ಸೌಮ್ಯಾ ರೆಡ್ಡಿ 
ರಾಜಕೀಯ

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೇಮಕ

ಸೌಮ್ಯಾ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಮಹಿಳಾ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕಿ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅವರನ್ನು ನೇಮಿಸಲಾಗಿದೆ. ಸೌಮ್ಯಾ ರೆಡ್ಡಿ ಅವರ ನೇಮಕದ ಪ್ರಸ್ತಾವಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನುಮೋದನೆ ನೀಡಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ತಿಳಿಸಿದ್ದಾರೆ.

2018ರ ವಿಧಾನಸಭೆ ಚುನಾವಣೆಯಲ್ಲಿ ಜಯನಗರ ಕ್ಷೇತ್ರದಿಂದ ಚುನಾಯಿತರಾಗಿದ್ದ ಸೌಮ್ಯಾ ರೆಡ್ಡಿ, 2023ರ ಚುನಾವಣೆಯಲ್ಲಿ ಸೋಲು ಕಂಡಿದ್ದರು. ಅಲ್ಲದೆ, ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ತೇಜಸ್ವಿ ಸೂರ್ಯ ವಿರುದ್ಧ ಕಣಕ್ಕಿಳಿದಿದ್ದ ಅವರು ಪರಾಭವ ಹೊಂದಿದ್ದರು. ಹಾಲಿ ಅಧ್ಯಕ್ಷೆ ಪುಷ್ಪಾ ಅಮರನಾಥ್‌ ಅವರ ಅವಧಿ ಲೋಕಸಭೆ ಚುನಾವಣೆಗೆ ಮೊದಲೇ ಮುಗಿದಿತ್ತು. ಅಲ್ಲದೆ, ಸದ್ಯ ಅವರು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ರಾಜ್ಯಮಟ್ಟದ ಸಮಿತಿಯ ಉಪಾಧ್ಯಕ್ಷೆ. ಹೀಗಾಗಿ, ಒಬ್ಬರಿಗೆ ಒಂದೇ ಹುದ್ದೆ ಎಂಬ ನೀತಿಯಡಿ ಅವರು ಈ ಸ್ಥಾನವನ್ನು ತೆರವುಗೊಳಿಸಿದ್ದರು.

ಸೌಮ್ಯ ರೆಡ್ಡಿ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಅಖಿಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಲ್ಕಾ ಲಂಬಾ ಅವರು ರಾಜ್ಯದಲ್ಲಿ ಅಭ್ಯರ್ಥಿಯನ್ನು ಹುಡುಕುವ ಪ್ರಕ್ರಿಯೆ ಆರಂಭಿಸಿದ್ದರು. ಚರ್ಚೆಯ ವೇಳೆ ಕೃಪಾ ಅಮರ್ ಆಳ್ವ, ಕಮಲಾಕ್ಷಿ ರಾಜಣ್ಣ, ಐಶ್ವರ್ಯ ಮಹದೇವ್, ನಯನಾ ಮೋಟಮ್ಮ, ವೀಣಾ ಕಾಶಪ್ಪನವರ್ ಮತ್ತು ಕವಿತಾ ರೆಡ್ಡಿ ಹೆಸರು ಕೇಳಿಬಂದಿತ್ತು. ಅಂತಿಮವಾಗಿ ಹೈಕಮಾಂಡ್ ಸೌಮ್ಯ ರೆಡ್ಡಿಗೆ ಮಣೆ ಹಾಕಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ