ಸಿ.ಟಿ.ರವಿ, ಬಿಕೆ ಹರಿಪ್ರಸಾದ್ 
ರಾಜಕೀಯ

ಬೆಳಗಾವಿ ಅಧಿವೇಶನ: ಪರಿಷತ್ತಿನಲ್ಲಿ ಒಳ ಮೀಸಲಾತಿ, ಮುಡಾ ಹಗರಣದ ಬಗ್ಗೆ ಚರ್ಚೆ ಕಾಂಗ್ರೆಸ್- ಬಿಜೆಪಿ ಶಾಸಕರ ನಡುವೆ ವಾಕ್ಸಮರ

RSS ಮತ್ತು ಸಂಘ ಪರಿವಾರಕ್ಕೆ ಮಂಜೂರಾದ ಜಮೀನು ಮತ್ತುಈ ಭೂಮಿಗೆ ಎಷ್ಟು ಹಣ ನೀಡಿದ್ದಾರೆ ಎಂಬುದರ ತನಿಖೆಗೆ ವಿಜಯೇಂದ್ರ ಒತ್ತಾಯಿಸಬೇಕು ಎಂದು ಬಿಕೆ ಹರಿಪ್ರಸಾದ್ ಹೇಳಿದರು

ಬೆಳಗಾವಿ: ವಿಧಾನಪರಿಷತ್ತಿನಲ್ಲಿಂದು ಒಳ ಮೀಸಲಾತಿ ಹಾಗೂ ಮುಡಾ ಪ್ರಕರಣ ಪ್ರತಿಧ್ವನಿಸಿ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಮಾತಿನ ಚಕಮಕಿಗೆ ಕಾರಣವಾಯಿತು. ಮುಡಾ ಹಗರಣ ಕುರಿತು ಸಿಬಿಐ ತನಿಖೆ ನಡೆಯಬೇಕು ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಬೇಡಿಕೆಗೆ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ತೀಕ್ಷ್ಣವಾಗಿ ಉತ್ತರ ನೀಡುವ ಮೂಲಕ ಅವರ ನಿಲುವನ್ನು ಪ್ರಶ್ನಿಸಿದರು.

RSS ಮತ್ತು ಸಂಘ ಪರಿವಾರಕ್ಕೆ ಮಂಜೂರಾದ ಜಮೀನು ಮತ್ತುಈ ಭೂಮಿಗೆ ಎಷ್ಟು ಹಣ ನೀಡಿದ್ದಾರೆ ಎಂಬುದರ ತನಿಖೆಗೆ ವಿಜಯೇಂದ್ರ ಒತ್ತಾಯಿಸಬೇಕು ಎಂದು ಬಿಕೆ ಹರಿಪ್ರಸಾದ್ ಹೇಳಿದರು. ಬಲ ಪಂಥೀಯ ಸಂಘಟನೆಗಳೊಂದಿಗೆ ಬಿಜೆಪಿ ಮೈತ್ರಿ ಕಡೆಗೆ ಗಮನ ಕೇಂದ್ರೀಕರಿಸಿ ಮಾತನಾಡಿದ ಹರಿಪ್ರಸಾದ್, ಅವರ ಭೂ ವ್ಯವಹಾರಗಳ ಕುರಿತು ಹೆಚ್ಚಿನ ಪರಿಶೀಲನೆಗೆ ಕರೆ ನೀಡಿದರು.

ಹರಿಪ್ರಸಾದ್ ಸುಪ್ರೀಂ ಕೋರ್ಟ್ ನ ತೀರ್ಪನ್ನು ಉಲ್ಲೇಖಿಸಿದಾಗ ಒಳಮೀಸಲಾತಿ ವಿಷಯದತ್ತ ಚರ್ಚೆ ಹೊರಳಿತು. ಸುಪ್ರೀಂ ಕೋರ್ಟ್ ಒಳ ಮೀಸಲಾತಿಗೆ ನಿರ್ದೇಶನ ನೀಡಿದೆ. ಯಾರೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದನ್ನು ಜಾರಿಗೊಳಿಸಬೇಕು ಎಂದು ಅವರು ಪ್ರತಿಪಾದಿಸಿದರು.

ಇದಕ್ಕೂ ಮುನ್ನಾ ಮಾತನಾಡಿದ ಬಿಜೆಪಿ ನಾಯಕ ಸಿ.ಟಿ. ರವಿ. ಒಳ ಮೀಸಲಾತಿ ವಿಚಾರದಲ್ಲಿ ರಾಜ್ಯ ಸರ್ಕಾರವೇ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ. ನಾವು ಮಾಧುಸ್ವಾಮಿ ವರದಿಯನ್ನು ಜಾರಿಗೊಳಿಸಿದ್ದೇವೆ. ಅದರಡಿ ಎಲ್ಲಾ ಸಮುದಾಯಗಳಿಗೆ ನ್ಯಾಯವನ್ನು ನೀಡಿದ್ದೇವೆ ಎಂದರು. ಜನರು ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿಯನ್ನು ಒಪ್ಪುತ್ತಿಲ್ಲ. ಸರ್ಕಾರ ಮಾಧುಸ್ವಾಮಿ ವರದಿಯನ್ನು ಬೆಂಬಲಸಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ ಎಂದು ಹೇಳಿದರು.

ಸೋಮವಾರ ಲಿಂಗಾಯಿತ ಪಂಚಮಸಾಲಿ ಸಮುದಾಯದ ಹೋರಾಟಗಾರರ ಮೇಲೆ ನಡೆದ ಪೊಲೀಸ್ ಲಾಠಿ ಚಾರ್ಜನ್ನು ಟೀಕಿಸಿದ್ದ ವಿಜಯೇಂದ್ರ, ಇದು ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ದುರಂಹಕಾರಕ್ಕೆ ಸ್ಪಷ್ಟ ಉದಾಹರಣೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT