ಸಿಎಂ ಸಿದ್ದರಾಮಯ್ಯ, ಲಕ್ಷ್ಮಿ ಹೆಬ್ಬಾಳ್ಕರ್ ಮತ್ತಿತರರು 
ರಾಜಕೀಯ

ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದರೆ ಕಾನೂನಾತ್ಮಕ, ರಾಜಕೀಯ ಹೋರಾಟಕ್ಕೆ ಸಿದ್ಧ: ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು, ಅಬ್ರಹಾಂ ಕೊಟ್ಟಿರುವ ದೂರು ತಿರಸ್ಕರಿಸಬೇಕು ಎಂದು ಹೇಳಿದ್ದೇವೆ. ಇಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದರು.

ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದರೆ ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ತನ್ನಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಮತ್ತು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಬಾರದು ಎಂದು ಸಂಪುಟದ ಸಚಿವರು ನೀಡಿರುವ ಸಲಹೆಯನ್ನು ಒಂದು ವೇಳೆ ರಾಜ್ಯಪಾಲರು ತಿರಸ್ಕರಿಸಿದರೆ. ಕಾನೂನಾತ್ಮಕ ಹಾಗೂ ರಾಜಕೀಯ ಹೋರಾಟಕ್ಕೆ ಸಿದ್ಧರಿದ್ದೇವೆ ಎಂದು ತಿಳಿಸಿದರು.

ರಾಜ್ಯಪಾಲರು ಕೊಟ್ಟಿರುವ ಶೋಕಾಸ್ ನೋಟಿಸ್ ವಾಪಸ್ ಪಡೆಯಬೇಕು, ಅಬ್ರಹಾಂ ಕೊಟ್ಟಿರುವ ದೂರು ತಿರಸ್ಕರಿಸಬೇಕು ಎಂದು ಹೇಳಿದ್ದೇವೆ. ಇಲ್ಲಿಯವರೆಗೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. ರಾಜ್ಯಪಾಲರು ಯಾವ ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ ಎಂದರು.

ವಕೀಲ- ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಸಲ್ಲಿಸಿರುವ ಅರ್ಜಿ ಆಧರಿಸಿ, ರಾಜ್ಯಪಾಲರು ಜುಲೈ 26 ರಂದು ಶೋಕಾಸ್ ನೋಟಿಸ್ ನೀಡಿದ್ದು, ತಮ್ಮ ವಿರುದ್ಧದ ಆರೋಪಗಳಿಗೆ ಏಳು ದಿನಗಳೊಳಗೆ ಉತ್ತರ ಸಲ್ಲಿಸುವಂತೆ ಮುಖ್ಯಮಂತ್ರಿಗೆ ಸೂಚಿಸಿದ್ದಾರೆ.

ಈ ಮಧ್ಯೆ ಇದೇ ವಿಚಾರ ಕುರಿತು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ್, ಮುಖ್ಯಮಂತ್ರಿಗೆ ನೀಡಿರುವ ಶೋಕಾಸ್ ನೋಟಿಸ್ ಹಿಂಪಡೆಯಬೇಕು ಎಂಬ ಸಂಟುಪ ಸಚಿವರ ಸಲಹೆಯನ್ನು ರಾಜ್ಯಪಾಲರು ತಿರಸ್ಕರಿಸಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ರಾಜ್ಯಪಾಲರು ಕ್ಯಾಬಿನೆಟ್ ಸಲಹೆಯನ್ನು ತಿರಸ್ಕರಿಸಿದರೆ ಕಾಂಗ್ರೆಸ್ ಸರ್ಕಾರ ಕಾನೂನಾತ್ಮಕವಾಗಿ ಹೋರಾಟ ನಡೆಸಲಿದೆ ಎಂದರು.

ರಾಜ್ಯಪಾಲರು ಕೆಲವು ಅಧಿಕಾರಗಳನ್ನು ಹೊಂದಿರಬಹುದು, ಆದರೆ ಅವರು ಕ್ಯಾಬಿನೆಟ್ ಸಲಹೆಯನ್ನು ಅಷ್ಟು ಸುಲಭವಾಗಿ ತಿರಸ್ಕರಿಸುತ್ತಾರೆ ಎಂದು ನನಗೆ ಅನಿಸುವುದಿಲ್ಲ. ಆದಾಗ್ಯೂ, ಅವರು ಕಾನೂನು ಕ್ರಮಕ್ಕೆ ಅನುಮತಿ ನೀಡಿದರೆ, ನಾವು ಕಾನೂನು ಹೋರಾಟ ಮಾಡುತ್ತೇವೆ ಎಂದು ಪರಮೇಶ್ವರ್ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

'ಸುಪ್ರೀಂ ಕೋರ್ಟ್‌ಗೆ ಅಲೆದು, ಅಲೆದು ಸಾಕಾಗಿ ಹೋಗಿದೆ'; ಹಿರಿಯ ವಕೀಲ ಕಪಿಲ್ ಸಿಬಲ್ ಅಚ್ಚರಿ ಹೇಳಿಕೆ, ನ್ಯಾಯಾಲಯ ಹೇಳಿದ್ದೇನು?

ಭಾರತೀಯ ನೌಕಾಪಡೆಗೆ ಮತ್ತಷ್ಟು ಬಲ: 3ನೇ ಜಲಾಂತರ್ಗಾಮಿ ನಿಗ್ರಹ ಯುದ್ಧನೌಕೆ 'INS ಮಂಗ್ರೋಲ್' ಸೇರ್ಪಡೆ-Video

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!