ಸುಮಲತಾ ಅಂಬರೀಷ್ 
ರಾಜಕೀಯ

ಜೆಡಿಎಸ್ ಗೆ ಹಾಸನ ಕ್ಷೇತ್ರ ಬೇಕು ಎಂದಾದರೆ ಮಂಡ್ಯವನ್ನು ಸುಮಲತಾಗೆ ಬಿಟ್ಟು ಕೊಡಲಿ: ಬಿಜೆಪಿ ನಾಯಕರ ಬಿಗಿಪಟ್ಟು!

ಹಾಸನದಲ್ಲಿ ಜೆಡಿಎಸ್ ಸಂಸದರು ಇದ್ದಾರೆ. ಹೀಗಾಗಿ ಕ್ಷೇತ್ರ ಬಿಟ್ಟುಕೊಡುವಂತೆ ಜೆಡಿಎಸ್ ಕೇಳುತ್ತಿದೆ. ಹಾಗಾದರೆ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಅವರು ಸಂಸದರು, ಹೀಗಾಗಿ ಮಂಡ್ಯ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟುಕೊಡಲಿ,

ಮಂಡ್ಯ: ಹಾಸನದಲ್ಲಿ ಜೆಡಿಎಸ್ ಸಂಸದರು ಇದ್ದಾರೆ. ಹೀಗಾಗಿ ಕ್ಷೇತ್ರ ಬಿಟ್ಟುಕೊಡುವಂತೆ ಜೆಡಿಎಸ್ ಕೇಳುತ್ತಿದೆ. ಹಾಗಾದರೆ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಅವರು ಸಂಸದರು, ಹೀಗಾಗಿ ಮಂಡ್ಯ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟುಕೊಡಲಿ ಎಂದು ಪ್ರೀತಂ ಗೌಡ ಠಕ್ಕರ್‌ ಕೊಟ್ಟಿದ್ದಾರೆ.

ಪಾಂಡವಪುರದಲ್ಲಿ ನಡೆದ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು, ಜೆಡಿಎಸ್​​ನವರು ಮಂಡ್ಯ, ಹಾಸನ ಕ್ಷೇತ್ರ ಕೇಳುತ್ತಿರುವುದು ಸತ್ಯ. ಹಾಸನದಲ್ಲಿ ಜೆಡಿಎಸ್ ಸಂಸದ ಇದ್ದಾರೆ ಅಂತ ಅಲ್ಲಿಯ ಟಿಕೆಟ್ ಕೇಳಬಾರದು. ಸುಮಲತಾ ಅಂಬರೀಶ್ ಅವರು​ ಮಂಡ್ಯ ಸಂಸದೆ. ಅವರು ಎನ್‌ಡಿಎ ಒಕ್ಕೂಟದಲ್ಲಿದ್ದಾರೆ. ಈಗ ನಾವು ಸುಮಲತಾಗೆ ಟಿಕೆಟ್ ಎಂದು‌ ಕೇಳುವುದಕ್ಕೆ ಆಗುತ್ತಾ? ಎರಡು ಪಕ್ಷದ ಕಾರ್ಯಕರ್ತರ ಒಪ್ಪಿಗೆಯಿಂದ ಅಭ್ಯರ್ಥಿ ಆಯ್ಕೆಯಾಗಬೇಕು ಎಂದು ಒತ್ತಾಯಿಸಿದರು.

ಮಂಡ್ಯ ಜಿಲ್ಲೆಯಲ್ಲಿ ಒಂದೇ ಒಂದು ಸ್ಥಾನವನ್ನು ಬಿಜೆಪಿ ಗೆದ್ದಿರಲಿಲ್ಲ. ಕೆ.ಆರ್‌.ಪೇಟೆಯಲ್ಲಿ ನಾರಾಯಣಗೌಡ ಮೊದಲ ಬಾರಿಗೆ ಗೆದ್ದರು. ಜಿಲ್ಲೆಯ ಪ್ರತಿ ಗ್ರಾಮದಲ್ಲೂ ಬಿಜೆಪಿ ಪಕ್ಷ ಕಟ್ಟೋಣ. ಮೈತ್ರಿಯಾಗಿದೆ ಟಿಕೆಟ್ ಬಿಟ್ಟುಕೊಡಬೇಕು ಎಂದು ಕಾರ್ಯಕರ್ತರು ಕುಂದುವ ಅವಶ್ಯಕತೆ ಇಲ್ಲ. ಬಿಜೆಪಿ ಎಷ್ಟು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತದೆ ಎಂಬುವುದರ ಬಗ್ಗೆ ತೀರ್ಮಾನವಾಗಿಲ್ಲ ಎಂದರು.  ಹಾಸನ ಕ್ಷೇತ್ರವನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ಪ್ರೀತಂ ಗೌಡ ಒತ್ತಾಯಿಸಿದ್ದಾರೆ. ಇತ್ತ ಮಂಡ್ಯ ಕ್ಷೇತ್ರವನ್ನು ಉಳಿಸಿಕೊಳ್ಳಲು ಮಾಜಿ ಸಚಿವ ನಾರಾಯಣ ಗೌಡರಿಂದ ಆಗ್ರಹ ಕೇಳಿಬಂದಿದೆ.

ಹಾಸನ, ಮಂಡ್ಯ ಸೇರಿ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಇತ್ತು. ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಒಂದು ಕ್ಷೇತ್ರದಲ್ಲಿ ಮಾತ್ರ ಗೆದ್ದಿದೆ. ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪ್ರಬಲ ಪೈಪೋಟಿ ನೀಡಿದೆ. ಹೀಗಾಗಿ ನಮ್ಮ ಕಾರ್ಯಕರ್ತರು ಮಂಡ್ಯ ಕ್ಷೇತ್ರವನ್ನು ಕೇಳುತ್ತಿದ್ದಾರೆ. ಸಂಸದೆ ಸುಮಲತಾ ಅಂಬರೀಶ್​ ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಅವರ ಅಭಿಪ್ರಾಯ ಸಂಗ್ರಹಿಸಿ ನಾಯಕರಿಗೆ ಮಾಹಿತಿ ನೀಡುತ್ತೇನೆ ಎಂದು ತಿಳಿಸಿದರು.

ಜೆಡಿಎಸ್ ಕಣ್ಣಿಟ್ಟ ಕ್ಷೇತ್ರಗಳನ್ನು ಬಿಟ್ಟುಕೊಡಲು ಸ್ಥಳೀಯ ಬಿಜೆಪಿ ಮುಖಂಡರಿಂದ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಮಂಡ್ಯ, ಹಾಸನ ಕ್ಷೇತ್ರಗಳನ್ನು ಬಿಜೆಪಿಯಲ್ಲೇ ಉಳಿಸಿಕೊಳ್ಳುವಂತೆ ಸ್ಥಳೀಯ ಕಮಲ ಮುಖಂಡರಿಂದ ಆಗ್ರಹ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!