ಅಮಿತ್ ಶಾ ಭೇಟಿ ಮಾಡಿದ ಕುಮಾರಸ್ವಾಮಿ ಮತ್ತು ನಿಖಿಲ್  
ರಾಜಕೀಯ

ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್; ಸುಮಲತಾಗೆ ಹಿನ್ನಡೆ, ಡಾ. ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್!?

ಕೇಂದ್ರ ಸಚಿವ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಈಗಾಗಲೇ ಜೆಡಿಎಸ್ ರಂಗ ತಾಲೀಮು ಆರಂಭಿಸಿದೆ. ಆದರೆ ಕ್ಷೇತ್ರ ಹಂಚಿಕೆ ಮಾತ್ರ ಅಂತಿಮವಾಗಿಲ್ಲ ಹೀಗಾಗಿ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ದಿಢೀರ್ ದೆಹಲಿ ಪ್ರವಾಸ ಮಾಡಿದ್ದಾರೆ.

ದೆಹಲಿಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಅಮಿತ್ ಶಾ ಮಾತು ಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್ ಎಂದು ಅಮಿತ್ ಶಾ ಮಾತುಕೊಟ್ಟಿದ್ದು ಮಂಡ್ಯ, ಹಾಸನದಲ್ಲಿ ನಿಮ್ಮ ಶಾಸಕರಿಂದಲೇ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ ಎಂದು ಹೆಚ್​ಡಿ ಕುಮಾರಸ್ವಾಮಿ ದೂರಿದ್ದಾರೆ.

ಕೇಂದ್ರ ಸಚಿವ ಅಮಿಶ್ ಶಾ ಅವರೊಂದಿಗೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿ ಮಂಡ್ಯ ವಿಚಾರದಲ್ಲಿ ಮೇಲುಗೈ ಸಾಧಿಸಿದ್ದಾರೆ. ಮಂಡ್ಯ, ಹಾಸನ, ಕೋಲಾರ ಟಿಕೆಟ್ ಜೆಡಿಎಸ್​ಗೆ ಫಿಕ್ಸ್ ಆಗಿದೆ ಎಂದು ಹೇಳಲಾಗಿದೆ. ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಜಿಲ್ಲೆಯ ಬಗ್ಗೆ ಮತ್ತೊಮ್ಮೆ ಚರ್ಚೆ ಮಾಡೋಣಾ ಎಂದು ಹೈಕಮಾಂಡ್ ಹೆಚ್​ಡಿಕೆಗೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಮಂಡ್ಯ ಕ್ಷೇತ್ರ ಜೆಡಿಎಸ್ ಪಾಲಾಗಿರುವ ಹಿನ್ನೆಲೆಯಲ್ಲಿ ಸುಮಲತಾ ಮತ್ತೆ ಪಕ್ಷೇತರವಾಗಿ ಸ್ಪರ್ಧೆ ಮಾಡ್ತಾರಾ ಎಂದು ಕಾದು ನೋಡಬೇಕಿದೆ. ಮಂಡ್ಯ ಬಿಜೆಪಿ- ಜೆಡಿಎಸ್ ಅಭ್ಯರ್ಥಿಯಾಗಿ ಡಾ.ಮಂಜುನಾಥ್ ಸ್ಪರ್ಧೆ ಖಚಿತವಾಗಿದೆ ಎನ್ನಲಾಗಿದೆ. ಬಿಜೆಪಿ ಹೈ ಕಮಾಂಡ್ ಡಾ.ಮಂಜುನಾಥ್ ಸ್ಪರ್ಧೆಗೆ ಗ್ರೀನ್ ಸಿಗ್ನಲ್ ಕೊಟ್ಟ ಹಿನ್ನೆಲೆಯಲ್ಲಿ ಸುಮಲತಾಗೆ ಜೆಡಿಎಸ್ ಭಾರೀ ಠಕ್ಕರ್‌ ಕೊಟ್ಟಿದೆ.

ಹಾಸನ ಲೋಕಸಭೆ ಕ್ಷೇತ್ರದಿಂದ – ಪ್ರಜ್ವಲ್ ರೇವಣ್ಣ ಸ್ಪರ್ಧೆ ಹಾಗೆ ಕೋಲಾರ ಲೋಕಸಭಾ ಕ್ಷೇತ್ರದಿಂದ ನಿಸರ್ಗ ನಾರಾಯಣಸ್ವಾಮಿ ಸ್ಪರ್ಧೆ ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

'ಅಭಿವೃದ್ಧಿಶೀಲ ರಾಷ್ಟ್ರಗಳ ಕೈಕಟ್ಟಬೇಡಿ, ಡಂಪಿಂಗ್ ವಿರುದ್ಧ ಸಾಕ್ಷ್ಯಾಧಾರಿತ ಕ್ರಮ ಕೈಗೊಳ್ಳಿ': G20 ಸಭೆಯಲ್ಲಿ ಭಾರತ ಕೆಂಡ

Flydubai ಕಾಕ್‌ಪಿಟ್ ದಾಳಿ: ಸಹ ಪೈಲಟ್ ಗುರುತು ಬಹಿರಂಗ

FlyDubai ಕೋ ಪೈಲಟ್ ಹಾರಾಟಕ್ಕೆ ಒಮಾನ್ ನಲ್ಲಿ ನಿಷೇಧ: ಪತನಕ್ಕೆ ಯತ್ನಿಸಿದ್ದ ಆತ ಉಗ್ರವಾದ ಹಿನ್ನಲೆಯವನೇ?

ಪ್ರೇಮಾನಂದ ಮಹಾರಾಜರ ಶಿಷ್ಯ ಆತ್ಮಹತ್ಯೆಗೂ ಮುನ್ನ ಏನಾಯಿತು? ಸಿಸಿಟಿವಿಯಲ್ಲಿ ಭಯಾನಕ ದೃಶ್ಯ ಸೆರೆ!