ಪರಮೇಶ್ವರ್ 
ರಾಜಕೀಯ

ಮೋದಿಗೆ ಹೇಳಿ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಲಿ: ಈಶ್ವರಪ್ಪಗೆ ಪರಮೇಶ್ವರ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೇಳಿ ದೇಶ ವಿಭಜನೆಯ ಹೇಳಿಕೆಗೆ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಲಿ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ...

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಹೇಳಿ ದೇಶ ವಿಭಜನೆಯ ಹೇಳಿಕೆಗೆ ಗುಂಡಿಕ್ಕಿ ಕೊಲ್ಲುವ ಕಾನೂನು ಜಾರಿಗೊಳಿಸಲಿ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ ಅವರು ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಅವರಿಗೆ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಸಂಸದರಾದ ಡಿ. ಕೆ ಸುರೇಶ್ ಹಾಗೂ ಶಾಸಕರಾದ ವಿನಯ್ ಕುಲಕರ್ಣಿ ಅವರನ್ನು ಗುಂಡಿಕ್ಕಿ ಕೊಲ್ಲಬೇಕು ಎಂದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ ಅವರು, ಕೇಂದ್ರದಲ್ಲಿ ಪ್ರಧಾನಿ ಮೋದಿ ಹಾಗೂ ಅಮಿತ್ ಶಾಗೆ ಹೇಳಿ ಕಾನೂನು ಜಾರಿಗೆ ತರಲಿ. ಕೇಂದ್ರ ಕಾನೂನು ಜಾರಿಗೆ ತಂದರೆ ರಾಜ್ಯಕ್ಕೆ ಅಲ್ಲ ಇಡಿ ದೇಶಕ್ಕೆ ಅನ್ವಯ ಆಗುತ್ತೆ. ಅದು ಬಿಟ್ಟು ಈ ರೀತಿ ಪದೇ ಪದೇ ಹೇಳಿಕೆ ನೀಡೋದು ಸರಿಯಲ್ಲ ಎಂದಿದ್ದಾರೆ.

ಈಶ್ವರಪ್ಪ ಅವರ ಗುಂಡಿಕ್ಕಿ ಕೊಲ್ಲುವ ಅವರ ಹೇಳಿಕೆಗೆ ಸಂಬಂಧಿಸಿದಂತೆ ಯಾರಾದರೂ ದೂರು ನೀಡಿದರೆ ಪ್ರಕರಣ ದಾಖಲಿಸುತ್ತೇವೆ ಮತ್ತು ಕಾನೂನು ಪ್ರಕಾರ ಏನು ಕ್ರಮ ತೆಗೆದುಕೊಳ್ಳಬೇಕು ಅದನ್ನು ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಇನ್ನು ಈಶ್ವರಪ್ಪ ಅವರ ಹೇಳಿಕೆ ಕಾಂಗ್ರೆಸ್ ಸಹ ಕಿಡಿಕಾರಿದ್ದು, ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಹೇಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಕೊಡಗು: 100 ಎಕರೆ ಅರಣ್ಯ ವಲಯದಲ್ಲಿ ಬೌದ್ಧಧರ್ಮ ಜೊತೆಗೆ ಪರಿಸರ ಸಂರಕ್ಷಣೆ ಮಾಡುತ್ತಿರುವ 'ಕರ್ಮ ಕರ್ಗ್ಯು ಮಠ!

SCROLL FOR NEXT