದರು. ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ವಿಡಿಯೋಗಳನ್ನು ಹೊಂದಿರುವ ಪೆನ್ ಡ್ರೈವ್‌ಗಳ ಹಂಚಿಕೆಯಲ್ಲಿ ಪ್ರೀತಂ ಭಾಗಿಯಾಗಿದ್ದಾರೆ ಮತ್ತು ದೇವೇಗೌಡರ ಕುಟುಂಬವನ್ನು ಮುಗಿಸಲು ಬಯಸಿದ್ದು ಎಂದು ಕುಮಾರಸ್ವಾಮಿ ಆರೋಪಿಸಿದ್ದರು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸೇರಿದಂತೆ ಬಿಜೆಪಿ ಕೇಂದ್ರ ನಾಯಕರು ಕುಮಾರಸ್ವಾಮಿ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾದರು ಮತ್ತು ಯೋಜಿಸಿದಂತೆ ಪಾದಯಾತ್ರೆಯನ್ನು ಆರಂಭವಾಯಿತು. ಪಾದಯಾತ್ರೆಯ ಸಂದರ್ಭದಲ್ಲಿ, ನಿಖಿಲ್ ರಾಜ್ಯ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಜೊತೆಗೂಡಿದರ, ಉಭಯ ಪಕ್ಷಗಳ ಕಾರ್ಯಕರ್ತರು ಇಬ್ಬರಿಗೂ ಭವ್ಯ ಸ್ವಾಗತ ನೀಡಿದರು.
ಕುಮಾರಸ್ವಾಮಿ ಅವರು ಪೂರ್ಣ ಪ್ರಮಾಣದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೋಳ್ಳಲು ಸಾಧ್ಯವಾಗದ ಕಾರಣ, ಜೆಡಿಎಸ್ ಕಾರ್ಯಕರ್ತರನ್ನು ಮುನ್ನಡೆಸಲು ತಮ್ಮ ತಂದೆಯ ಜವಾಬ್ದಾರಿಯನ್ನ ನಿಖಿಲ್ ತೆಗೆದಕೊಂಡಿದ್ದಾರೆ.
ನಿಖಿಲ್ ಬಿ ವೈ ವಿಜಯೇಂದ್ರ ಜೊತೆ ಕೈ ಜೋಡಿಸಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿ ಎಷ್ಟು ಪ್ರಬಲವಾಗಿದೆ ಎಂದರೆ ನಮ್ಮ ನಡುವೆ ಯಾರೂ ಬಿರುಕು ಮೂಡಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ಹೇಳಿದರು. ಬಿಜೆಪಿ ಬೆಂಬಲದೊಂದಿಗೆ ಹಳೇ ಮೈಸೂರು ಪ್ರದೇಶದಲ್ಲಿ ನಿಖಿಲ್ ಅವರ ರಾಜಕೀಯ ಭವಿಷ್ಯವನ್ನು ಭದ್ರಪಡಿಸಿಕೊಳ್ಳಲು ಕುಮಾರಸ್ವಾಮಿ ಬಯಸಿದ್ದಾರೆ ಮತ್ತು ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್‌ಡಿಎ ನಿಖಿಲ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆಗಳಿವೆ ಎಂದು ರಾಜಕೀಯ ಪಂಡಿತರ ಅಭಿಪ್ರಾಯ ಪಟ್ಟಿದ್ದಾರೆ.