ಡಿಸಿಎಂ ಡಿ.ಕೆ ಶಿವಕುಮಾರ್ 
ರಾಜಕೀಯ

ಬಲ ಪ್ರದರ್ಶನ ಅಗತ್ಯವಿಲ್ಲ, ನಮ್ಮ ಆಚಾರ-ವಿಚಾರ ಜನರಿಗೆ ತಲುಪಿಸಿದರೆ ವಿಪಕ್ಷಗಳಿಗೇಕೆ ಹೊಟ್ಟೆಯುರಿ: ಡಿ.ಕೆ ಶಿವಕುಮಾರ್

ಹಾಸನದಲ್ಲಿ ನಮ್ಮ ತಾಯಂದಿರು ಕಣ್ಣೀರು ಹಾಕಿದಾಗ ಅವರ ಕಣ್ಣೀರನ್ನು ಯಾರೂ ಒರೆಸುವ ಪ್ರಯತ್ನ ಮಾಡಲಿಲ್ಲ. ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕಿದರು. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ.

ಬೆಂಗಳೂರು: ನಮಗೆ ಬಲ ಪ್ರದರ್ಶನದ ಅಗತ್ಯವಿಲ್ಲ. ನಮ್ಮ ಪಕ್ಷದ ಆಚಾರ ವಿಚಾರಗಳನ್ನು ಜನರಿಗೆ ತಿಳಿಸಲು ಕಾರ್ಯಕ್ರಮ ಮಾಡಿದರೆ ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಹೊಟ್ಟೆಯುರಿ ಏಕೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು.

ಹಾಸನದ ಸ್ವಾಭಿಮಾನಿ ಸಮಾವೇಶಕ್ಕೆ ತೆರಳುವ ಮುನ್ನ ಮಾತನಾಡಿದ ಅವವರು, ನಮ್ಮ ಪಕ್ಷ ಹಾಗೂ ಅನೇಕ ಸ್ವಾಭಿಮಾನಿ ಸಂಘಟನೆಗಳು ಸೇರಿ ಮಾಡುತ್ತಿರುವ ಕಾರ್ಯಕ್ರಮ. ಮುಂದೆ ಬೇರೆ ಜಿಲ್ಲೆಗಳಲ್ಲಿ ನಡೆಯುವ ಕಾರ್ಯಕ್ರಮಕ್ಕೆ ನಾವು ಸಹಕಾರ ನೀಡುತ್ತೇವೆ ಎಂದು ಅನೇಕ ಸಂಘಟನೆಗಳು ಮುಂದೆ ಬಂದಿವೆ. ಹಾಸನದಲ್ಲಿ ನಮ್ಮ ತಾಯಂದಿರು ಕಣ್ಣೀರು ಹಾಕಿದಾಗ ಅವರ ಕಣ್ಣೀರನ್ನು ಯಾರೂ ಒರೆಸುವ ಪ್ರಯತ್ನ ಮಾಡಲಿಲ್ಲ. ಚನ್ನಪಟ್ಟಣಕ್ಕೆ ಬಂದು ಕಣ್ಣೀರು ಹಾಕಿದರು. ಬಿಜೆಪಿ ಹಾಗೂ ಜೆಡಿಎಸ್ ತಮ್ಮ ನೆಲೆ ಕಳೆದುಕೊಳ್ಳುತ್ತಿದ್ದು, ಸಂಕಟದಿಂದ ನಮ್ಮ ಕಾರ್ಯಕ್ರಮವನ್ನು ಟೀಕಿಸುತ್ತಿವೆ ಎಂದು ತಿಳಿಸಿದರು.

ಅಧಿಕಾರ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪರಮೇಶ್ವರ ಅವರ ಅಸಮಾಧಾನದ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ನಿಮ್ಮ ಮುಂದೆ ಏನೂ ಮಾತನಾಡಿಲ್ಲ. ಪರಮೇಶ್ವರ ಹಾಗೂ ಇತರರ ಜತೆ ಮಾತನಾಡಿಲ್ಲ. ನಾನು ವಾಹಿನಿಯಂದರಲ್ಲಿ ನನ್ನದೇ ಆದ ವಿಚಾರ ಪ್ರಸ್ತಾಪ ಮಾಡಿದ್ದೆ. ನಾವು ಏನು ಮಾತನಾಡಿಕೊಂಡಿದ್ದೇವೆ ಎಂದು ನಿಮ್ಮ ಮುಂದೆ ಹೇಳಲು ಸಾಧ್ಯವೇ? ಈ ವಿಚಾರವಾಗಿ ಮುಖ್ಯಮಂತ್ರಿಗಳು ನಿನ್ನೆ ಯಾವುದೇ ಚರ್ಚೆ ಇಲ್ಲ ಎಂದು ಹೇಳಿದ್ದು, ನಾನು ಚರ್ಚೆ ಮಾಡುವುದಿಲ್ಲ ಎಂದು ಒಪ್ಪಿಕೊಂಡಿದ್ದೇನೆ. ಮುಖ್ಯಮಂತ್ರಿಗಳ ಮಾತನ್ನು ನಾನು ಒಪ್ಪುತ್ತೇನೆ. ಸದ್ಯಕ್ಕೆ ಅಧಿಕಾರ ಹಸ್ತಾಂತರದ ಪ್ರಸ್ತಾಪವಿಲ್ಲ. ಯಾವುದೇ ಸಮಸ್ಯೆ ಇಲ್ಲದೆ ನಮ್ಮ ಸರಕಾರದ ಅಧಿಕಾರ ಅವಧಿ ಪೂರ್ಣಗೊಳಿಸುತ್ತೇವೆ” ಎಂದರು. ನಿಮ್ಮ ಹಾಗೂ ಪರಮೇಶ್ವರ ಅವರ ನಡುವೆ ಭಿನ್ನಾಭಿಪ್ರಾಯಗಳಿವೆಯೇ ಎಂದು ಕೇಳಿದಾಗ, “ನನಗೆ ಯಾರ ಜತೆಯೂ ಭಿನ್ನಾಭಿಪ್ರಾಯವಿಲ್ಲ. ರಾಜಕೀಯದಲ್ಲಿ ನನಗೆ ಯಾರೂ ವೈರಿಗಳಲ್ಲ. ಎಲ್ಲರೂ ನನ್ನ ಸ್ನೇಹಿತರೇ. ಪಕ್ಷದಲ್ಲಿ ನಾವು ಜತೆಗೂಡಿ ಕೆಲಸ ಮಾಡಿದ್ದು, ಮುಂದೆಯೂ ಜತೆಯಲ್ಲೇ ಸಾಗುತ್ತೇವೆ. ಜತೆಗೂಡಿ ಯಶಸ್ಸು ಕಾಣುತ್ತೇವೆ” ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ, ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ 'ಸುಪ್ರೀಂ' ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

WPL 2026 auction: ಈ ಬಾರಿಯ 'ಮೋಸ್ಟ್ ಡಿಮ್ಯಾಂಡ್' ಆಟಗಾರ್ತಿ ಯಾರು?

SCROLL FOR NEXT