ಪ್ರಿಯಾಂಕ್ ಖರ್ಗೆ 
ರಾಜಕೀಯ

ನಾನು ಬಿಜೆಪಿ ಸಿದ್ಧಾಂತಕ್ಕೆ ವಿರುದ್ಧ; ಆ ಕಾರಣಕ್ಕೇ ನನ್ನನ್ನು ಟಾರ್ಗೆಟ್: ಪ್ರಿಯಾಂಕ್ ಖರ್ಗೆ

ಸಂತ್ರಸ್ತರಲ್ಲಿ ಯಾರಿಗಾದರೂ ನ್ಯಾಯ ದೊರಕಿಸಿಕೊಡಲು ಬಿಜೆಪಿಗೆ ನಿಜವಾಗಿಯೂ ಆಸಕ್ತಿ ಇದ್ದರೆ, ಮೊದಲು ವಿಜಯೇಂದ್ರ ತನ್ನ ತಂದೆಯ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ತಾವು ರಾಜೀನಾಮೆ ನೀಡಲಿ' ಎಂದು ಸವಾಲೆಸೆದರು.

ಬೆಂಗಳೂರು: 26 ವರ್ಷದ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ತಳ್ಳಿಹಾಕಿದ್ದಾರೆ ಮತ್ತು ಅದರ ಸಿದ್ಧಾಂತಕ್ಕೆ ವಿರುದ್ಧವಾಗಿರುವುದರಿಂದ ಬಿಜೆಪಿ ತನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದ್ದಾರೆ.

ಸುದ್ದಿಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಅವರು, ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ. ಸಂಬಂಧವಿದೆ ಎಂಬುದನ್ನು ಸಾಬೀತುಪಡಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದರು.

'ಬಿಜೆಪಿಯು ಎಲ್ಲವನ್ನೂ ಮಾಡಬಹುದು. ಆದರೆ, ಈ ಆತ್ಮಹತ್ಯೆಯು ಸರ್ಕಾರಕ್ಕೂ ಮತ್ತು ನನಗೂ ಹೇಗೆ ಸಂಬಂಧಿಸಿದೆ ಎಂಬುದನ್ನು ಕರ್ನಾಟಕದ ಜನರ ಮುಂದಿಡುವಲ್ಲಿ ಅವರಿಗೆ ಇನ್ನೂ ಸಾಧ್ಯವಾಗುತ್ತಿಲ್ಲ. ಈ ವಿಚಾರದ ಮೂಲಕ ಅವರು ತಮ್ಮ ನಾಯಕತ್ವವನ್ನು ಸ್ಥಾಪಿಸಿಕೊಳ್ಳಲು ಯತ್ನಿಸುತ್ತಿದ್ದಾರೆ. ಬಿಜೆಪಿ ಈಗ ಒಂದು ಬಣ-ಪ್ರೇರಿತ ಪಕ್ಷವಾಗಿದೆ. ಕರ್ನಾಟಕದಲ್ಲಿ ನಾಯಕತ್ವದ ಕಿತ್ತಾಟ ನಡೆಯುತ್ತಲೇ ಇದೆ. ಅವರು ಎಂದಿನಂತೆ ಈ ಸಾವನ್ನು ರಾಜಕೀಯ ಮಾಡುತ್ತಿದ್ದಾರೆ' ಎಂದು ದೂರಿದರು.

'ಬಿಜೆಪಿಯವರು ನನ್ನನ್ನು ಗುರಿಯಾಗಿಸುತ್ತಿದ್ದಾರೆ. ಏಕೆಂದರೆ, ನಾನು ಅವರ ಸಿದ್ಧಾಂತಕ್ಕೆ ವಿರುದ್ಧವಾಗಿದ್ದೇನೆ. ನಾನು ಆರ್‌ಎಸ್‌ಎಸ್ ಮತ್ತು ಮನುಸ್ಮೃತಿಯ ವಿರುದ್ಧ ಇದ್ದೇನೆ ಮತ್ತು ನಾನು ಅದರ ಬಗ್ಗೆ ದನಿಯೆತ್ತಿದ್ದೇನೆ. ಅಲ್ಲದೆ, ನಾವು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳನ್ನು ಮತ್ತು ಸಂವಿಧಾನವನ್ನು ಅನುಸರಿಸುತ್ತೇವೆ. ಆದ್ದರಿಂದ ಅವರು ಸಹಜವಾಗಿ ಇಂತಹ ವಿಚಾರಗಳಲ್ಲಿ ಸಿಲುಕಿಸಲು ಪ್ರಯತ್ನಿಸುತ್ತಾರೆ. ಸಂತ್ರಸ್ತರಲ್ಲಿ ಯಾರಿಗಾದರೂ ನ್ಯಾಯ ದೊರಕಿಸಿಕೊಡಲು ಬಿಜೆಪಿಗೆ ನಿಜವಾಗಿಯೂ ಆಸಕ್ತಿ ಇದ್ದರೆ, ಮೊದಲು ವಿಜಯೇಂದ್ರ ತನ್ನ ತಂದೆಯ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ತಾವು ರಾಜೀನಾಮೆ ನೀಡಲಿ' ಎಂದು ಸವಾಲೆಸೆದರು.

ಬೀದರ್ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಬೇಕು ಎಂದು ಕರ್ನಾಟಕ ಬಿಜೆಪಿ ಮುಖ್ಯಸ್ಥ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ ನಂತರ ಸಚಿವರು ತಿರುಗೇಟು ನೀಡಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಾಪನೂರ ಅವರ ಕಿರುಕುಳ ಮತ್ತು ಬೆದರಿಕೆಯಿಂದ ಬೀದರ್‌ನ ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಚಿನ್ ಈ ಬಗ್ಗೆ ಡೆತ್‌ನೋಟ್‌ನಲ್ಲಿ ವಿಸ್ತೃತವಾಗಿ ಹೇಳಿದ್ದಾರೆ ಎಂದು ವಿಜಯೇಂದ್ರ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT