ಸಾಂದರ್ಭಿಕ ಚಿತ್ರ  
ರಾಜಕೀಯ

ಗ್ಯಾರಂಟಿ ಯೋಜನೆಗಳಿಗೆ ಎಸ್ ಸಿ/ಎಸ್ ಟಿ ಅನುದಾನ ಬಳಕೆ: ಕಾಂಗ್ರೆಸ್ ಜೊತೆ ದಲಿತ ವಿಚಾರವಾದಿಗಳ ಮುನಿಸು!

ಮಾವಳ್ಳಿ ಶಂಕರ್ ಮತ್ತು ಖ್ಯಾತ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ನೇತೃತ್ವದಲ್ಲಿ ದಲಿತ ಸಂಘಟನೆಗಳ ಒಂದು ವಿಭಾಗದ ಸದಸ್ಯರು ಬಂಗಾರಪೇಟೆಯ ದಲಿತ ಶಾಸಕರಾದ ಎಸ್‌ಎನ್ ನಾರಾಯಣಸ್ವಾಮಿ ಮತ್ತು ಕೋಲಾರ ಜಿಲ್ಲೆಯ ಕೆಜಿಎಫ್‌ನ ರೂಪಕಲಾ ಶಶಿಧರ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

ಬೆಂಗಳೂರು: ನಿನ್ನೆ ಶುಕ್ರವಾರ ಮೈಸೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ‘ಜನಾಂದೋಲನ’ದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಪಾರ ಬೆಂಬಲ ವ್ಯಕ್ತವಾಗಿದ್ದರೂ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಗಳಿಗೆ ಮೀಸಲಿಟ್ಟಿದ್ದ 25 ಸಾವಿರ ಕೋಟಿ ರೂಪಾಯಿಗಳ ಅನುದಾನವನ್ನು ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಬಳಸಿರುವ ಬಗ್ಗೆ ಬಗ್ಗೆ ಮೌನ ವಹಿಸಿರುವ ಪಕ್ಷದ ದಲಿತ ಶಾಸಕರ ಮೇಲೆ ಅಸಮಾಧಾನಗೊಂಡು ದಲಿತ ವಿಚಾರವಾದಿಗಳ ಒಂದು ಭಾಗ ದೂರ ಉಳಿದಿತ್ತು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವಿರುದ್ಧದ ಈ ಸಿಟ್ಟು ಮುಂದಿನ ದಿನಗಳಲ್ಲಿ ಹೆಚ್ಚು ಗೋಚರಿಸುವ ಸಾಧ್ಯತೆ ಇದೆ. ಇದು ಕೇವಲ ಆರಂಭವಾಗಿದೆ ಮತ್ತು ಎಸ್‌ಸಿ/ಎಸ್‌ಟಿಗಳಿಗೆ ಮೀಸಲಾದ ಅನುದಾನವನ್ನು ಬೇರೆಡೆಗೆ ನೀಡಿರುವ ವಿಚಾರ ಕುರಿತು ಮಾತನಾಡದಿದ್ದಕ್ಕಾಗಿ ನಾವು ಶಾಸಕರನ್ನು ಘೇರಾವ್ ಹಾಕಲಿದ್ದೇವೆ. ಅವರ ಜನಾಂದೋಲನದಲ್ಲಿ ಪಾಲ್ಗೊಳ್ಳಲು ನಾವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಲ್ಲ ಎಂದು ಡಿಎಸ್‌ಎಸ್ ಮುಖಂಡ ಮಾವಳ್ಳಿ ಶಂಕರ್ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿಗೆ ತಿಳಿಸಿದರು.

ಮಾವಳ್ಳಿ ಶಂಕರ್ ಮತ್ತು ಖ್ಯಾತ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ನೇತೃತ್ವದಲ್ಲಿ ದಲಿತ ಸಂಘಟನೆಗಳ ಒಂದು ವಿಭಾಗದ ಸದಸ್ಯರು ಬಂಗಾರಪೇಟೆಯ ದಲಿತ ಶಾಸಕರಾದ ಎಸ್‌ಎನ್ ನಾರಾಯಣಸ್ವಾಮಿ ಮತ್ತು ಕೋಲಾರ ಜಿಲ್ಲೆಯ ಕೆಜಿಎಫ್‌ನ ರೂಪಕಲಾ ಶಶಿಧರ್ ಅವರ ನಿವಾಸದ ಮುಂದೆ ಪ್ರತಿಭಟನೆ ನಡೆಸಿದರು.

2022ರಲ್ಲಿ ದಾವಣಗೆರೆಯಲ್ಲಿ ಸಿದ್ದರಾಮಯ್ಯನವರ 75ನೇ ಜನ್ಮದಿನಾಚರಣೆಯಲ್ಲಿ ‘ಸಿದ್ದರಾಮೋತ್ಸವ’ ಆಚರಿಸಿದ ಸಂದರ್ಭದಲ್ಲಿ ದಲಿತರು ಭಾಗವಹಿಸಿ ಅಲ್ಪಸಂಖ್ಯಾತರು, ಹಿಂದುಳಿದವರು ಮತ್ತು ದಲಿತರ ಕನ್ನಡದ ಸಂಕ್ಷಿಪ್ತ ರೂಪವಾದ ಅಹಿಂದ ನಾಯಕನ ಹಿಂದೆ ನಿಂತು ಅವರ ನಾಯಕತ್ವವನ್ನು ಅನುಮೋದಿಸಿದರು.

ಆದರೆ ಕಾಲಾನಂತರದಲ್ಲಿ, ಸಿದ್ದರಾಮಯ್ಯ ಅವರು 2009 ರಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ತ್ಯಾಗ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗಿನ ರಾಜಕೀಯ ದ್ವೇಷ ಸೇರಿದಂತೆ ವಿವಿಧ ಅಂಶಗಳಿಂದ ದಲಿತರ ಒಂದು ವರ್ಗದ ಸಹಾನುಭೂತಿಯನ್ನು ಕಳೆದುಕೊಂಡಿದ್ದಾರೆ ಎಂದು ದಲಿತ ನಾಯಕರೊಬ್ಬರು ಹೇಳುತ್ತಾರೆ. ದಲಿತರ ಒಂದು ವರ್ಗದ ದ್ವೇಷವನ್ನು ದೂರ ಮಾಡುವ ಸಲುವಾಗಿ, ರಾಜ್ಯ ಸರ್ಕಾರ ಈ ವಿಷಯದಲ್ಲಿ ತಾವಾಗಿಯೇ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ತೀರ್ಪಿನ ನಂತರ, ಎಸ್‌ಸಿ ಕೋಟಾದ ವರ್ಗೀಕರಣಕ್ಕೆ ಬದ್ಧರಾಗಿರುತ್ತೇನೆ ಎಂದು ಸಿಎಂ ಘೋಷಿಸಿದ್ದಾರೆ.

ಇಲ್ಲಿ ಕುತೂಹಲಕಾರಿ ವಿಷಯವೆಂದರೆ ಮೊನ್ನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಕೆಲವು ದಲಿತ ಸಂಘಟನೆಗಳೊಂದಿಗೆ ಸಭೆ ನಡೆಸಿ ವಿಶ್ವಾಸಕ್ಕೆ ತೆಗೆದುಕೊಂಡರು. ಇಂದು ಮೈಸೂರಿನಲ್ಲಿ ಮುಕ್ತಾಯಗೊಳ್ಳಲಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಹೆಚ್ಚಿನ ದಲಿತ ಸದಸ್ಯರನ್ನು ಸಜ್ಜುಗೊಳಿಸುವ ಕಾರ್ಯತಂತ್ರದ ಭಾಗ ಇದು ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT