ಪ್ರಹ್ಲಾದ್ ಜೋಶಿ  
ರಾಜಕೀಯ

ಶತಮಾನೋತ್ಸವ ನಡೆಸಿ ಹಣ ಪೋಲು ಮಾಡುತ್ತಿದ್ದಾರೆ, ಈಗಿರುವುದು ಮೂಲ ಕಾಂಗ್ರೆಸ್ ಅಲ್ಲ: ಪ್ರಹ್ಲಾದ್ ಜೋಶಿ

ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ ಮತ್ತು ಇಂದಿನ ಕಾಂಗ್ರೆಸ್ ನಡುವೆ ವ್ಯತ್ಯಾಸವಿದೆ. ಈಗಿನ ಕಾಂಗ್ರೆಸ್ ಮೂಲ ಕಾಂಗ್ರೆಸ್ ಅಲ್ಲ.

ಹುಬ್ಬಳ್ಳಿ: ಕಾಂಗ್ರೆಸ್ ಸಮಾವೇಶ ನಡೆಸಿ ಹಣ ಪೋಲು ಮಾಡುತ್ತಿದೆ. ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಈಗಿರುವ ಕಾಂಗ್ರೆಸ್ ನಲ್ಲಿ ಮೂಲಕ ಕಾಂಗ್ರೆಸ್ ಕಾಣುತ್ತಿಲ್ಲ. ಇದು ಇಂದಿರಾ ಗಾಂದಿ ಕಾಂಗ್ರೆಸ್ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ಸೋಮವಾರ ಹೇಳಿದ್ದಾರೆ.

ಬೆಳಗಾವಿಯಲ್ಲಿ ಅಧಿವೇಶನದ ಶತಮಾನೋತ್ಸವ ಆಚರಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿರುವ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿಗೂ ಇಂದಿನ ಕಾಂಗ್ರೆಸ್‌ಗೂ ಏನು ಸಂಬಂಧ? ಮಹಾತ್ಮಾ ಗಾಂಧಿ ಕಾಂಗ್ರೆಸ್ ಮತ್ತು ಇಂದಿನ ಕಾಂಗ್ರೆಸ್ ನಡುವೆ ವ್ಯತ್ಯಾಸವಿದೆ. ಈಗಿನ ಕಾಂಗ್ರೆಸ್ ಮೂಲ ಕಾಂಗ್ರೆಸ್ ಅಲ್ಲ. ಈ ಕಾಂಗ್ರೆಸ್ ಪಕ್ಷಕ್ಕೆ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಸಾಮರಸ್ಯದಲ್ಲಿ ನಂಬಿಕೆಯಿಲ್ಲ. ಬಿ.ಆರ್.ಅಂಬೇಡ್ಕರ್ ಅವರಿಗೆ ಅಗೌರವ ಸೂಚಿಸಿದೆ ಎಂದು ಹೇಳಿದರು.

ಸಿಟಿ ರವಿ ಪ್ರಕರಣ ಕುರಿತು ಮಾತನಾಡಿ. ವಿಧಾನ ಪರಿಷತ್‌ ಸದಸ್ಯ ಸಿ.ಟಿ. ಅವರನ್ನು ಕಾರಿನಲ್ಲಿ ಸುತ್ತಾಡಿಸಿದ್ದು ತನಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ನೀಡುತ್ತಾರೆ. ಅಂದರೆ, ಗೃಹ ಸಚಿವರನ್ನೇ ಕತ್ತಲಲ್ಲಿ ಇಟ್ಟು ಪೊಲೀಸರು ಹೀಗೆ ಮಾಡಿದ್ದಾರಾ? ಜಿಲ್ಲಾ ಉಸ್ತುವಾರಿ ಸಚಿವರು ಸಹ ಪೊಲೀಸರು ತಪ್ಪು ಮಾಡಿದ್ದಾರೆ ಎಂದಿದ್ದಾರೆ. ಹಾಗಾದರೆ ಸರ್ಕಾರದಲ್ಲಿ ಏನು ನಡೆಯುತ್ತಿದೆ? ಇದರ ಹಿಂದಿನ ಸೂತ್ರಧಾರರು ಯಾರು ಎನ್ನುವುದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಸಿ.ಟಿ. ರವಿ ಅವರ ಆಕ್ಷೇಪಾರ್ಹ ಹೇಳಿಕೆ ಮುಚ್ಚಿಕೊಳ್ಳಲು ಬಿಜೆಪಿ ಮುಖಂಡರು ಪೊಲೀಸರ ಮೇಲೆ ಆರೋಪ ಮಾಡುತ್ತಿದ್ದಾರೆ’ ಎನ್ನುವ ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವು ಯಾವಾಗಲೂ ಮರ್ಯಾದೆಯಿಂದಲೇ ವರ್ತಿಸುತ್ತಿದ್ದೇವೆ. ಅವರ ಹಾಗೆ ನಾವೇನೂ ಮರ್ಯಾದೆ ಬಿಟ್ಟಿಲ್ಲ. ಕಾಂಗ್ರೆಸ್‌ನಲ್ಲಿ ಸಂಸ್ಕೃತಿ, ಸಂಸ್ಕಾರ ಅನ್ನುವುದೇ ಇಲ್ಲ. ಕೆಲವಷ್ಟು ನಾಯಕರನ್ನು ಹೊರತು ಪಡಿಸಿ ಉಳಿದವರೆಲ್ಲ ಅನಾಗರಿಕರ ಹಾಗೆ ವರ್ತಿಸುತ್ತಾರೆ’ ಎಂದು ಕಿಡಿಕಾರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಥಳಿತದಿಂದ ವಿದ್ಯಾರ್ಥಿನಿಗೆ ಕಿವುಡು': ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯದ ಬಗ್ಗೆ ಕೇಂದ್ರ, ದೆಹಲಿ ಪೊಲೀಸ್ ವಿರುದ್ಧ ರಾಹುಲ್ ಗಾಂಧಿ ಆರೋಪ

‘ಯುವಕರನ್ನು ಜೈಲಿಗೆ ಕಳುಹಿಸುವುದು ಹೇಡಿತನ’; ಸಿಜೆಪಿ ಪ್ರತಿಭಟನೆಗೆ ರಾಹುಲ್‌ ಗಾಂಧಿ ಬೆಂಬಲ

ವಿಮಾನ ಹೈಜಾಕ್ ಬೆದರಿಕೆ ಎಚ್ಚರಿಕೆ: ಫ್ರಾಂಕ್‌ಫರ್ಟ್‌- ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಹಲವು ರಾಜ್ಯಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಕರ್ನಾಟಕಕ್ಕೂ ಗುಡುಗು, ಮಿಂಚಿನ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ!

ಚಲಿಸುವ ರೈಲಿನಲ್ಲಿ ಮೊಬೈಲ್ ಕಳ್ಳತನಕ್ಕೆ ಯತ್ನ: ಕಳ್ಳನ ಕೈ ಹಿಡಿದ ಪ್ರಯಾಣಿಕರು, ಬಿಹಾರದಲ್ಲಿ ರೋಚಕ Video ವೈರಲ್‌