ಜಗದೀಶ್ ಶೆಟ್ಟರ್ 
ರಾಜಕೀಯ

'ಕೈ' ಕೊಟ್ಟ ಶೆಟ್ರು: ಬೆಳಗಾವಿ ಲೋಕಸಭೆಗೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಪ್ರಿಯಾಂಕಾ ಜಾರಕಿಹೊಳಿ ಅಥವಾ ಮೃಣಾಲ್ ಹೆಬ್ಬಾಳ್ಕರ್?

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಹಾಲಿ ಸಂಸದೆ ಮಂಗಳಾ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ (ಜಗದೀಶ್ ಶೆಟ್ಟರ್ ಸೊಸೆ) ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಲೋಕಸಭೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಿದೆ.

ಬೆಳಗಾವಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಹಾಲಿ ಸಂಸದೆ ಮಂಗಳಾ ಅಂಗಡಿ ಅವರ ಪುತ್ರಿ ಶ್ರದ್ಧಾ ಶೆಟ್ಟರ್ (ಜಗದೀಶ್ ಶೆಟ್ಟರ್ ಸೊಸೆ) ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಲೋಕಸಭೆಗೆ ಬಿಜೆಪಿಯ ಒಮ್ಮತದ ಅಭ್ಯರ್ಥಿಯಾಗಿ ಹೊರಹೊಮ್ಮುವ ಸಾಧ್ಯತೆ ಹೆಚ್ಚಿದೆ.

ಮತ್ತೊಂದೆಡೆ, ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿರುವುದು ಕಾಂಗ್ರೆಸ್‌ನಲ್ಲಿ ಚರ್ಚೆಗೆ ಕಾರಣವಾಗಿದ್ದು, 'ಗೆಲ್ಲುವ '  ಅಭ್ಯರ್ಥಿಯನ್ನು ಕಣಕ್ಕಿಳಿಸುವ ಒತ್ತಡದಲ್ಲಿದೆ. ಹೀಗಾಗಿ ಪ್ರಬಲ ಎದುರಾಳಿಯನ್ನು ಕಣಕ್ಕಿಳಿಸಲು ಪಕ್ಷವು ಜಾರಕಿಹೊಳಿ ಅಥವಾ ಹೆಬ್ಬಾಳ್ಕರ್ ಅವರ ಮೇಲೆ ಅವಲಂಬಿತವಾಗಿದೆ ಎಂದು ಮೂಲಗಳು ತಿಳಿಸಿವೆ. ರಾಜಕೀಯವಾಗಿ ಪ್ರಭಾವಿ ಕುಟುಂಬಗಳ ಪೈಕಿಯಿಂದ ಒಬ್ಬರನ್ನು ಕಣಕ್ಕಿಳಿಸಬಹುದು ಎಂದು ಮೂಲಗಳು ತಿಳಿಸಿವೆ.

ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್‌ನಲ್ಲಿದ್ದಾಗ, ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಮೋಹನ್ ಕಾತರಕಿ, ಯುವ ಮುಖಂಡರಾದ ಕಿರಣ್ ಸಾಧುನವರ್, ಡಾ ಗಿರೀಶ್ ಸೋನ್ವಾಲ್ಕರ್ ಮತ್ತು ವಿನಯ್ ನಾವಲಗಟ್ಟಿ ಅವರಂತಹ ನಾಯಕರೊಬ್ಬರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಪಕ್ಷ ಯೋಚಿಸುತಿತ್ತು, ಆದರೆ ಈಗ ಸುರೇಶ್ ಅಂಗಡಿ ಕುಟುಂಬದ ಸದಸ್ಯರೊಬ್ಬರೇ ಬಿಜೆಪಿ ಅಭ್ಯರ್ಥಿಯಾಗಲಿರುವ ಕಾರಣ, ಕಾಂಗ್ರೆಸ್ ತನ್ನ ಕಾರ್ಯತಂತ್ರವನ್ನು ಬದಲಾಯಿಸಬಹುದು ಎಂದು ಮೂಲಗಳು ತಿಳಿಸಿವೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ತಮ್ಮ ಪುತ್ರ ಮೃಣಾಲ್ ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸಲು ಉತ್ಸುಕರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮ್ಮ ಪುತ್ರ ಅಥವಾ ಕಾಂಗ್ರೆಸ್ ಹೈಕಮಾಂಡ್ ಯಾರನ್ನೆ ಕಣಕ್ಕಿಲಿಸಿದರೂ ಪಕ್ಷದ ಅಭ್ಯರ್ಥಿಯ ಪರವಾಗಿ ತಾವು ಕೆಲಸ ಮಾಡುವುದಾಗಿ ಲಕ್ಷಿ ಹೆಬ್ಬಾಳ್ಕರ್ ಭಾನುವಾರ ಹೇಳಿದ್ದಾರೆ, ಆದರೆ ಸಮೀಕ್ಷಾ ವರದಿ ಬಂದ ನಂತರವೇ ಅಂತಿಮ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.

ಕೆಲವು ವಾರಗಳ ಹಿಂದೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಅಥವಾ ಹೆಬ್ಬಾಳ್ಕರ್ ಕುಟುಂಬದ ಯಾವುದೇ ಸದಸ್ಯರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಬೆಳಗಾವಿಗೆ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕುರುಬ ಸಮುದಾಯದ ನಾಯಕರನ್ನು ಪಕ್ಷ ಆಯ್ಕೆ ಮಾಡಬಹುದು ಎಂದು ಅವರು ಹೇಳಿದ್ದಾರೆ.

ಬಹಳ ದಿನಗಳಿಂದ, ಬೆಳಗಾವಿಯ ಅಭ್ಯರ್ಥಿಯಾಗಿ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಅವರನ್ನು ಕಣಕ್ಕಿಳಿಸಬೇಕೆಂದು ಹಲವು ಸ್ಥಳೀಯ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ. ತಮ್ಮ ಕುಟುಂಬದ  ಸದಸ್ಯರನ್ನು ಕಣಕ್ಕಿಳಿಸಲು ಜಾರಕಿಹೊಳಿ ವಿರೋಧ ವ್ಯಕ್ತಪಡಿಸಿದ್ದರು, ಆದರೆ ಬದಲಾಗುತ್ತಿರುವ ರಾಜಕೀಯ ಸನ್ನಿವೇಶದ ಹಿನ್ನೆಲೆಯಲ್ಲಿ ಅವರು ತಮ್ಮ ನಿಲುವು ಬದಲಿಸುತ್ತಾರೆಯೇ ಎಂಬುದು ಕಾದು ನೋಡಬೇಕಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT