ಡಿ.ಕೆ ಸುರೇಶ್ 
ರಾಜಕೀಯ

BJP ನಾಯಕರು ಅವರ ಮನೆಯ ಮಹಿಳೆಯರಿಗೂ ಗೌರವ ಕೊಡುವುದಿಲ್ಲ; RSS ಹೇಳಿಕೊಡುವ ಸಂಸ್ಕೃತಿ ಇದೇನಾ?: ಡಿ.ಕೆ ಸುರೇಶ್

ಸಿ.ಟಿ. ರವಿ ಕೆಲವು ವಿಚಾರದಲ್ಲಿ ಪ್ರಚಂಡರು. ದೆಹಲಿಯಲ್ಲಿ ಅವರದೇ ಸರ್ಕಾರ ಇದೆ. ಅವರಿಗೆ ಹೇಳಿ ಎಸ್ ಪಿಜಿ ಭದ್ರತೆ ತೆಗೆದುಕೊಳ್ಳಲಿ. ಅಥವಾ ರಾಜ್ಯ ಸರ್ಕಾರದಿಂದ ಭದ್ರತೆ ಪಡೆದು ಹಿಂದೆಯೊಂದು ಮುಂದೆ ಒಂದು ಭದ್ರತಾ ವ್ಯಾನ್ ಹಾಕಿಕೊಂಡು ಓಡಾಡಲಿ.

ಬೆಂಗಳೂರು: ಬಿಜೆಪಿಯ ಅನೇಕ ನಾಯಕರು ಮಹಿಳೆಯರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ, ಅವರ ಕುಟುಂಬದಲ್ಲಿನ ಹೆಣ್ಣು ಮಕ್ಕಳಿಗೆ ತಾಯಿಗೆ, ಮಡದಿಗೂ ಗೌರವ ನೀಡುವುದಿಲ್ಲ ಎನಿಸುತ್ತದೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು.

ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಿ.ಟಿ. ರವಿ ಅವರ ಬಂಧನ ಹಾಗೂ ಅವರ ಆರೋಪಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ಸಿಬಿಐ ಸಂಸ್ಥೆಯನ್ನು ತಮ್ಮ ಮನೆ ಸರಕಿನಂತೆ ಭಾವಿಸಿದ್ದಾರೆ. ಮನೆಗೆಲಸದವರನ್ನು ಬಳಸಿಕೊಂಡಂತೆ ಸಿಬಿಐ ಬಳಸಿಕೊಳ್ಳುವ ಪ್ರವೃತ್ತಿ ಎದ್ದು ಕಾಣುತ್ತಿದೆ. ಸಿ.ಟಿ. ರವಿ ಆಡಿರುವ ಮಾತು, ನಡೆದುಕೊಂಡಿರುವ ರೀತಿ, ಪದೇ ಪದೆ ಹೆಣ್ಣು ಮಕ್ಕಳ ಬಗ್ಗೆ ಆಡಿರುವ ಮಾತು ಬಿಜೆಪಿಗೆ ಶೋಭೆ ತರುತ್ತದೆಯೇ? ಎಂದು ಪ್ರಶ್ನಿಸಿದರು.

ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ? ಬಿಜೆಪಿ ನಾಯಕರು ನಿರಂತರವಾಗಿ ಮಹಿಳೆಯರ ಜತೆ ನಡೆದುಕೊಳ್ಳುವ ರೀತಿ ನೀತಿಯನ್ನು ರಾಜ್ಯದ ಜನ ಗಮನಿಸಬೇಕು.ಬಿಜೆಪಿ ನಾಯಕರಿಗೆ ಸಂಸ್ಕೃತಿ ಬಗ್ಗೆ ಪಾಠ ಮಾಡುವ ಆರ್ ಎಸ್ ಎಸ್ ನವರು ಈಗಲಾದರೂ ಅವರಿಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು. ರವಿ ಅವರ ಹೇಳಿಕೆಯನ್ನು ಬಿಜೆಪಿಯ ಯಾವುದೇ ನಾಯಕನ ಬಳಿ ಖಂಡಿಸಲು ಮಾತುಗಳು ಇಲ್ಲ. ಹೆಣ್ಣಿನ ಕುಲಕ್ಕೆ ಅಪಮಾನ ಮಾಡಿರುವುದನ್ನು ಖಂಡಿಸದಿದ್ದಾಗ ಮಾಧ್ಯಮ ಸ್ನೇಹಿತರು ಅವರಿಗೆ ಬೆಂಬಲ ನೀಡುವುದೇಕೆ? ಅವರ ಮಾತುಗಳ ಬಗ್ಗೆ ಮಾಧ್ಯಮಗಳ ಬಳಿ ದಾಖಲೆಗಳು ಇದ್ದರೂ ಮಾಧ್ಯಮಗಳು ಬೇರೆ ವಿಚಾರಗಳನ್ನು ಪ್ರಚಾರಕ್ಕೆ ಬಿಡುತ್ತಿದ್ದೀರಿ ಎಂದು ಬೇಸರ ವ್ಯಕ್ತಪಡಿಸಿದರು.

ಕನ್ನಡಿಗರು ಸುಸಂಸ್ಕೃತರು ಎಂಬ ಭಾವನೆ ದೇಶದಲ್ಲಿದೆ. ವಿರೋಧ ಪಕ್ಷಗಳ ನಾಯಕರು ಪದೇ ಪದೆ ಮಹಿಳೆಯರ ವಿರುದ್ಧ ಧೋರಣೆ ಅನುಸರಿಸುತ್ತಿರುವುದರಿಂದ ರಾಜ್ಯದ ಗೌರವ ಕಡಿಮೆಯಾಗುವುದಿಲ್ಲವೇ? ಕಳೆದ ಹತ್ತು ವರ್ಷಗಳಿಂದ ಮಹಿಳೆಯರ ಮೇಲೆ ಬಿಜೆಪಿ ನಾಯಕರ ಉಪಟಳಗಳು ಹೆಚ್ಚಾಗಿವೆ. ಇದೆಲ್ಲವನ್ನು ನೋಡಿದಾಗ, ಮೌಲ್ಯಗಳು ಕುಸಿಯುತ್ತಿವೆ, ಓಲೈಸಿಕೊಳ್ಳುವ ಪ್ರವೃತ್ತಿ ಹೆಚ್ಚುತ್ತಿದೆ. ಜನಪ್ರತಿನಿಧಿಗಳು ಅಪಹಾಸ್ಯಕ್ಕೆ ಗುರಿಯಾಗುತ್ತಿದ್ದಾರೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ನಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತೇನೆ" ಎಂದು ತಿಳಿಸಿದರು.

ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದು ಹೇಳಿದ್ದೆ ಇಷ್ಟೆಲ್ಲದಕ್ಕೂ ಕಾರಣವಾಯಿತೇ ಎಂದು ಕೇಳಿದಾಗ, "ರಾಹುಲ್ ಗಾಂಧಿ ಅವರನ್ನು ಡ್ರಗ್ ಅಡಿಕ್ಟ್ ಎಂದಿದ್ದು ಆಯಿತು, ಅವರನ್ನು ಕೊಲೆಗಾರ ಎಂದಿದ್ದು ಆಯಿತು, ಅವರು ಮತ್ತೆ ನೀಚ ಪದ ಬಳಸಿದ್ದು ಆಯಿತು. ಮಾಧ್ಯಮಗಳ ಸ್ನೇಹಿತರು ಯಾವುದನ್ನು ಖಂಡಿಸುತ್ತಿಲ್ಲ. ನೀವೆಲ್ಲರೂ ಚರ್ಚೆ ಮಾಡುತ್ತಿರುವುದು ರವಿ ಅವರ ಬಂಧನದ ವಿಚಾರವನ್ನು" ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರವಿ ಏನು ಬೇಕಾದರೂ ಆರೋಪ ಮಾಡುತ್ತಾರೆ. ಆರೋಪ ಮಾಡುವುದರಲ್ಲಿ, ಮಾತು ತಿರುಚುವುದರಲ್ಲಿ ಸಿ.ಟಿ. ರವಿ ನಿಪುಣ. ಅವರ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಅವರು ಹೆಚ್ಚಾಗಿ ಮಾತನಾಡಿದರೆ ಅವರ ಬಗ್ಗೆ ಏನು ಮಾತನಾಡಬೇಕೋ ಮಾತನಾಡುತ್ತೇನೆ. ಅವರು ಮಾಡಿರುವ ತಪ್ಪಿಗೆ ರಾಜ್ಯದ ಮಹಿಳೆಯರಲ್ಲಿ ಕ್ಷಮೆ ಕೋರುವುದು ಒಳಿತು ಎಂಬುದು ನನ್ನ ಭಾವನೆ. ಅವರ ಮನೆಯಲ್ಲೂ ಮಹಿಳೆಯರಿದ್ದಾರೆ. ತಾಯಿ ಜನ್ಮ ಕೊಟ್ಟರೆ ಮಾತ್ರ ಎಲ್ಲರೂ ಆಚೆ ಬರಲು ಸಾಧ್ಯ. ಇಲ್ಲದಿದ್ದರೆ ಇವರು ಆಚೆ ಬರಲು ಆಗುವುದಿಲ್ಲ. ಕಳೆದ 10 ವರ್ಷಗಳಿಂದ ಇವರು ಬೇರೆ ದಾರಿ ಕಂಡುಕೊಂಡಿದ್ದಾರೋ ಏನೋ ಗೊತ್ತಿಲ್ಲ" ಎಂದು ತಿರುಗೇಟು ನೀಡಿದರು.

"ಸಿ.ಟಿ. ರವಿ ಕೆಲವು ವಿಚಾರದಲ್ಲಿ ಪ್ರಚಂಡರು. ದೆಹಲಿಯಲ್ಲಿ ಅವರದೇ ಸರ್ಕಾರ ಇದೆ. ಅವರಿಗೆ ಹೇಳಿ ಎಸ್ ಪಿಜಿ ಭದ್ರತೆ ತೆಗೆದುಕೊಳ್ಳಲಿ. ಅಥವಾ ರಾಜ್ಯ ಸರ್ಕಾರದಿಂದ ಭದ್ರತೆ ಪಡೆದು ಹಿಂದೆಯೊಂದು ಮುಂದೆ ಒಂದು ಭದ್ರತಾ ವ್ಯಾನ್ ಹಾಕಿಕೊಂಡು ಓಡಾಡಲಿ. ರಾಜ್ಯ ಪೊಲೀಸರ ಮೇಲೆ ನಂಬಿಕೆ ಇಲ್ಲವಾದರೆ ಎಸ್ ಪಿಜಿ ಭದ್ರತೆ ಪಡೆಯಲಿ" ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT