ಡಿ.ಕೆ ಶಿವಕುಮಾರ್ 
ರಾಜಕೀಯ

ಗೌರವಯುತವಾಗಿ ಸುರೇಶ್ ಅಂಗಡಿ ಅಂತ್ಯಕ್ರಿಯೆ ಮಾಡಲಾಗದ ಶೆಟ್ಟರ್ ಮನೆವರೆಗೂ ರತ್ನಗಂಬಳಿ ಹಾಕಿಸೋಣ: DK ಶಿವಕುಮಾರ್

ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ. ಆ ಕಾರ್ಯಕ್ರಮ ಬಿಡಿ, ಅವರ ಸರ್ಕಾರ ಇದ್ದಾಗ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಅವರಿಂದ ಸಾಧ್ಯವಾಗಿಲ್ಲ.

ಬೆಳಗಾವಿ: ಡಿಸೆಂಬರ್ 27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡಿ ಶಾಲಾ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಾತನಾಡಿದರು. ಜಗದೀಶ್ ಶೆಟ್ಟರ್ ಅವರ ಮನೆವರೆಗೂ ರತ್ನಗಂಬಳಿ ಹಾಕಿಸೋಣ. ನನ್ನ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಅವರಿಗೆ ಕರೆ ಮಾಡಿ ಆಹ್ವಾನ ನೀಡಿದ್ದಾರೆ. ಆರ್.ಅಶೋಕ್, ನಾರಾಯಣಸ್ವಾಮಿ, ಸಭಾಪತಿಗಳಿಗೆ ಆಹ್ವಾನ ನೀಡಿದ್ದಾರೆ. ಆಹ್ವಾನ ಪತ್ರಿಕೆಯಲ್ಲಿ ಅವರ ಹೆಸರು ಸೇರಿಸಿದ್ದೇವೆ. ಆ ಕಾರ್ಯಕ್ರಮ ಬಿಡಿ, ಅವರ ಸರ್ಕಾರ ಇದ್ದಾಗ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಪಾರ್ಥಿವ ಶರೀರವನ್ನು ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ಅವರಿಂದ ಸಾಧ್ಯವಾಗಿಲ್ಲ.

ಅವರ ಬೀಗರಿಗೆ ಸರಿಯಾಗಿ ಅಂತ್ಯಸಂಸ್ಕಾರ ಮಾಡಲು ಸಾಧ್ಯವಾಗಲಿಲ್ಲವಲ್ಲ, ಅದರ ಬಗ್ಗೆ ಅವರು ಮೊದಲು ಮಾತನಾಡಲಿ. ಆಗ ಬಿಜೆಪಿ ನಾಯಕರರು ಯಾರೂ ಮಾತನಾಡಲಿಲ್ಲ. ವಿಶೇಷ ಮಿಲಿಟರಿ ವಿಮಾನದಲ್ಲಿ ಪಾರ್ಥೀವ ಶರೀರ ತಂದು ಅವರ ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ಮಾಡಲು ಆಗಲಿಲ್ಲ. ಆಗ ಶೆಟ್ಟರ್ ಅವರ ಬಾಯಿಗೆ ಏನಾಗಿತ್ತು” ಎಂದು ತಿರುಗೇಟು ನೀಡಿದರು.

ಗಾಂಧಿ ಮೇಲೆ ಪ್ರೀತಿ ಇದ್ದಿದ್ದರೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸೇರಿ ಕಾರ್ಯಕ್ರಮ ಮಾಡಿದ್ದರೆ 500 ಕೋಟಿ ಖರ್ಚು ಮಾಡಲು ಸಿದ್ಧವಿದ್ದೆವು ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈಗಲೂ ಮಾಡಲಿ. ನಾವು ಈ ಕಾರ್ಯಕ್ರಮವನ್ನು ಒಂದು ವರ್ಷಗಳ ಕಾಲ ಆಚರಣೆ ಮಾಡುತ್ತೇವೆ. ಅವರು ಕೂಡ ಈ ಕಾರ್ಯಕ್ರಮ ಮಾಡಲಿ ಎಂದು ಮಾಧ್ಯಮಗಳ ಮೂಲಕ ನಮ್ರತೆಯಿಂದ ಜನರ ಪರವಾಗಿ ಮನವಿ ಮಾಡುತ್ತೇನೆ. ಅವರೇ ಮುಂದಾಳತ್ವ ವಹಿಸಿಕೊಂಡು ಕಾರ್ಯಕ್ರಮ ಮಾಡಲಿ, ಅವರ ಹಿಂದೆ ನಿಂತು ನಾವು ಸೇವಕರಂತೆ ಕೆಲಸ ಮಾಡುತ್ತೇವೆ” ಎಂದರು.

ರಾಜ್ಯ ಸರ್ಕಾರದಿಂದ ಕೇಂದ್ರಕ್ಕೆ ಪ್ರಸ್ತಾವೆನೆ ಹೋಗಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಮ್ಮ ರಾಜ್ಯದಲ್ಲಿ ನಾವು ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ತಮ್ಮ ಜವಾಬ್ದಾರಿಯಿಂದ ಕಾರ್ಯಕ್ರಮ ಮಾಡಲಿ. ದೇಶದ ನೋಟಿನಲ್ಲಿ ಗಾಂಧಿ ಅವರ ಚಿತ್ರ ಏಕಿದೆ? ಅವರಿಗೆ ಗಾಂಧಿ ಬಗ್ಗೆ ಅರಿವಿಲ್ಲವೇ? ಗಾಂಧಿ ಅವರ ಹಕ್ಕನ್ನು ಬಿಜೆಪಿ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರಿಗೆ ಸ್ವಾತಂತ್ರ್ಯ ಹೋರಾಟದ ಇತಿಹಾಸವಿಲ್ಲ. ಸ್ವಾತಂತ್ರ್ಯ ಹೋರಾಟದ ಇತಿಹಾಸವಿರುವುದು ಕಾಂಗ್ರೆಸಿಗರಿಗೆ ಮಾತ್ರ” ಎಂದು ವಾಗ್ದಾಳಿ ನಡೆಸಿದರು.

ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ. ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ ಕಾರ್ಯಕಾರಿ ಸಮಿತಿ ಸಭೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಅಂದು ನಮ್ಮ ನಾಯಕರು ಸ್ವಾತಂತ್ರ್ಯ ಹೋರಾಟದ ನಾಯಕತ್ವ ವಹಿಸಿಕೊಂಡು ಈ ದೇಶಕ್ಕೆ ಮಾರ್ಗದರ್ಶನ ನೀಡಿದ್ದರು. ಈ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟು ಮಹಾತ್ಮರಾದರು. ಇದನ್ನು ಸ್ಮರಿಸಲು ನಾವು ಕಾರ್ಯಕ್ರಮ ರೂಪಿಸಿದ್ದೇವೆ. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮವಲ್ಲ, ಎಲ್ಲರ ಕಾರ್ಯಕ್ರಮ. ಇಂದಿನ ಪರಿಸ್ಥಿತಿಯಲ್ಲಿ ದೇಶವನ್ನು ಯಾವ ದಿಕ್ಕಿನಲ್ಲಿ ಮುನ್ನಡೆಸಬೇಕು. ದೇಶಕ್ಕೆ ಯಾವ ರೀತಿ ಶಕ್ತಿ ತುಂಬಬೇಕು ಎಂದು ಈ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ” ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯರು, ದೇಶದ ವಿವಿಧ ರಾಜ್ಯಗಳ ಕಾಂಗ್ರೆಸ್ ಪಕ್ಷದ ಹಾಲಿ ಮುಖ್ಯಮಂತ್ರಿಗಳು, ಮಾಜಿ ಮುಖ್ಯಮಂತ್ರಿಗಳು, ಎಲ್ಲಾ ರಾಜ್ಯಗಳ ಶಾಸಕಾಂಗ ಪಕ್ಷದ ನಾಯಕರು, ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರು, ಎಲ್ಲಾ ಸಂಸತ್ ಸದಸ್ಯರು, ಶಾಸಕರು, ರಾಜ್ಯದುದ್ದಗಲದ ಕಾರ್ಯಕರ್ತರು ಹಾಗೂ ಸಾರ್ವಜನಿಕರಿಗೆ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಿದ್ದೇವೆ” ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!