ಸಾಂದರ್ಭಿಕ ಚಿತ್ರ  
ರಾಜಕೀಯ

ಲೋಕಸಭೆ ಚುನಾವಣೆಗೆ ಸಿದ್ಧತೆ: ಮಂಗಳೂರಿನಲ್ಲಿ ಇಂದು ಬೃಹತ್ ಕಾಂಗ್ರೆಸ್ ಸಮಾವೇಶ

ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಸಂಚಾರ ಬದಲಾವಣೆ

ಮಂಗಳೂರು: ಅತ್ತ ದೆಹಲಿಯಲ್ಲಿ ಶನಿವಾರ ಮತ್ತು ನಾಳೆ ಭಾನುವಾರ ಲೋಕಸಭೆ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ನಡೆಸುತ್ತಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡಿದ್ದು, ಅದು ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಆಗಿದೆ.

ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇಂದು ಮಧ್ಯಾಹ್ನ ಕಾಂಗ್ರೆಸ್​ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದು, ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಸಜ್ಜುಗೊಳಿಸುವ ಸಲುವಾಗಿ ಈ ಸಮಾವೇಶ ಆಯೋಜಿಸಲಾಗಿದೆ.

ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್ ಸೇರಿ ಹಲವು ನಾಯಕರು ಭಾಗಿ: ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಲ್ಲಾ ಸಚಿವರು, ಸಂಸದರರು, ಶಾಸಕರು, ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು ಸೇರಿದಂತೆ ಮುಂಚೂಣಿ ಘಟಕದ ಎಲ್ಲಾ ಹಂತದ ಅಧ್ಯಕ್ಷರು ಕಡ್ಡಾಯ ಭಾಗಿಗೆ ಸೂಚನೆ ನೀಡಲಾಗಿದೆ.

ಡ್ರೋನ್ ಹಾರಾಟಕ್ಕೆ ನಿಷೇಧ: ಇಂದು ಬೆಳಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ನಿಷೇಧಿಸಲಾಗಿದೆ. ಕಾರ್ಯಕ್ರಮದ ಬಳಿಕ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿರುವ ಹಿನ್ನಲೆ ವಾಮಂಜೂರಿನ ತಿರುವೈಲಿನಲ್ಲಿ ಕಂಬಳ ಕಾರ್ಯಕ್ರಮದ ಸುತ್ತಮುತ್ತಲೂ 5 ಕಿ.ಮೀ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಡ್ರೋನ್ ಹಾರಾಟ ನಿರ್ಬಂಧಿಸಲಾಗಿದೆ.

ಸಂಚಾರ ಬದಲಾವಣೆ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಪ್ರಮುಖವಾಗಿ ಸಂಚಾರ ಬದಲಾವಣೆ ಮಾಡಲಾಗಿದೆ. ಬಿಸಿ ರೋಡ್‌ನಿಂದ ಮಂಗಳೂರಿಗೆ ಬರುವ ವಾಹನಗಳು ಬಿಸಿ ರೋಡ್-ಪಾಣೆಮಂಗಳೂರು-ಮುಡಿಪು-ಪಂಪ್ವೆಲ್ ಮಾರ್ಗವಾಗಿ ಮಂಗಳೂರಿಗೆ ತೆರಳಲು ಪೊಲೀಸರು ಸೂಚನೆ ನೀಡಿದ್ದಾರೆ.

ಮಂಗಳೂರಿನಿಂದ ಹೊರಗೆ ಹೋಗುವ ವಾಹನಗಳಿಗೂ ಮುಡಿಪು-ಪಾಣೆಮಂಗಳೂರು ರಸ್ತೆ ಬಳಸುವಂತೆ ಸೂಚನೆ ನೀಡಲಾಗಿದೆ. ಬೆಳಗ್ಗೆ ಒಂಬತ್ತು ಗಂಟೆಯಿಂದ ಮಾರ್ಗ ಬದಲಾಯಿಸುವಂತೆ ಮಂಗಳೂರು ಪೊಲೀಸ್ ಕಮೀಷನರ್ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

SCROLL FOR NEXT