ವಿಧಾನಸಭೆಯಲ್ಲಿ 'ವಡ್ಡ' ಪದ ಬಳಕೆ: ಡಿಸಿಎಂ ಡಿ ಕೆ ಶಿವಕುಮಾರ್ ವಿಷಾದ
ಭೋವಿ ಸಮುದಾಯದ ಬಗ್ಗೆ ತಮಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ ಅಲ್ಲ.
ಬೆಳಗಾವಿ: ಸುವರ್ಣ ವಿಧಾನಸಭೆಯಲ್ಲಿ ಮಾಜಿ ಸಿಎಂ ದಿವಂಗತ ಎಸ್.ಎಂ. ಕೃಷ್ಣ ಅವರಿಗೆ ತಾವು ಸಂತಾಪ ಸೂಚಿಸಿ ನಿನ್ನೆ ಮಾತನಾಡುವಾಗ ವಡ್ಡ ಪದ ಬಳಸಿದ್ದರಿಂದ ಯಾರಿಗಾದರೂ ನೋವಾಗಿದ್ದಾರೆ ವಿಷಾದ ವ್ಯಕ್ತಪಡಿಸುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಭೋವಿ ಸಮುದಾಯದ ಬಗ್ಗೆ ತಮಗೆ ಅಪಾರ ಗೌರವವಿದೆ. ನನ್ನನ್ನು ನಾನೇ ಟೀಕೆ ಮಾಡಿಕೊಳ್ಳುವ ಬರದಲ್ಲಿ ಆ ಪದ ಬಳಸಿದ್ದೇಯೇ ಹೊರತು ಯಾರಿಗೂ ನೋವು ಉಂಟು ಮಾಡುವ ಉದ್ದೇಶದಿಂದ ಅಲ್ಲ ಎಂದು ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.