ಡಿಕೆ ಶಿವಕುಮಾರ್ 
ರಾಜಕೀಯ

ಸಿದ್ದರಾಮಯ್ಯ ಜತೆ ಈ ಬಂಡೆ ಸಾಯೋವರೆಗೂ ಇರುತ್ತೆ: ಸಿಎಂ ಅಭಿಮಾನಿಗಳಿಗೆ ಡಿಕೆಶಿ ಅಭಯ

ಇಂದು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ಬೃಹತ್‌ ಜನಕಲ್ಯಾಣ ಸಮಾವೇಶ ನಡೆಯಿತು.

ಹಾಸನ: ಈ ಬಂಡೆ ಯಾವತ್ತಿದ್ದರೂ ಸಿದ್ದರಾಮಯ್ಯನವರ ಜತೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಅವರ ಜತೆ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ ಜತೆ ಇರುತ್ತೇನೆ. ನೀವು ಯಾರೂ ತಲೆ ಕೆಡಿಸಿಕೊಳ್ಳಬೇಡಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಗುರುವಾರ ಸಿಎಂ ಸಿದ್ದರಾಮಯ್ಯನವರ ಅಭಿಮಾನಿಗಳಿಗೆ ಭರವಸೆ ನೀಡಿದರು.

ಇಂದು ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಾಗೂ ಸ್ವಾಭಿಮಾನಿ ಸಮಿತಿಯ ಆಶ್ರಯದಲ್ಲಿ ನಡೆದ ಬೃಹತ್‌ ಜನಕಲ್ಯಾಣ ಸಮಾವೇಶ ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ನಾನು ಎಲ್ಲಿ ಇರುತ್ತೇನೆ ಅಲ್ಲಿ ಪ್ರಾಮಾಣಿಕವಾಗಿಯೇ ಇರುತ್ತೇನೆ. ಈ ಹಾಸನದ ಇತಿಹಾಸ ನೋಡಿದರೆ ನೋವಾಗುತ್ತೆ. ಹಲವು ಕುಟುಂಬಗಳು ನೋವು ಅನುಭವಿಸಿವೆ. ಹಾಸನಾಂಬೆ ಆ ಹೆಣ್ಣುಮಕ್ಕಳನ್ನು ರಕ್ಷಣೆ ಮಾಡಬೇಕು ಎಂದರು.

ಈ ಜಿಲ್ಲೆಯಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶಗೊಂಡು, ನೊಂದ ತಾಯಂದಿರಿಗೆ ಧೈರ್ಯ ತುಂಬಲು ಹಾಸನ ಜಿಲ್ಲೆಯ ಜನ ಸಂಸದ ಶ್ರೇಯಸ್ ಪಟೇಲ್ ಅವರಿಗೆ ಆರ್ಶೀವಾದ ಮಾಡಿದ್ದಾರೆ ಎಂದರು.

ಈ ಜಿಲ್ಲೆಯನ್ನು ನೋಡಿದರೆ ಸಂಕಟವಾಗುತ್ತದೆ. ಹಾಸನದ ಮಾಜಿ ಸಂಸದರ ಬಗ್ಗೆ ಮಾತನಾಡಲು ಅಸಹ್ಯವಾಗುತ್ತದೆ. ಬಿಜೆಪಿ ಮತ್ತು ಜೆಡಿಎಸ್ ನವರಿಗೆ ಉಪ ಚುನಾವಣೆಯಲ್ಲಿ ಜನ ತಕ್ಕ ಉತ್ತರ ನೀಡಿದ್ದಾರೆ. ಜಿಲ್ಲೆಯ ತಾಯಂದಿರ ಸ್ವಾಭಿಮಾನ ಉಳಿಸುವ ಉದ್ದೇಶದಿಂದ ಈ ಸಮಾವೇಶ ಆಯೋಜಿಸಿದ್ದೇವೆ ಎಂದು ಡಿಸಿಎಂ ಹೇಳಿದರು.

ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದವರೂ ಅಧಿಕಾರಕ್ಕೆ ಬಂದಂತೆ. ನಮ್ಮ ಗ್ಯಾರಂಟಿಗಳ ಶಕ್ತಿಯಿಂದ ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅದ್ವಿತೀಯ ಗೆಲುವು ಸಾಧಿಸಿದೆ. ಇದು ಕೇವಲ ಜನಕಲ್ಯಾಣ ಸಮಾವೇಶವಲ್ಲ, ಗ್ಯಾರಂಟಿಗಳ ಗೆಲುವಿನ ಸಮಾವೇಶವಾಗಿದೆ. ಕಾಂಗ್ರೆಸ್ ಪಕ್ಷ ಭಾವನೆಗಳ ಮೇಲೆ ರಾಜಕಾರಣ ಮಾಡುವುದಿಲ್ಲ, ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತದೆ ಎಂದರು.

ನಮ್ಮ ಸರ್ಕಾರವನ್ನು ಕಿತ್ತೆಸೆಯುತ್ತೇವೆ ಎಂದು ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದರು. ಇದಕ್ಕೆ ಜನರೇ ಉತ್ತರ ಕೊಟ್ಟಿದ್ದಾರೆ. ನಾವು ವಚನ ಪಾಲಕರು, ವಚನ ಭ್ರಷ್ಟರಲ್ಲ. ಜನರಿಗೆ ಕೊಟ್ಟ ಮಾತುಗಳನ್ನು ನಾವು ಉಳಿಸಿಕೊಂಡಿದ್ದೇವೆ. ಜನರ ಬದುಕಿಗಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದೇವೆ. ಜನರ ನಂಬಿಕೆ ಹಾಗೂ ವಿಶ್ವಾಸವೇ ನಮಗೆ ಶಕ್ತಿ. ಈ ದೇಶಕ್ಕೆ ಅಂಬೇಡ್ಕರ್ ಅವರು ನೀಡಿದ ಸಂವಿಧಾನವನ್ನು ನಾವು ಉಳಿಸಿಕೊಳ್ಳಬೇಕು. ಹಾಸನದ ಸ್ವಾಭಿಮಾನ ಉಳಿಸಲು ಈ ಸಮಾವೇಶ ಸಹಕಾರಿಯಾಗಿದೆ. ಜನಪರ ಆಡಳಿತ ನೀಡುತ್ತಿರುವ ಕಾಂಗ್ರೆಸ್ ಸರ್ಕಾರ 2028ರಲ್ಲೂ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT