ಸಂತೋಷ್ ಮತ್ತು ನಿಖಿಲ್ 
ರಾಜಕೀಯ

BL ಸಂತೋಷ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ: ಭವಿಷ್ಯದ ರಾಜಕೀಯಕ್ಕಾಗಿ ಸಲಹೆ-ಮಾರ್ಗದರ್ಶನ

ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು.

ನವದೆಹಲಿ: ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ನಂತರ ನವದೆಹಲಿಗೆ ತೆರಳಿರುವ ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದರು.

ಈ ಸಂದರ್ಭದಲ್ಲಿ ಬಿ.ಎಲ್. ಸಂತೋಷ್ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಜೀವನ – ಸಾಧನೆ ಕುರಿತ Furrows in a Field: The Unexplored Life of H.D. Deve Gowda ಗ್ರಂಥವನ್ನು ನೀಡಿ ಆಶೀರ್ವಾದ ಪಡೆದುಕೊಂಡ ನಿಖಿಲ್ ಅವರು, ಉಪ ಚುನಾವಣೆ, ಆ ನಂತರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಲವು ಅಂಶಗಳನ್ನು ಅವರ ಗಮನಕ್ಕೆ ತಂದರು. ಚನ್ನಪಟ್ಟಣ ಚುನಾವಣೆಯ ಬಗ್ಗೆ ಸಂತೋಷ್ ಅವರು ಕೆಲ ಮಾಹಿತಿಗಳನ್ನು ನಿಖಿಲ್ ಅವರಿಂದ ಪಡೆದುಕೊಂಡರು ಹಾಗೂ ಮುಂದಿನ ರಾಜಕೀಯ ಬೆಳವಣಿಗೆ ದೃಷ್ಟಿಯಿಂದ ನಿಖಿಲ್ ಅವರಿಗೆ ಮಹತ್ವದ ಸಲಹೆ ಸೂಚನೆ ಮಾರ್ಗದರ್ಶನ ನೀಡಿದರು.

ಈ ಬಗ್ಗೆ ಮಾಹಿತಿ ನೀಡಿರುವ ನಿಖಿಲ್ ಕುಮಾರಸ್ವಾಮಿ ಅವರು, ದೆಹಲಿ ಭೇಟಿ ವೇಳೆ ಸಂತೋಷ್ ಜೀ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದುಕೊಂಡೆ. ಚನ್ನಪಟ್ಟಣ ಚುನಾವಣೆ ಕುರಿತಂತೆ ಕೆಲ ಮಾಹಿತಿಗಳನ್ನು ಕೇಳಿ ಪಡೆದುಕೊಂಡರು. ನನ್ನ ರಾಜಕೀಯ ಬೆಳವಣಿಗೆ ಹಾಗೂ ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟವನ್ನು ಬಲಗೊಳಿಸುವ ನಿಟ್ಟಿನಲ್ಲಿ ಮಾರ್ಗದರ್ಶನ ನೀಡಿದರು ಎಂಬುದಾಗಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್