ಬಾಲಕೃಷ್ಣ ಮತ್ತು ವಿಜಯೇಂದ್ರ 
ರಾಜಕೀಯ

ನೆಹರೂ ಕುಟುಂಬದ ಗುಲಾಮಗಿರಿಯ ನೆರಳಲ್ಲೇ ಇರುವ ಶಾಸಕ ಬಾಲಕೃಷ್ಣ ಹೇಳಿಕೆಗೆ ಈ ಚಿತ್ರವೇ ಉತ್ತರ!

ಬಿಜೆಪಿ ಸಂಸದರು ಗಂಡಸರಲ್ಲ ಅವರು ಬರೀ ಶೋ ಪೀಸ್ ಗಳು ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬೆಂಗಳೂರು: ಬಿಜೆಪಿ ಸಂಸದರು ಗಂಡಸರಲ್ಲ ಅವರು ಬರೀ ಶೋ ಪೀಸ್ ಗಳು ಎಂದು ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ನೀಡಿರುವ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವಿಜಯೇಂದ್ರ ಬ್ರಿಟಿಷರು ದೇಶಬಿಟ್ಟು ತೊಲಗಿದರೂ  ನೆಹರೂ ಕುಟುಂಬದ ಗುಲಾಮಗಿರಿಯ ನೆರಳಲ್ಲೇ ಇರುವ ಶಾಸಕ ಬಾಲಕೃಷ್ಣನವರಂತಹ  ಕಾಂಗ್ರೆಸ್ಸಿಗರು ಇಂದು ನಮ್ಮ ಪಕ್ಷದ ಸಂಸದರುಗಳನ್ನು ಕುರಿತು ನೀಡಿರುವ ಕೀಳುಮಟ್ಟದ ಹೇಳಿಕೆಗೆ ಈ ಚಿತ್ರವೇ ಉತ್ತರ ಹೇಳುತ್ತದೆ ಎಂದು ಟಾಂಗ್ ನೀಡಿದ್ದಾರೆ.

ವಿಜಯೇಂದ್ರ ಪೋಸ್ಟ್ ಗೆ ಶಾಸಕ ಬಾಲಕೃಷ್ಣ ಟ್ವೀಟ್ ಮೂಲಕವೇ ಉತ್ತರ ನೀಡಿದ್ದಾರೆ. ನಿಮ್ಮ ಸಂಸದರಿಗೆ ದೆಹಲಿಗೆ ಹೋಗಿ  ನರೇಂದ್ರ ಮೋದಿ ಅವರ ಮುಂದೆ ನಿಂತು ಈ ರೀತಿ ಮಾತನಾಡುವ ತಾಕತ್ತು ಇದೆಯಾ..?! ಗುಜರಾತಿಗಳು ನಿಮ್ಮ ಪೂಜ್ಯ ತಂದೆಯವರನ್ನು ಹೀನಾಯವಾಗಿ ಸಿಎಂ ಕುರ್ಚಿಯಿಂದ ಇಳಿಸಿ ಕಣ್ಣೀರು ಹಾಕಿಸಿದ್ದು ಮರೆತುಹೋಯಿತೇ ವಿಜಯೇಂದ್ರರವರೇ..? ಎಂದು ಬಾಲಕೃಷ್ಣ ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT