ಮುಖ್ಯಮಂತ್ರಿ ಚಂದ್ರು 
ರಾಜಕೀಯ

ರಾಜ್ಯಪಾಲ ಗೆಹ್ಲೋಟ್ ಕೇಂದ್ರ ಸರ್ಕಾರದ ಕೈ ಗೊಂಬೆಯಾಗುತ್ತಿದ್ದಾರೆ: AAP

ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿದ್ದರೆ. ಬರಿ ಕರ್ನಾಟಕವಲ್ಲ ದೇಶದ ಬೇರೆ ರಾಜ್ಯಗಳಲ್ಲೂ ಈ ರೀತಿ ಉದಾಹರಣೆ ನೋಡಬಹುದು. ಖಾಸಗಿ ವ್ಯಕ್ತಿ ಕೊಟ್ಟಿರುವ ದೂರನ್ನು ಇಷ್ಟು ತೀವ್ರವಾಗಿ ಪರಿಗಣಿಸಿದ್ದಾರೆ.

ಮೈಸೂರು: ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರು ಕೇಂದ್ರ ಸರ್ಕಾರ ಕೈಗೊಂಬೆಯಾಗುತ್ತಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಶನಿವಾರ ಕಿಡಿಕಾರಿದೆ.

ಜಲದರ್ಶಿನಿಯಲ್ಲಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು, ರಾಜ್ಯಪಾಲರು ಕೇಂದ್ರದ ಕೈ ಗೊಂಬೆಯಾಗಿದ್ದರೆ. ಬರಿ ಕರ್ನಾಟಕವಲ್ಲ ದೇಶದ ಬೇರೆ ರಾಜ್ಯಗಳಲ್ಲೂ ಈ ರೀತಿ ಉದಾಹರಣೆ ನೋಡಬಹುದು. ಖಾಸಗಿ ವ್ಯಕ್ತಿ ಕೊಟ್ಟಿರುವ ದೂರನ್ನು ಇಷ್ಟು ತೀವ್ರವಾಗಿ ಪರಿಗಣಿಸಿದ್ದಾರೆ. ಅದೇ ಲೋಕಾಯುಕ್ತ ಅಧಿಕಾರಿಗಳು ಸಲ್ಲಿಸಿರುವ ಮನವಿಯನ್ನು ಯಾಕೆ ಇನ್ನು ಪರಿಗಣಿಸಿಲ್ಲ…? ಕುಮಾರಸ್ವಾಮಿ, ಜನಾರ್ಧನರೆಡ್ಡಿ, ಶಶಿಕಲಾ ಜೊಲ್ಲೆ ಮತ್ತು ಮುರುಗೇಶ್ ನಿರಾಣಿ ಅವರ ವಿರುದ್ದವು ಪ್ರಾಸಿಕ್ಯೂಷನ್ ಗೆ ಅನುಮತಿ ಕೇಳಿದರೆ ಅವರು ಕೇಂದ್ರದ ಸಚಿವರು ಎಂದು ಅನುಮತಿ ಕೊಟ್ಟಿಲ್ಲ. ಇದರಿಂದ ಸ್ಪಷ್ಟವಾಗಿ ಗೊತಾಗುತ್ತೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈ ಗೊಂಬೆಯಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇಷ್ಟು ದಿನಗಳಾದರೂ ಸ್ಥಳೀಯ ಸಂಸ್ಥೆ ಚುನಾವಣೆಗಳು ಆಗದೇ ಇರುವುದು ಸಂವಿಧಾನ ಬಾಹಿರ. ಸಾರ್ವಜನಿಕ ಹಿತಾಸಕ್ತಿಯಿಂದ ಸ್ಥಳೀಯ ಸಂಸ್ಥೆ ಚುನಾವಣೆ ಮಾಡಬೇಕು. ಸ್ಥಳೀಯ ಸಂಸ್ಥೆ ಚುನಾವಣೆ ಯಾವ ಸಂದರ್ಭದಲ್ಲಾದರೂ ಬರಬಹುದು. ಹೀಗಾಗಿ ಕಾರ್ಯಕರ್ತರನ್ನು ಸಂಘಟನೆ ಮಾಡುವ ಮೂಲಕ ಚುನಾವಣೆ ಎದುರಿಸಲು ಸಿದ್ದರಾಗಿದ್ದೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

ಯುವತಿ ಮೇಲೆ ಅತ್ಯಾಚಾರ ಆರೋಪ: ಹುಣಸಮಾರನಹಳ್ಳಿ ಮಠದ ನಂಜೇಶ್ವರ ಶಿವಾಚಾರ್ಯ ಸ್ವಾಮೀಜಿ ಬಂಧನ

ಹಾರ್ಮೊಜ್ ಮೇಲೆ ಈಗಲೂ ನಮ್ಮದೇ ನಿಯಂತ್ರಣ: ವಾಸ್ತವಕ್ಕೂ ಅಮೆರಿಕ ಹೇಳಿಕೆಗಳಿಗೂ ತಾಳೆಯಾಗುವುದಿಲ್ಲ- ಇರಾನ್

ಮೆಟ್ರೋ ರೈಲಿನಲ್ಲೇ ಮಹಿಳೆಯ ಪುಲ್‌ಅಪ್ಸ್‌ ಕಸರತ್ತು; ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ!