ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ  
ರಾಜಕೀಯ

ಬಿಜೆಪಿ-ಜೆಡಿಎಸ್ ಟಿಕೆಟ್ ಹಂಚಿಕೆ ಇನ್ನೂ ಅಂತಿಮವಾಗಿಲ್ಲ, ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಟಿಕೆಟ್ ಹಂಚಿಕೆ ಸುಗಮವಾಗುತ್ತದೆ ಎಂದ ಸಂಸದೀಯ ವ್ಯವಹಾರಗಳ ಸಚಿವ

ಹುಬ್ಬಳ್ಳಿ: ಲೋಕಸಭೆ ಚುನಾವಣೆಗೆ ಕರ್ನಾಟಕದಿಂದ ಬಿಜೆಪಿ-ಜೆಡಿಎಸ್ ಮಧ್ಯೆ ಟಿಕೆಟ್ ಹಂಚಿಕೆ ಕುರಿತು ಮಾತುಕತೆ ಇನ್ನೂ ಅಂತಿಮವಾಗಿಲ್ಲ, ಸೀಟು ಹಂಚಿಕೆ ಸರಿಯಾಗಿಯೇ ಆಗುತ್ತದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿದ್ದಾರೆ. ಆದರೆ, ಯಾವುದೇ ಟಿಕೆಟ್ ಹಂಚಿಕೆ ಬಗ್ಗೆ ತೀರ್ಮಾನ ಆಗಿಲ್ಲ, ಮಂಡ್ಯ ಸಂಸದೆ ಸುಮಲತಾ ಬಿಜೆಪಿಯಲ್ಲಿಯೇ ಇರುತ್ತಾರೆ ಎಂದರು.

ಬಿಜೆಪಿ ರಾಜ್ಯ ಘಟಕ ಮತ್ತು ಜೆಡಿಎಸ್ ರಾಜ್ಯ ಘಟಕದೊಂದಿಗೆ ಇಷ್ಟರಲ್ಲೇ ಹೈಕಮಾಂಡ್ ಮಾತುಕತೆ ನಡೆಸಲಿದೆ. ಬಳಿಕವೇ ಲೋಕಸಭಾ ಚುನಾವಣೆಗೆ ಟಿಕೆಟ್ ಹಂಚಿಕೆಯಾಗಲಿದೆ ಎಂದರು.

ಸೀಟು ಹಂಚಿಕೆ: ಜೆ‌ಡಿ‌ಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಅವರು ಯಾವ ಕಾರಣಕ್ಕಾಗಿ ತಮ್ಮ ವರಿಷ್ಠರನ್ನು ಭೇಟಿ ಮಾಡಿದ್ದಾರೋ ಗೊತ್ತಿಲ್ಲ. ಆದರೆ, ಲೋಕಸಭೆ ಚುನಾವಣೆಯಲ್ಲಿ ಎರಡೂ ಪಕ್ಷಗಳ ನಡುವೆ ಸೀಟು ಹಂಚಿಕೆ ಸರಿಯಾಗೇ ಆಗುತ್ತದೆ ಎಂಬ ವಿಶ್ವಾಸವಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ಹೈಡ್ರಾಮಾ: EC ಕಚೇರಿ ಮುತ್ತಿಗೆಗೆ ಯತ್ನಿಸಿದ ರಾಹುಲ್, ಪ್ರಿಯಾಂಕಾ ಗಾಂಧಿ ಸೇರಿ INDIA ಒಕ್ಕೂಟದ ಹಲವು ಸಂಸದರು ಪೊಲೀಸ್ ವಶಕ್ಕೆ..!

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜೈಲಿನಲ್ಲಿ ಪವಿತ್ರಾ ಗೌಡಗೆ ನೈಜಿರಿಯನ್ ಪ್ರಜೆಗಳ ಕಾಟ! ಕೋರ್ಟ್ ಗರಂ

ಏಷ್ಯನ್‌ ಗೇಮ್ಸ್‌ ವಿಜೇತರಿಗೆ ಸಿಎಂ ಅಭಿನಂದನೆ; ಚಿನ್ನದ ಪದಕ ವಿಜೇತರಿಗೆ 1 ಕೋಟಿ ನಗದು,ಗ್ರೂಪ್-ಬಿ ಹುದ್ದೆಗಳಿಗೆ ನೇರ ನೇಮಕಾತಿ!

ವೃತ್ತಿ ಜೀವನದ ಬಹು ದೊಡ್ಡ ಕನಸನ್ನು ರಿವೀಲ್ ಮಾಡಿದ ವೈಭವ್ ಸೂರ್ಯವಂಶಿ! Video

'ಮತದಾರರ ಪಟ್ಟಿ ಪರಿಷ್ಕರಣೆ'ಯಲ್ಲಿ ಅಕ್ರಮ ಆರೋಪ; CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹ, INDIA ಒಕ್ಕೂಟದಿಂದ ‘ಪ್ರಜಾಪ್ರಭುತ್ವ ಉಳಿಸಿ’ ಪಾದಯಾತ್ರೆ ಆರಂಭ..!