ಸಿಪಿ ಯೋಗೇಶ್ವರ್ 
ರಾಜಕೀಯ

ಚನ್ನಪಟ್ಟಣ ಉಪ ಚುನಾವಣೆ: ಟಿಕೆಟ್ ಸಿಗದಿದ್ದರೆ ಪಕ್ಷೇತರನಾಗಿ ಸ್ಪರ್ಧೆ - ಸಿಪಿ ಯೋಗೇಶ್ವರ್

ಚನ್ನಪಟ್ಟಣದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಅವರನ್ನು ಬಿಜೆಪಿ ಹೈಕಮಾಂಡ್ ಮಾತುಕತೆಗೆ ಬರುವಂತೆ ದೆಹಲಿಗೆ ಕರೆದಿದೆ.

ಬೆಂಗಳೂರು: ಒಕ್ಕಲಿಗ ಪ್ರಬಲ ನಾಯಕರಿಬ್ಬರ ನಡುವಿನ ಪ್ರತಿಷ್ಠೆಯ ಕಣವಾಗಿರುವ ಚನ್ನಪಟ್ಟಣ ಉಪ ಚುನಾವಣೆಯ ಟಿಕೆಟ್ ವಿಚಾರ ಎನ್ ಡಿಎ ಮಿತ್ರಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಲ್ಲಿ ರಾಜಕೀಯ ಲೆಕ್ಕಾಚಾರ ಜೋರಾಗಿಯೇ ನಡೆಯುತ್ತಿದೆ.

ಎನ್​ಡಿಎ ಅಭ್ಯರ್ಥಿಯಾಗಿಯೇ ನಾನು ಕಣಕ್ಕಿಳಿಯುತ್ತೇನೆ ಎಂದಿರುಯ ಬಿಜೆಪಿ ಎಂಎಲ್​ಸಿ ಸಿ.ಪಿ.ಯೋಗೇಶ್ವರ್ ಅವರು, ಒಂದು ವೇಳೆ ಪಕ್ಷದ ಟಿಕೆಟ್ ಕೈತಪ್ಪಿದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತೇನೆ’ ಎಂದು ಎಚ್ಚರಿಕೆ ನೀಡಿದ್ದಾರೆ.

ಚನ್ನಪಟ್ಟಣದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಸಿಪಿ ಯೋಗೇಶ್ವರ್ ಅವರನ್ನು ಬಿಜೆಪಿ ಹೈಕಮಾಂಡ್ ಮಾತುಕತೆಗೆ ಬರುವಂತೆ ದೆಹಲಿಗೆ ಕರೆದಿದೆ.

ಇಂದು ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಸಿಪಿ ಯೋಗೇಶ್ವರ್, ನಾನು ಚನ್ನಪಟ್ಟಣ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ಎನ್‌ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯಬೇಕು ಎನ್ನುವ ಆಸೆ ಇದೆ. ಒಂದು ವೇಳೆ ಅದು ಸಾಧ್ಯ ವಾಗಿಲ್ಲ ಅಂದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಹೇಳಿದರು.

ಈಗಾಗಲೇ ನಮ್ಮ ಕ್ಷೇತ್ರದ ಜನ ಹಲವು ಬಾರಿ ಸ್ವತಂತ್ರವಾಗಿ ನಿಂತರೂ ನನ್ನನ್ನು ಗೆಲ್ಲಿಸಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಲು ಸಾಧ್ಯವಿಲ್ಲ ಎಂದಾದರೆ ಪಕ್ಷೇತರನಾಗಿ ಸ್ಪರ್ಧಿಸುತ್ತೇನೆ ಹೊರತು ಕಾಂಗ್ರೆಸ್‌ ಸೇರಲ್ಲ. ಇದುವರೆಗೆ ನನ್ನನ್ನು ಯಾವುದೇ ಕಾಂಗ್ರೆಸ್ ನಾಯಕರು ಸಂಪರ್ಕಿಸಿಲ್ಲ ಎಂದು ಯೋಗೇಶ್ವರ್‌ ಸ್ಪಷ್ಟಪಡಿಸಿದರು.

ಇದೇ ವೇಳೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಯೋಗೇಶ್ವರ್ ಅವರು ಕಾಂಗ್ರೆಸ್ ಸೇರುವ ಸಾಧ್ಯತೆಗಳಿವೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿಜೆಪಿ ಎಂಎಲ್ ಸಿ, “ನಾನು ಕಾಂಗ್ರೆಸ್ ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನ ಮಾತಾಡಿಸಿಯೂ ಇಲ್ಲ. ಡಿಕೆಶಿ ಅವರು ಏನೇನೋ ಮಾತಾಡ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತ ಗೊತ್ತಿದೆ’ ಎಂದು ಟಾಂಗ್ ನೀಡಿದರು.

ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣಕ್ಕೆ ಉಪ ಚುನಾವಣೆ ಎದುರಾಗಿದೆ. ಈ ಚುನಾವಣೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಎಚ್ ಡಿ ಕುಮಾರಸ್ವಾಮಿ ನಡುವಿನ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರತಿಭಟನಾಕಾರರಿಗೆ ಬಿಗ್ ಶಾಕ್; ಇನ್ಮುಂದೆ ದೆಹಲಿ Jantar Mantarನಲ್ಲಿ ಧರಣಿ ನಡೆಸುವಂತಿಲ್ಲ..!

ಸರ್ಕಾರದ 200 ಅಧಿಕಾರಿಗಳು ವಿರೋಧ ಪಕ್ಷದ ಸಂಪರ್ಕದಲ್ಲಿ: ಪ್ರತಿಭಟನಾ ಜಾಥಾಕ್ಕೂ ಮುನ್ನ ರಾಹುಲ್ ಗಾಂಧಿ ಹೊಸಬಾಂಬ್!

‘ಪ್ರತಿಭಟನೆ ನಮ್ಮ ಸಾಂವಿಧಾನಿಕ ಹಕ್ಕು’: Jantar Mantar ಧರಣಿಗೆ ದಿನಾಂಕ ನಿಗದಿಪಡಿಸಿ; ದೆಹಲಿ ಪೊಲೀಸರಿಗೆ 24 ಗಂಟೆಗಳ ಗಡುವು ಕೊಟ್ಟ Cockroach Janta Party..!

‘Vote chori’ ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಮೈಸೂರು ದಸರಾ ವೇದಿಕೆಯಲ್ಲಿ ಡಾ. ಯತೀಂದ್ರ ಸಿದ್ದರಾಮಯ್ಯ ಎಡವಟ್ಟು; ಸಿಎಂ ಡಿಕೆಶಿ ಪತ್ನಿ ಹೆಸರು ಹೇಳುವಾಗ ಗೊಂದಲ! Video