ಸಚಿವ ಪ್ರಿಯಾಂಕ್ ಖರ್ಗೆ 
ರಾಜಕೀಯ

ಅಂಬೇಡ್ಕರ್ ವಿವಾದ: ಅಮಿತ್ ಶಾಗೆ ಹುಚ್ಚು ನಾಯಿ ಕಚ್ಚಿದೆ ಎಂದ ಪ್ರಿಯಾಂಕ್ ಖರ್ಗೆ

ಏನ್ ಸಮಸ್ಯೆ ಅಂದ್ರೆ ಇವರ ಆಲೋಚನೆಯಲ್ಲಿ ಅಂಬೇಡ್ಕರ್ ಇಲ್ಲ. ಸಾಮಾಜಿಕ ಸಮಾನತೆ ಇಲ್ಲ.

ಕಲಬುರಗಿ: ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು, "ಅವರಿಗೆ ಹುಚ್ಚು ನಾಯಿ ಕಚ್ಚಿದೆ" ಎಂದು ಶನಿವಾರ ಕಿಡಿ ಕಾರಿದ್ದಾರೆ.

ಇಂದು ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರು, ದೇವರ ಹೆಸರು ಸಾವಿರ ಬಾರಿ ಜಪಿಸಿದರೆ ಏಳು ಜನ್ಮದಲ್ಲಿಯೂ ಸ್ವರ್ಗ ಪ್ರಾಪ್ತಿಯಾಗುತ್ತೋ ಇಲ್ಲವೋ ಗೊತ್ತಿಲ್ಲ. ಆದರೆ ಅಂಬೇಡ್ಕರ್ ಅವರ ಹೆಸರು‌ ಹೇಳಿದರೆ ಈ ಜನ್ಮದಲ್ಲಿಯೇ ಸ್ವಾಭಿಮಾನದ ಬದುಕು ಸಿಗುತ್ತದೆ ಎಂದು ಹೇಳಿದರು.

ಏನ್ ಸಮಸ್ಯೆ ಅಂದ್ರೆ ಇವರ ಆಲೋಚನೆಯಲ್ಲಿ ಅಂಬೇಡ್ಕರ್ ಇಲ್ಲ. ಸಾಮಾಜಿಕ ಸಮಾನತೆ ಇಲ್ಲ. ಅಂಬೇಡ್ಕರ್ ಮತ್ತು ಬಸವ ತತ್ವಗಳು ಹೆಚ್ಚಾದಷ್ಟು ಆರ್‌ಎಸ್‌ಎಸ್ ಸಿದ್ಧಾಂತಗಳು ಕಡಿಮೆಯಾಗುತ್ತವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡರು.

ಇದೇ ವೇಳೆ ಸಿ.ಟಿ. ರವಿ ಅವರನ್ನು ಹೈಕೋರ್ಟ್ ಬಿಡುಗಡೆಗೊಳಿಸಿರುವ ಬಗ್ಗೆ ಬಿಜೆಪಿಯವರು ಸತ್ಯಕ್ಕೆ ಜಯ, ಕಾಂಗ್ರೆಸ್ ಗೆ ಮುಖಭಂಗ ಎಂದು ಹೇಳುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಖರ್ಗೆ, ಮುಖಭಂಗ ಯಾಕಾಗುತ್ತದೆ? ಎಫ್ ಎಸ್ ಎಲ್ ವರದಿ ಬರಲಿ ಆಮೇಲೆ ನೋಡೋಣ. ಕಾನೂನು ಕೇವಲ ಬಿಜೆಪಿಯವರಿಗೆ ಮಾತ್ರ ಗೊತ್ತಿಲ್ಲ ನಮಗೂ ಗೊತ್ತಿದೆ ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಧನ ಸುರಕ್ಷತೆ ಕುರಿತು ಇರಾನ್ ವಿದೇಶಾಂಗ ಸಚಿವರೊಂದಿಗೆ ಜೈಶಂಕರ್ ಮೂರು ಬಾರಿ ಮಾತುಕತೆ

ನೀವು ಮಿತಿ ಮೀರಿದ್ದೀರಿ: ಕನ್ನಡದಲ್ಲೇ ಎಚ್ಚರಿಕೆ ಕೊಟ್ಟ ರಶ್ಮಿಕಾ; ಸಂಕಷ್ಟದ ಸಮಯದಲ್ಲಿ ಕನ್ನಡವೇ ಬೇಕಾಯ್ತಾ? ಎಂದ ನೆಟ್ಟಿಗರು!

ವಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೆ ಸೋಲು: ಯಾರೇ ಒಪ್ಪಿದರೂ-ಒಪ್ಪದಿದ್ದರೂ ನಿಯಮಗಳ ಪ್ರಕಾರವೇ ಲೋಕಸಭೆ ಕಾರ್ಯನಿರ್ವಹಣೆ; ಸ್ಪೀಕರ್ ಓಂ ಬಿರ್ಲಾ

CEC ಜ್ಞಾನೇಶ್ ಕುಮಾರ್ ಪದಚ್ಯುತಿಗೆ ನಿರ್ಣಯ: 200ಕ್ಕೂ ಹೆಚ್ಚು ಸಂಸದರಿಂದ ನೋಟಿಸ್‌ಗೆ ಸಹಿ

ಇರಾನ್ ಬಿಕ್ಕಟ್ಟು: ಕೇಂದ್ರ ಸರ್ಕಾರಕ್ಕೆ ಹೊರೆ, ಪ್ರತಿ ತಿಂಗಳು 30,000 ಕೋಟಿ ರೂ. ಹೆಚ್ಚಿನ ವೆಚ್ಚ!

SCROLL FOR NEXT