ದೇವೇಗೌಡರ ಜೊತೆ ಸಿಪಿ ಯೋಗೇಶ್ವರ್. 
ರಾಜಕೀಯ

ಹೆಚ್​​.ಡಿ ದೇವೇಗೌಡ ಭೇಟಿ ಮಾಡಿದ ಸಿಪಿ ಯೋಗೇಶ್ವರ್‌

ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಭಾನುವಾರ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಬೆಂಗಳೂರು: ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಅವರು ಭಾನುವಾರ ಮಾಜಿ ಪ್ರಧಾನಮಂತ್ರಿ ಹೆಚ್'ಡಿ.ದೇವೇಗೌಡ ಅವರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.

ಪದ್ಮನಾಭನಗರ ನಿವಾಸದಲ್ಲಿರುವ ದೇವೇಗೌಡ ಅವರ ನಿವಾಸಕ್ಕೆ ಯೋಗೇಶ್ವರ್ ಅವರು ನಿನ್ನೆ ಸಂಜೆ ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ.

ಭೇಟಿ ಕುರಿತು ಯೋಗೇಶ್ವರ್ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.ಕರುನಾಡಿನ ಹೆಮ್ಮೆ, ಗೌರವಾನ್ವಿತ ಮಾಜಿ ಪ್ರಧಾನಿ ಶ್ರೀ ಹೆಚ್‌.ಡಿ. ದೇವೇಗೌಡರನ್ನು ಅವರ ನಿವಾಸದಲ್ಲಿ ಭೇಟಿಮಾಡಿ ಆಶೀರ್ವಾದ ಪಡೆಯಲಾಯಿತು. ನಾಡಿನ ರೈತರು, ಕೃಷಿ ಕಾರ್ಮಿಕರ ಬಗ್ಗೆ ಈ ಇಳಿ ವಯಸ್ಸಿನಲ್ಲೂ ದೇವೇಗೌಡರಿಗೆ ಇರುವ ಕಳಕಳಿ ಅನುಕರಣೀಯ. 6 ದಶಕಗಳ ಸುದೀರ್ಘ ಸಾರ್ವಜನಿಕ ಜೀವನ ಪೂರೈಸಿರುವ ಶ್ರೀ ದೇವೇಗೌಡರ ಜ್ಞಾನ, ಅನುಭವ ನಮ್ಮೆಲ್ಲರಿಗೂ ಪ್ರೇರಣಾದಾಯಿ ಎಂದು ಹೇಳಿದ್ದಾರೆ.

ಲೋಕಸಭಾ ಚುನಾವಣೆಗೆ ಬಿಜೆಪಿ, ಜೆಡಿಎಸ್‌ (BJP-JDS) ಮೈತ್ರಿ ಮಾಡಿಕೊಂಡಿರುವ ಕಾರಣ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಕುತೂಹಲ ಮೂಡಿದೆ. ಈ ಹಿನ್ನೆಲೆಯಲ್ಲಿ ಯೋಗೇಶ್ವರ್‌ ಭೇಟಿ ಮಹತ್ವ ಪಡೆದುಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ವೋಟ್ ಚೋರಿಯಿಂದ ಕಾನೂನು ಚೋರಿ' : ಇಡೀ ವ್ಯವಸ್ಥೆ ನಾಶಕ್ಕೆ ಬಿಜೆಪಿ ಸಂಚು,EC, ಕೇಂದ್ರದ ವಿರುದ್ಧ ರಾಹುಲ್ ತೀವ್ರ ವಾಗ್ದಾಳಿ!

ಬಿಹಾರದಲ್ಲಿ ಜಮುಯಿ ಘಟನೆ ಬೆನ್ನಲ್ಲೇ ಮತ್ತೊಂದು ಹೀನ ಕೃತ್ಯ: ಬಾಲಕಿಯನ್ನು ಹಿಡಿದು ಎಳೆದಾಡಿದ ಕೀಚಕರು, Video

ಮುಸ್ಲಿಂ ಮತದಾರರ ಹೆಸರು ಡಿಲೀಟ್ ಮಾಡುವಂತೆ ಚುನಾವಣಾ ಆಯೋಗಕ್ಕೆ BJP ಶಾಸಕ ಪತ್ರ: ಬಿಕೆ ಹರಿಪ್ರಸಾದರಿಂದ ದಾಖಲೆ ಬಿಡುಗಡೆ!

ದೇಶಾದ್ಯಂತ ಮತದಾರರ ಪಟ್ಟಿಯಿಂದ 13 ಕೋಟಿ ಮತದಾರರ ಹೆಸರು ಡಿಲೀಟ್! ಅವರ ಮಕ್ಕಳ ಗತಿಯೇನು? CEC ವಿರುದ್ಧ ದೂರು ದಾಖಲಿಸಿದ TMC ಸಂಸದೆ

Biggboss ಕಚಡ ಶೋ: ಮೂರ್ಖರನ್ನು ಸ್ಟಾರ್‌ಗಳನ್ನಾಗಿ ಮಾಡುತ್ತದೆ, ಶೋ ನಿಲ್ಲಿಸಿ; ಸ್ಟಾಂಡ್ಅಪ್ ಕಾಮಿಡಿಯನ್ ಆಕ್ರೋಶ!