ಬಸನಗೌಡ ಪಾಟೀಲ್ ಯತ್ನಾಳ್ 
ರಾಜಕೀಯ

ಬಿಜೆಪಿ ಬಣ ಜಗಳ: ಹೈಕಮಾಂಡ್ ಶಿಸ್ತು ಸಮಿತಿಯಿಂದ ಶೋಕಾಸ್ ನೋಟಿಸ್ ಬಗ್ಗೆ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದೇನು?

ಇದೇ ವಿಷಯವಾಗಿ ಈ ಹಿಂದೆ ಹಲವು ಬಾರಿ ನಿಮಗೆ ಎಚ್ಚರಿಕೆ ನೀಡಲಾಗಿತ್ತು, ಆ ವೇಳೆ ಮುಂದೆ ಈ ರೀತಿಯ ತಪ್ಪಾಗದಂತೆ ಇರುವುದಾಗಿ ಹೇಳಿದ್ದೀರಿ, ಆದರೆ ಯಥಾ ಪ್ರಕಾರ ನಿಮ್ಮ ನಡವಳಿಕೆ ಮುಂದುವರಿಸಿದ್ದೀರಿ.

ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್ ನೀಡಿದೆ.

ರಾಜ್ಯ ಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು (ಬಸನಗೌಡ ಪಾಟೀಲ್ ಯತ್ನಾಳ್) ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸುತ್ತಿರುವ ಬಗ್ಗೆ ಪಕ್ಷದ ವಿವಿಧ ವೇದಿಕೆಗಳಲ್ಲಿ ವರದಿಯಾಗಿದೆ. ರಾಜಕೀಯ ಮತ್ತು ಸಾರ್ವಜನಿಕ ಪ್ರಾಮುಖ್ಯತೆಯ ಎಲ್ಲಾ ವಿಷಯಗಳ ಬಗ್ಗೆ ಪಕ್ಷದ ಅಧಿಕೃತ ನಿಲುವಿಗೆ ವಿರುದ್ಧವಾಗಿ ಸಾರ್ವಜನಿಕವಾಗಿ ನೀವು ಹೇಳಿಕೆಗಳನ್ನು ನೀಡುತ್ತಿರುವುದು ಮತ್ತು ನಿಲುವುಗಳನ್ನು ವ್ಯಕ್ತಪಡಿಸುತ್ತಿರುವುದು ಮಾಧ್ಯಮಗಳಲ್ಲಿ ಮತ್ತು ವಿವಿಧ ಪಕ್ಷದ ವೇದಿಕೆಗಳಲ್ಲಿ ವರದಿಯಾಗಿದೆ. ಈ ಹಿಂದೆಯೂ ಹಲವು ಬಾರಿ ಶೋಕಾಸ್ ನೋಟಿಸ್ ನೀಡಲಾಗಿತ್ತು. ಆಗ ನೀವು ಸದ್ವರ್ತನೆಯ ಭರವಸೆ ನೀಡಿದ್ದರೂ ಅಶಿಸ್ತಿನ ಕೃತ್ಯಗಳು ನಿಮ್ಮಿಂದ ಅವ್ಯಾಹತವಾಗಿ ನಡೆಯುತ್ತಿರುವುದು ಆತಂಕಕಾರಿ ಸಂಗತಿ. ಇದು ಪಕ್ಷದ ನಿಯಮಗಳ ಗಂಭೀರ ಉಲ್ಲಂಘನೆಯಾಗಿದೆ. ನಿಮ್ಮ ಹಿರಿತನ ಮತ್ತು ಪಕ್ಷದಲ್ಲಿನ ದೀರ್ಘಾವಧಿಯನ್ನು ಗಮನದಲ್ಲಿಟ್ಟುಕೊಂಡು, ಈ ಹಿಂದೆ ನೀವು ಸಲ್ಲಿಸಿದ ವಿವರಣೆಗಳ ಬಗ್ಗೆ ಕೇಂದ್ರ ಶಿಸ್ತು ಸಮಿತಿಯು ಮೃದುವಾದ ದೃಷ್ಟಿಕೋನವನ್ನು ತೆಗೆದುಕೊಂಡಿತ್ತು ಎಂದು ಶೋಕಾಸ್ ನೋಟಿಸ್​ನಲ್ಲಿ ಉಲ್ಲೇಖಿಸಲಾಗಿದೆ.

ಮುಂದುವರಿದು, ನಿಮ್ಮ ವಿರುದ್ಧ ಶಿಸ್ತು ಕ್ರಮ ಯಾಕೆ ಕೈಗೊಳ್ಳಬಾರದು ಎಂಬುದನ್ನು ತಿಳಿಸಿ. ಹತ್ತು ದಿನಗಳ ಒಳಗೆ ಪ್ರತಿಕ್ರಿಯೆ ನೀಡಬೇಕು. ಈ ಸಮಯದೊಳಗೆ ನಿಮ್ಮ ವಿವರಣೆಯನ್ನು ಸಲ್ಲಿಸದಿದ್ದಲ್ಲಿ, ಕೇಂದ್ರ ಶಿಸ್ತು ಸಮಿತಿಯು ನಿಮಗೆ ಹೇಳಲು ಏನೂ ಇರುವುದಿಲ್ಲ. ಈ ವಿಷಯದಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲು ಮುಂದುವರಿಯುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ ಎಂದು ಶೋಕಾಸ್ ನೋಟೀಸ್ ನಲ್ಲಿ ಉಲ್ಲೇಖಿಸಲಾಗಿದೆ.

ನ್ನೂ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಬಗ್ಗೆ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್, ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ತಿಳಿಸುತ್ತೇನೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ವಂಶವಾಹಿ ರಾಜಕೀಯ ಸಂಬಂಧ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

SCROLL FOR NEXT