ರಾಜಕೀಯ

'ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೇಳಲು ಸಾಧ್ಯವಿಲ್ಲ': ಸಂಸದ DK ಸುರೇಶ್ ‘ಭಾರತ ವಿಭಜನೆ’‌ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಿರೋಧ

Srinivasamurthy VN

ಬೆಂಗಳೂರು: ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಅವರ ಭಾರತ ವಿಭಜನೆ ಬಗ್ಗೆ ಕುರಿತ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದ್ದು, ಆ ರೀತಿ ಕೇಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಮಂಡಿಸಿರುವ ಮಧ್ಯಂತರ ಬಜೆಟ್‌ (Budget 2024) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್‌, ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದ್ದು, ಇದಗೀ ಸ್ವತಃ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಕರ್ನಾಟಕ ರಾಜ್ಯದ ಮುಂಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದು ಮಾತ್ರವಲ್ಲದೇ ಆ ರೀತಿ ಎಲ್ಲ ಕೇಳುವುದಕ್ಕೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿ ವೇಳೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ. ಪ್ರತ್ಯೇಕ ರಾಷ್ಟ್ರ ಬೇಕು ಎಂದೆಲ್ಲ ಕೇಳುವುದಕ್ಕೆ ಆಗುವುದಿಲ್ಲ. ದೇಶದಲ್ಲಿ ಸಾರ್ವಭೌಮತೆ ಇರಬೇಕು. ಒತ್ತಾಯ, ಮನವಿ ಮಾಡೋದು ಬೇರೆ. ಫೆಡರಲಿಸಂ ಅನ್ನು ಒಪ್ಪಿಕೊಂಡಿದ್ದೇವೆ. ದಕ್ಷಿಣ ಭಾರತ, ಉತ್ತರ ಭಾರತ ಎಂಬ ಪ್ರಶ್ನೆಯೇ ಇಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ಇದೇ ವೇಳೆ ಕೇಂದ್ರದಿಂದ ರಾಜ್ಯಕ್ಕೆ ಬರುವ ಅನುದಾನ ಬರುತ್ತಿಲ್ಲ ಎಂದು ಹೇಳಿದ ಸಿದ್ದರಾಮಯ್ಯ 4 ಲಕ್ಷ ಕೋಟಿ ರೂಪಾಯಿಗೂ ಅಧಿಕ ತೆರಿಗೆಯನ್ನು ನಮ್ಮ‌ ರಾಜ್ಯದಿಂದ ಕೇಂದ್ರ ಸರ್ಕಾರ ವಸೂಲಿ ಮಾಡುತ್ತಿದೆ. ಈ ತೆರಿಗೆ ಹಣ ನೀಡುವ ವಿಚಾರದಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದರೆ, ನಂತರದ ಸ್ಥಾನದಲ್ಲಿ ಕರ್ನಾಟಕನೇ ಇರೋದು ಎಂದು ಸಿಎಂ ಸಿದ್ದರಾಮಯ್ಯ ಕೇಳಿದರು.

ಡಿ.ಕೆ. ಸುರೇಶ್ ಹೇಳಿದ್ದೇನು?
ಸಂಸದ ಡಿ.ಕೆ. ಸುರೇಶ್‌‌ ಬಜೆಟ್‌ ಬಗ್ಗೆ ಪ್ರತಿಕ್ರಿಯೆ ನೀಡುವಾಗ, ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ಬಜೆಟ್‌ ಅನ್ನು ಖಂಡಿಸಿದ್ದಾರೆ. ಅಲ್ಲದೆ, ಉತ್ತರ ಭಾರತ ಹಾಗೂ ದಕ್ಷಿಣ ಭಾರತ ಎಂಬುದಾಗಿ ತಾರತಮ್ಯ ಮಾಡುತ್ತಿದ್ದು, ಹೀಗೇ ಮುಂದುವರಿದರೆ ದೇಶವನ್ನು ವಿಭಜನೆ ಮಾಡಬೇಕಾಗುತ್ತದೆ. ದಕ್ಷಿಣ ಭಾರತದ ಹಣವನ್ನು ಉತ್ತರ ಭಾರತಕ್ಕೆ ಕೊಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕವಾಗಿ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತ ಬೇರೆ ದೇಶ ಆಗಬೇಕು ಎಂಬ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಡಿ.ಕೆ. ಸುರೇಶ್‌ ಎಚ್ಚರಿಕೆ ನೀಡಿದ್ದಾರೆ. 

SCROLL FOR NEXT