ಪ್ರಧಾನಿ ಮೋದಿ ಭೇಟಿಯಾದ ಬಿ.ವೈ. ವಿಜಯೇಂದ್ರ 
ರಾಜಕೀಯ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರ್ಣ: ಪ್ರಧಾನಿ ಮೋದಿ ಭೇಟಿಯಾಗಿ ಆಶೀರ್ವಾದ ಪಡೆದ ವಿಜಯೇಂದ್ರ!

ಧಾನಿಯ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ

ಬೆಂಗಳೂರು: ನಾಯಕತ್ವ ಬದಲಾವಣೆ ವದಂತಿ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ನವದೆಹಲಿಯ ಅವರ ಕಚೇರಿಯಲ್ಲಿ ಬುಧವಾರ ಭೇಟಿಯಾದ ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಆಶೀರ್ವಾದ ಪಡೆದರು.

ಸಭೆ ನಂತರ ಮಾತನಾಡಿದ ವಿಜಯೇಂದ್ರ, ಪ್ರಧಾನಿಯ ಆಶೀರ್ವಾದದ ಮಾರ್ಗದರ್ಶನ ರಾಜ್ಯದಲ್ಲಿ ಪಕ್ಷ ಕಟ್ಟುವ ಕಾರ್ಯಕ್ಕೆ ಅದಮ್ಯ ಉತ್ಸಾಹ ತುಂಬಿದೆ. ಇಂದಿನ ಅವರ ಭೇಟಿಯ ಸಂದರ್ಭದ ಮಾತುಗಳು ಸಂಘಟನೆಯ ಬಲವೃದ್ಧಿಯ ಜೊತೆ ಜೊತೆಗೇ ರಾಷ್ಟ್ರ ಬಲಿಷ್ಠಗೊಳಿಸುವ ಮಹಾ ಕಾರ್ಯದಲ್ಲಿ ಯುವಜನರ ಸಹಭಾಗಿತ್ವ ನಿರೀಕ್ಷೆ ಮೀರಿ ತೊಡಗಿಸಿಕೊಳ್ಳುವಂತೆ ಕಾರ್ಯಕ್ರಮಗಳನ್ನು ರೂಪಿಸಲು ಪ್ರೇರಣೆ ನೀಡಿತು ಎಂದು ತಿಳಿಸಿದರು.

ವಿಕಸಿತ ಭಾರತ ನಿರ್ಮಾಣಕ್ಕಾಗಿ ಮಹಾಸಂಕಲ್ಪ ತೊಟ್ಟು ತಪಸ್ವಿ ಸಾಧಕರಂತೆ ದೇಶ ಕಟ್ಟುವ ಕಾಯಕದಲ್ಲಿ ತಮ್ಮನ್ನು ಸಮರ್ಪಿಸಿಕೊಂಡಿರುವ ಹೆಮ್ಮೆಯ ಪ್ರಧಾನಿ ಮೋದಿಜೀಯವರ ಕಾರ್ಯ ಶೈಲಿ ನಮ್ಮಂಥ ಕಾರ್ಯಕರ್ತರಿಗೆ ನಿತ್ಯ ಚೈತನ್ಯದ ಚಿಲುಮೆಯಾಗಿದೆ ಎಂದರು.

ಭಾರತದ ಆರ್ಥಿಕ, ಔದ್ಯೋಗಿಕ, ಶೈಕ್ಷಣಿಕ ಕ್ಷೇತ್ರಗಳ ಪ್ರಗತಿ ಜಾಗತಿಕ ಮಟ್ಟದಲ್ಲಿ ಅಗ್ರ ಸಾಧನೆಗೈಯಲು ಮಹತ್ವದ ಪಾತ್ರ ವಹಿಸಲಿದ್ದು ಈ ನಿಟ್ಟಿನಲ್ಲಿ ಕರ್ನಾಟಕದ ಕೊಡುಗೆ ಮುಂಚೂಣಿ ಸ್ಥಾನದಲ್ಲಿರುವಂತೆ ಕಾಳಜಿ ವಹಿಸಲು ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತಾಗಬೇಕು, ಇದಕ್ಕಾಗಿ ಪಕ್ಷದ ಕಾರ್ಯಕರ್ತರು ಯೋಜಿತವಾಗಿ ತೊಡಗಿಸಿಕೊಳ್ಳಲು ಕಾರ್ಯಕ್ರಮ ರೂಪಿಸಲು ನರೇಂದ್ರ ಮೋದಿ ಅವರು ಸೂಚಿಸಿರುವುದಾಗಿ ತಿಳಿಸಿದರು.

ಜನವರಿಯಲ್ಲಿ ವಿಜಯೇಂದ್ರ ಅವರನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಬದಲಾಯಿಸಲಾಗುತ್ತದೆ ಎಂಬ ಬಿಜೆಪಿಯ ಕೆಲ ನಾಯಕರ ಹೇಳಿಕೆ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗಿನ ಭೇಟಿ ಮಹತ್ವ ಪಡೆದುಕೊಂಡಿದೆ. ಬಿಜೆಪಿಯ ಹಿರಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ ಜಾರಕಿಹೊಳಿ, ಅರವಿಂದ ಬೆಲ್ಲದ್, ಸಿ.ಟಿ. ರವಿ, ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಮತ್ತು ಇತರ ಹಿರಿಯ ನಾಯಕರು ವಿಜಯೇಂದ್ರ ಅವರ ಕಾರ್ಯವೈಖರಿಯಿಂದ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಜಿ ಸಿಎಂ ಯಡಿಯೂರಪ್ಪ ಕಾರಣದಿಂದ ರಾಜ್ಯ ರಾಜಕೀಯದಿಂದ ದೂರ ಉಳಿದಿರುವ ಆರ್ ಎಸ್ ಎಸ್ ನ ಹಿರಿಯ ಪದಾಧಿಕಾರಿಯೊಬ್ಬರು ವಿಜಯೇಂದ್ರ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಮತ್ತು ಜಗದೀಶ್ ಶೆಟ್ಟರ್ ಕೂಡ ವಿಜಯೇಂದ್ರ ನಾಯಕತ್ವವನ್ನು ಇಷ್ಟಪಡುತ್ತಿಲ್ಲ ಎನ್ನಲಾಗಿದೆ.

ಎಲ್ಲಾ ವಿರೋಧಿಗಳು ವಿಜಯೇಂದ್ರ ಮತ್ತು ಅವರ ತಂದೆ ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಲು ಶಾಸಕ ಯತ್ನಾಳ್ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಪಕ್ಷದ ಹೈಕಮಾಂಡ್ ಎಚ್ಚರಿಕೆಯ ನಡುವೆಯೂ ಶಾಸಕ ಯತ್ನಾಳ್ ಮಂಗಳವಾರ ವಿಜಯೇಂದ್ರ ಮತ್ತು ಯಡಿಯೂರಪ್ಪ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗಷ್ಟೇ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಸೋಲಿನ ನಂತರ, ಯಡಿಯೂರಪ್ಪ ಹಾಗೂ ವಿಜಯೇಂದ್ರ ಈ ಸೋಲಿನ ಹೊಣೆ ಹೊರಬೇಕು ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದರು.

ಆದರೆ ವಿಜಯೇಂದ್ರ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬಲ್ಲಾ ಮಾಸ್ ಲೀಡರ್ ಆಗಿ ಹೊರಹೊಮ್ಮುತ್ತಿದ್ದಾರೆ. ಅವರನ್ನು ಬೆಳೆಸುವಲ್ಲಿ ಪಕ್ಷ ವಿಫಲವಾದರೆ ದೊಡ್ಡ ನಷ್ಟವಾಗಲಿದೆ ಎಂದು ವಿಜಯೇಂದ್ರ ಪರ ಬೆಂಬಲಿಗರು ಹೇಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT