ಸಿಎಂ ಸಿದ್ದರಾಮಯ್ಯ  
ರಾಜಕೀಯ

ಮಂಗಳೂರು-ಉಡುಪಿ ಜನ ನಿಮ್ಮನ್ನೇಕೆ ಗೆಲ್ಲಿಸಬೇಕು: ಕಟೀಲ್, ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಪ್ರಶ್ನೆ

ನಿಮ್ಮನ್ನೇಕೆ ಮಂಗಳೂರು, ಉಡುಪಿ ಜನ ಗೆಲ್ಲಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಬೆಂಗಳೂರು: ನಿಮ್ಮನ್ನೇಕೆ ಮಂಗಳೂರು, ಉಡುಪಿ ಜನ ಗೆಲ್ಲಿಸಬೇಕು ಎಂದು ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ನಳಿನ್ ಕುಮಾರ್ ಕಟೀಲ್ ಅವರೇ? ಶೋಭಾ ಕರಂದ್ಲಾಜೆ ಅವರೇ? ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ. ನಳಿನ್ ಕುಮಾರ್ ಕಟೀಲ್ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀವಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ತಾಯಿ? ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿ, ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗುವ, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ದಕ್ಷಿಣ ಕನ್ನಡದ ಜನತೆಗೆ ರಾಜಕೀಯ ಪ್ರಜ್ಞಾವಂತಿಕೆ ಹೆಚ್ಚಾಗಿದೆ. ಸತ್ಯ ಹೇಳುವವರು ಮತ್ತು ಸುಳ್ಳು ಹೇಳುವವರು ಯಾರು ಎನ್ನುವುದನ್ನು ಅರ್ಥ ಮಾಡಿಕೊಳ್ಳುವ ಪ್ರಜ್ಞಾವಂತಿಕೆಯೂ ಇದೆ. ಈ ಕಾರಣಕ್ಕೆ ಮಂಗಳೂರಿನಲ್ಲೇ ಮೊದಲ ಸಭೆ ಮಾಡುವ ಮೂಲಕ ಲೋಕಸಭೆ ಚುನಾವಣೆ ಪ್ರಚಾರ ಆರಂಭಿಸಿದ್ದೇವೆಂದು ಹೇಳಿದ್ದಾರೆ.

ಜಾತಿ-ಜಾತಿಗಳ ಮಧ್ಯೆ, ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ, ಜಗಳ ತಂದಿಟ್ಟಿರುವುದು ಬಿಟ್ಟರೆ ಜನ ಸಾಮಾನ್ಯರ ಬದುಕಿಗೆ ಅನುಕೂಲ ಆಗುವ ಒಂದೇ ಒಂದು ಕಾರ್ಯಕ್ರಮವನ್ನು ಕಳೆದ ಹತ್ತು ವರ್ಷಗಳಲ್ಲಿ ಜಾರಿ ಆಗಿದೆಯಾ? ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಆಯ್ತಾ? ಅಡುಗೆ ಗ್ಯಾಸ್ ಬೆಲೆ ಕಡಿಮೆ ಆಗಿದೆಯಾ? ಕಪ್ಪು ಹಣ ವಾಪಾಸ್ ಬಂದಿದೆಯಾ? ಮೋದಿ ಅವರು ಹೇಳಿದ್ದ ಅಚ್ಛೆ ದಿನ್ ಯಾರಿಗಾದರೂ ಬಂದಿದೆಯಾ?

2013-18 ರ ವರೆಗೆ ನಾವು ಕೊಟ್ಟ ಭರವಸೆಗಳಲ್ಲಿ ಶೇ.98 ರಷ್ಟನ್ನು ಈಡೇರಿಸಿದೆವು. ಈ ಬಾರಿ ಚುನಾವಣೆ ವೇಳೆ 5 ಗ್ಯಾರಂಟಿಗಳ ಜೊತೆಗೆ ಹಲವು ಭರವಸೆ ನೀಡಿದ್ದೆವು. ಕೇವಲ 8 ತಿಂಗಳಲ್ಲಿ ಐದಕ್ಕೆ ಐದೂ ಗ್ಯಾರಂಟಿ ಯೋಜನೆಗಳನ್ನೂ ಜಾರಿ ಮಾಡಿ ಇಡೀ ದೇಶಕ್ಕೆ ಕರ್ನಾಟಕ ಮಾದರಿ ಅಭಿವೃದ್ಧಿಯನ್ನು ಕೊಟ್ಟಿದ್ದೇವೆಂದು ತಿಳಿಸಿದ್ದಾರೆ.

ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ನಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಶುರು ಮಾಡಿದೆವು. ನಮ್ಮ ಮೊದಲ ಗ್ಯಾರಂಟಿಯಾದ ಶಕ್ತಿ ಯೋಜನೆಯಿಂದ 155 ಕೋಟಿ ಮಹಿಳೆಯರು ಉಚಿತವಾಗಿ ಬಸ್ ನಲ್ಲಿ ಪ್ರಯಾಣಿಸಿದರು. ಬಿಜೆಪಿ ತನ್ನ ಇತಿಹಾಸದಲ್ಲಾಗಲೀ, ವರ್ತಮಾನದಲ್ಲಾಗಲೀ ಇಷ್ಟೊಂದು ಜನೋಪಯೋಗಿ ಕೆಲಸ ಮಾಡಿದ್ದರೆ ಒಂದೇ ಒಂದು ಉದಾಹರಣೆ ಕೊಡಿ. ಅದೇ ರೀತಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆಗಳಲ್ಲೂ ಕೋಟಿ ಕೋಟಿ ಮಹಿಳೆಯರು ಗ್ಯಾರಂಟಿಗಳ ಲಾಭವನ್ನು ಪ್ರತೀ ತಿಂಗಳು ಪಡೆಯುತ್ತಿದ್ದಾರೆ. ಬಡವರು, ಮಧ್ಯಮ ವರ್ಗದವರಿಗೆ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿ ಮಾಡಿದ ಬಳಿಕವೂ ರಾಜ್ಯದ ಆರ್ಥಿಕತೆಯನ್ನು ಸದೃಡವಾಗಿ ಪ್ರಗತಿ ಪಥದಲ್ಲಿ ಮುನ್ನಡೆಸುತ್ತಿದ್ದೇವೆ.

ಗ್ಯಾರಂಟಿಗಳಿಂದ ರಾಜ್ಯ ದಿವಾಳಿಯಾಗಿಬಿಡುತ್ತದೆ ಎಂದಿದ್ದ ಮೋದಿ ಅವರೇ ಈಗ ನಮ್ಮ ಗ್ಯಾರಂಟಿಯನ್ನು ಕದ್ದು "ಮೋದಿ ಗ್ಯಾರಂಟಿ-ಮೋದಿ ಗ್ಯಾರಂಟಿ" ಎಂದು ಭಜನೆ ಆರಂಭಿಸಿದ್ದಾರೆ. ಬಿಜೆಪಿ ನಾಯಕರೇ, ನಮ್ಮ ಗ್ಯಾರಂಟಿ ಪಡೆಯುವ ಫಲಾನುಭವಿಗಳನ್ನು ಅವಮಾನಿಸಬೇಡಿ ಜನರೇ ನಿಮಗೆ ಬುದ್ದಿ ಕಲಿಸುತ್ತಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ತೆರೆ ಎಳೆಯಲು ಹೈಕಮಾಂಡ್ ತೀರ್ಮಾನಿಸಬೇಕು- ಸಿಎಂ ಸಿದ್ದರಾಮಯ್ಯ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಅಯೋಧ್ಯೆ ರಾಮ ಮಂದಿರ ನಿರ್ಮಾಣ ಪೂರ್ಣ: ರಾಮ-ಸೀತೆ ವಿವಾಹ ಪರ್ವದಂದೇ ದೇಗುಲದ ಶಿಖರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

"Misfit For Army": ಗುರುದ್ವಾರ ಪ್ರವೇಶಿಸಲು ನಿರಾಕರಣೆ; ಕ್ರಿಶ್ಚಿಯನ್ ಸೇನಾ ಅಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ!

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

SCROLL FOR NEXT