ಸಿಎಂ ಸಿದ್ದರಾಮಯ್ಯ ಮತ್ತಿತರರು 
ರಾಜಕೀಯ

ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು- ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ , ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಬೆಂಗಳೂರು: ದೇಶದಲ್ಲಿ ಆಗಿರುವ ಅಭಿವೃದ್ಧಿಯಲ್ಲಿ , ಜಾರಿ ಆಗಿರುವ ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಕಾರ್ಯಕ್ರಮಗಳಲ್ಲಿ ಬಹುತೇಕ ಎಲ್ಲವೂ ಕಾಂಗ್ರೆಸ್ ಅವಧಿಯವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸಮಿತಿ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ, ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಆಹಾರ ಭದ್ರತಾ ಕಾಯ್ದೆ, ಶಿಕ್ಷಣ ಹಕ್ಕು ಮತ್ತು ಮಾಹಿತಿ ಹಕ್ಕು ಕಾಯ್ದೆಗಳು ಜಾರಿ ಆದವು ಎಂದು ತಿಳಿಸಿದರು. 

ದೇಶದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ವಾಗ್ದಾನಗಳನ್ನು ಕೊಡಬೇಕು ಮತ್ತು ಅವುಗಳನ್ನು ಈಡೇರಿಸಬೇಕು. ಜನರ ವಿಶ್ವಾಸ ಉಳಿಸಿಕೊಳ್ಳುವಂತಹ ವಾಗ್ದಾನ ನೀಡಬೇಕು ಎನ್ನುವುದು ಕಾಂಗ್ರೆಸ್ ಬದ್ಧತೆ. 2013 ರಲ್ಲಿ ನೀಡಿದ್ದ ವಾಗ್ದಾನಗಳನ್ನು ನಮ್ಮ ಸರ್ಕಾರ ಶೇ.98 ರಷ್ಟು ಈಡೇರಿಸಿದೆ. 2024 ರಲ್ಲೂ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ಉಳಿದ ಭರವಸೆಗಳನ್ನು ಯಶಸ್ವಿಯಾಗಿ ಜಾರಿ ಮಾಡುತ್ತಿದ್ದೇವೆ ಎಂದರು.

ಸಂವಿಧಾನ, ಪ್ರಜಾಪ್ರಭುತ್ವ, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿರುವ ಹೊತ್ತಲ್ಲಿ, ಈ ಅನಾಹುತಗಳನ್ನು ತಡೆಯುವ ಪರಿಣಾಮಕಾರಿ ಘೋಷಣೆ-ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ರೂಪಿಸುತ್ತೇವೆ ಎಂದು ತಿಳಿಸಿದರು.

ಎಐಸಿಸಿ ಮುಖಂಡರೂ, ಪ್ರಣಾಳಿಕೆ ಸಮಿತಿ ಸದಸ್ಯರೂ ಆದ ರಾಜಾ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಣಾಳಿಕೆ ಸಮಿತಿ ಮುಖ್ಯಸ್ಥರಾದ ಮೆಹರೂಜ್ ಖಾನ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.‌

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

ಕಾರುಗಳ ಬೆಲೆಯಲ್ಲಿ ಆಗಲಿದೆ ಭಾರಿ ಇಳಿಕೆ: GST ಪರಿಷ್ಕರಣೆಗಾಗಿ ಕಾದು ಕುಳಿತ ಗ್ರಾಹಕರು!

IADWS: ಭಾರತೀಯ ಸೇನೆ ಬತ್ತಳಿಕೆಗೆ 'ಲೇಸರ್ ನಿರ್ದೇಶಿತ ಹೊಸ ಅಸ್ತ್ರ': ದಂಗಾದ ಚೀನಾ, ಹೇಳಿದ್ದು ಏನು?

ಗೌರಿ-ಗಣೇಶ ಹಬ್ಬ: ಪರಿಸರ ಕಾಳಜಿ ಮರೆಯದಿರೋಣ, ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ! Video

SCROLL FOR NEXT