ಬಸನಗೌಡ ಪಾಟೀಲ್ ಯತ್ನಾಳ್ PTI
ರಾಜಕೀಯ

ಕಾಂಗ್ರೆಸ್‌ನ ವಂಶಾಡಳಿತ ವಿರುದ್ಧ ಹೋರಾಡಬೇಕಾದ್ರೆ ರಾಜ್ಯ ಬಿಜೆಪಿಯಲ್ಲಿ ತಂದೆ, ಮಗನ ಕಿತ್ತೊಗೆಯಬೇಕು: ಯತ್ನಾಳ್

ಉತ್ತರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಆಂಧ್ರಪ್ರದೇಶಗಳು ಈಗ ಹಿಂದುತ್ವದತ್ತ ವಾಲುತ್ತಿರುವ ಕಾರಣ ನಮ್ಮ ಪಕ್ಷವು ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ, ವಂಶಾಡಳಿತ ರಾಜಕಾರಣದ ಕಪಿಮುಷ್ಠಿಯಿಂದ ಹೊರಬರಬೇಕು. ಅಲ್ಲದೆ ಹಿಂದುತ್ವದ ಪರ ಧ್ವನಿ ಗಟ್ಟಿಯಾಗಬೇಕು ಎಂದು ತಮ್ಮ ಪತ್ರದಲ್ಲಿ ಬರೆದಿರುವುದಾಗಿ ಹೇಳಿದರು.

ನವದೆಹಲಿ/ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಚಾಲ್ತಿಯಲ್ಲಿರುವ ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ ಮತ್ತು ವಂಶಾಡಳಿತ ರಾಜಕೀಯದ ಕುರಿತು ಪಕ್ಷದ ನಾಯಕತ್ವಕ್ಕೆ ವಿವರವಾಗಿ ವಿವರಿಸಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬುಧವಾರ ಹೇಳಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತು ಪಕ್ಷದ ನಿರ್ದೇಶನಗಳನ್ನು ಧಿಕ್ಕರಿಸಿ ಬಿಜೆಪಿಯಿಂದ ಶೋಕಾಸ್ ನೋಟಿಸ್ ಸಂಬಂಧ ಪ್ರತಿಕ್ರಿಯಿಸಿರುವ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿ ಕೇಂದ್ರ ಶಿಸ್ತು ಸಮಿತಿ (ಸಿಡಿಸಿ) ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಅವರಿಗೆ ಆರು ಪುಟಗಳ ಉತ್ತರವನ್ನು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ಉತ್ತರಪ್ರದೇಶ, ಅಸ್ಸಾಂ, ಮಹಾರಾಷ್ಟ್ರ, ಆಂಧ್ರಪ್ರದೇಶಗಳು ಈಗ ಹಿಂದುತ್ವದತ್ತ ವಾಲುತ್ತಿರುವ ಕಾರಣ ನಮ್ಮ ಪಕ್ಷವು ಹೊಂದಾಣಿಕೆ ರಾಜಕಾರಣ, ಬ್ರಹ್ಮಾಂಡ ಭ್ರಷ್ಟಾಚಾರ, ವಂಶಾಡಳಿತ ರಾಜಕಾರಣದ ಕಪಿಮುಷ್ಠಿಯಿಂದ ಹೊರಬರಬೇಕು. ಅಲ್ಲದೆ ಹಿಂದುತ್ವದ ಪರ ಧ್ವನಿ ಗಟ್ಟಿಯಾಗಬೇಕು ಎಂದು ತಮ್ಮ ಪತ್ರದಲ್ಲಿ ಬರೆದಿರುವುದಾಗಿ ಹೇಳಿದರು.

ಯಡಿಯೂರಪ್ಪ ಮತ್ತು ಅವರ ಕುಟುಂಬದ ವಿರುದ್ಧದ ಗಂಭೀರ ಪ್ರಕರಣಗಳು ಮತ್ತು ಹೊಂದಾಣಿಕೆ ರಾಜಕೀಯವನ್ನು ನಾನು ವಿವರಿಸಿದ್ದೇನೆ. ಯಡಿಯೂರಪ್ಪ ಕುಟುಂಬದ ಬಗ್ಗೆ ಅಸಮಾಧಾನ ಹೊಂದಿರುವ ಅನೇಕ ತಟಸ್ಥ ನಾಯಕರಿದ್ದಾರೆ. ಆದರೆ ಆಂತರಿಕ ಶಿಸ್ತಿನ ಕಾರಣದಿಂದ ಮಾಜಿ ಸಿಎಂ ವಿರುದ್ಧ ಯಾರೂ ಮಾತನಾಡುತ್ತಿಲ್ಲ ಎಂದು ಯತ್ನಾಳ್ ಹೇಳಿದರು.

ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ, ವಿಶೇಷವಾಗಿ ಬಿಎಸ್ವೈ ಪುತ್ರ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಗಂಭೀರ ಆರೋಪಗಳನ್ನು ಮಾಡುತ್ತಿದ್ದಾರೆ. ಕಾಂಗ್ರೆಸ್ ನ 'ವಂಶದ ರಾಜಕೀಯ' ವಿರುದ್ಧ ಪರಿಣಾಮಕಾರಿಯಾಗಿ ಹೋರಾಡಲು ಬಿಜೆಪಿ ಕೇಂದ್ರ ನಾಯಕತ್ವವು ಯಡಿಯೂರಪ್ಪ ಅವರ 'ವಂಶ ರಾಜಕೀಯ'ವನ್ನು ಪರಿಶೀಲಿಸಬೇಕು ಎಂದು ಒತ್ತಾಯಿಸಿರುವುದಾಗಿ ಹೇಳಿದರು.

ಯತ್ನಾಳ್ ಅವರು ಶಾಸಕ ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಮಹೇಶ್ ಕುಮಟಹಳ್ಳಿ, ಮಧು ಬಂಗಾರಪ್ಪ ಸೇರಿದಂತೆ ಬಿಜೆಪಿಯ ಕೆಲವು ಹಿರಿಯ ನಾಯಕರೊಂದಿಗೆ ಬೀದರ್‌ನಿಂದ ಚಾಮರಾಜನಗರದವರೆಗೆ ಒಂದು ತಿಂಗಳ ಕಾಲ ವಕ್ಫ್ ವಿರೋಧಿ ಪಾದಯಾತ್ರೆ ನಡೆಸಿದ್ದಾರೆ. ನವೆಂಬರ್ 25 ರಂದು ಆರಂಭವಾದ ಮೆರವಣಿಗೆ ಡಿಸೆಂಬರ್ 25 ರಂದು ಮುಕ್ತಾಯಗೊಳ್ಳಲಿದೆ. ಬಿಜೆಪಿ ಹೈಕಮಾಂಡ್ ಅನುಮತಿ ಇಲ್ಲದಿದ್ದರೂ ಯತ್ನಾಳ್ ಪಾದಯಾತ್ರೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT