ಡಿ.ಕೆ ಶಿವಕುಮಾರ್ 
ರಾಜಕೀಯ

ಬಿಜೆಪಿಗೆ ಮಾನ- ಮರ್ಯಾದೆ ಇಲ್ಲ; ಸಂಸ್ಕೃತಿ ಬಗ್ಗೆ ಮಾತನಾಡುವವರಿಂದ ಭಾರತ ಮಾತೆಗೆ ಅವಮಾನ: ಡಿ.ಕೆ ಶಿವಕುಮಾರ್

ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ.

ಬೆಳಗಾವಿ: ಬಿಜೆಪಿ ಪಕ್ಷ ಹಾಗೂ ಅದರ ನಾಯಕರಿಗೆ ಮಾನ ಮರ್ಯಾದೆ ಇಲ್ಲ. ಬಿಜೆಪಿಯಿಂದ ಇಡೀ ದೇಶಕ್ಕೆ ಅವಮಾನ. ಆ ಪಕ್ಷಕ್ಕೆ ಇದು ಅವಮಾನ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು.

ಬೆಳಗಾವಿ ಸುವರ್ಣಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು. ವಿಧಾನ ಪರಿಷತ್ತಿನಲ್ಲಿ ಬಿಜೆಪಿ ಸದಸ್ಯ ಸಿ.ಟಿ. ರವಿ ಅವರು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಬಗ್ಗೆ ಕೇಳಿದಾಗ ಶಿವಕುಮಾರ್ ಅವರು, "ಬಿಜೆಪಿ ನಾಯಕರು ಸದನದಲ್ಲಿ ನಡೆದುಕೊಂಡ ರೀತಿಗೆ ನಾಚಿಕೆಯಾಗಬೇಕು. ಯಾವಾಗಲು ಧರ್ಮ, ಸಂಸ್ಕೃತಿ ಬಗ್ಗೆ ಮಾತನಾಡುವ ಅವರು ಭಾರತ ಮಾತೆಗೆ, ಮಾತೃಭೂಮಿಗೆ ಅಪಮಾನ ಮಾಡಿದ್ದಾರೆ. ಶಾಸಕ ಮುನಿರತ್ನ ವಿಚಾರದಲ್ಲಿಯೂ ಬಿಜೆಪಿ ಹೀಗೆ ವರ್ತನೆ ಮಾಡಿತು" ಎಂದು ಕಿಡಿಕಾರಿದರು.

ಸರ್ಕಾರ ಅವರ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳುವುದೇ ಎಂದು ಕೇಳಿದಾಗ, "ಕಾನೂನೇ ಅವರ ಮೇಲೆ ಕ್ರಮ ತೆಗೆದುಕೊಳ್ಳಲಿದೆ, ಸರ್ಕಾರವಲ್ಲ" ಎಂದು ತಿಳಿಸಿದರು. ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿ, "ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದ ಬಳಕೆ ಪ್ರಕರಣದಲ್ಲಿ ಸಿ.ಟಿ.ರವಿ ಬಂಧನ ವಿಷಯವನ್ನು ಪೊಲೀಸ್ ಇಲಾಖೆ ಮತ್ತು ನ್ಯಾಯಾಲಯ ನೋಡಿಕೊಳ್ಳುತ್ತದೆ" ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್

ನೈಟ್ ಶಿಫ್ಟ್ ಮುಗಿಸಿ ಮನೆಗೆ ಮರಳುವಷ್ಟರಲ್ಲಿ ಎದುರಾಯ್ತು ಸಾವು: ತಿರುಪತಿಯ ಫಾರ್ಮಾ ಘಟಕದಲ್ಲಿ ಸಿಡಿದ ಬಾಯ್ಲರ್, ಐವರು ಕಾರ್ಮಿಕರು ಸಾವು!