ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ)
ಸುಮಲತಾ ಅಂಬರೀಷ್(ಸಂಗ್ರಹ ಚಿತ್ರ) 
ರಾಜಕೀಯ

ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸ ಇದೆ, ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಂಡಿತ: ಸುಮಲತಾ ಅಂಬರೀಷ್

Sumana Upadhyaya

ಮಂಡ್ಯ: ಮಂಡ್ಯ ಕ್ಷೇತ್ರ ಉಳಿಸಿಕೊಳ್ಳಬೇಕೆಂಬುದು, ಬಿಜೆಪಿಗೆ ಮಂಡ್ಯ ಕ್ಷೇತ್ರದ ಟಿಕೆಟ್ ಸಿಗಬೇಕೆಂಬುದು ನನ್ನ ಹೋರಾಟ, ಟಿಕೆಟ್ ಘೋಷಣೆಯಾಗುವವರೆಗೂ ಅಂತೆಕಂತೆಗಳು ಕೇಳಿಬರುತ್ತಲೇ ಇರುತ್ತವೆ, ನೋಡೋಣ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು, ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ, ನಾನು ಈ ಬಾರಿ ಕೂಡ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಂಡಿತ ಎಂದು ಸಂಸದೆ ಸುಮಲತಾ ಅಂಬರೀಷ್ ಪುನರುಚ್ಛರಿಸಿದ್ದಾರೆ.

ನಿನ್ನೆ ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ತಮ್ಮ ಪುತ್ರನೊಂದಿಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಇದಾದ ನಂತರ ಮಂಡ್ಯ, ಹಾಸನ, ಕೋಲಾರ ಲೋಸಸಭಾ ಕ್ಷೇತ್ರಗಳ ಟಿಕೆಟ್ ಜೆಡಿಎಸ್ ಪಾಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.


ಮಂಡ್ಯ ಬಿಡುವ ಪ್ರಶ್ನೆಯೇ ಇಲ್ಲ:
ಈ ಬಗ್ಗೆ ಇಂದು ಮಂಡ್ಯದಲ್ಲಿ ದಿಶಾ ಸಭೆಯಲ್ಲಿ ಭಾಗವಹಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಂಸದೆ ಸುಮಲತಾ, ಜೆಡಿಎಸ್ ನಾಯಕರು ಬಿಜೆಪಿ ಹೈಕಮಾಂಡ್ ನ್ನು ಭೇಟಿ ಮಾಡಿ ತಮ್ಮ ಪರವಾಗಿ ಮಾತನಾಡಿ ತಮಗೆ ಟಿಕೆಟ್ ಸಿಗಬೇಕೆಂದು ಕೇಳುವುದು ಸಹಜ. ನನಗಂತೂ ಮಂಡ್ಯ ಕ್ಷೇತ್ರದ ಟಿಕೆಟ್ ಬಿಜೆಪಿ ಪಾಲಾಗುತ್ತದೆ ಎಂಬ ನಂಬಿಕೆಯಿದೆ. ನನಗೆ ಬೇರೆ ಕ್ಷೇತ್ರಗಳಲ್ಲಿ ಟಿಕೆಟ್ ಕೇಳುವುದು ಕಷ್ಟವೇನಲ್ಲ, ನನ್ನ ಮುಂದೆ ಹಲವು ಆಯ್ಕೆಗಳಿವೆ, ಆದರೆ ನಾನು ಮಂಡ್ಯ ಬಿಟ್ಟು ಬೇರೆ ಕಡೆಗೆ ಹೋಗುವ ಪ್ರಶ್ನೆಯೇ ಇಲ್ಲ. ಟಿಕೆಟ್ ಘೋಷಣೆಯಾಗುವವರೆಗೂ ಹೀಗೆ ಅಂತೆಕಂತೆಗಳು ಕೇಳಿಬರುತ್ತಲೇ ಇರುತ್ತವೆ, ನೋಡೋಣ ಏನಾಗುತ್ತದೆ ಎಂದು ತಮ್ಮ ಮುಂದಿನ ನಡೆಯ ಬಗ್ಗೆ ಕುತೂಹಲ ಇರಿಸಿಕೊಂಡರು.

ನನಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದವು: ಇನ್ನು ದಿಶಾ ಸಭೆಯಲ್ಲಿ ಮಾತನಾಡಿದ ಅವರು, ತಮಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದವು. ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ, ಕೆಆರ್ ಎಸ್ ಉಳಿವಿಗಾಗಿ ಹೋರಾಡುತ್ತಿದ್ದಾಗ ನನಗೆ ಸಾಕಷ್ಟು ಜೀವ ಬೆದರಿಕೆ ಕರೆಗಳು ಬರುತ್ತಿದ್ದವು. ಆದರೂ ನನ್ನ ಹೋರಾಟದಿಂದ ನಾನು ಹಿಂದೆ ಸರಿಯಲಿಲ್ಲ. ಮಂಡ್ಯ ಜಿಲ್ಲೆ ಜನರ ಜೀವನ ನನಗೆ ಮುಖ್ಯ ಎಂದರು.

SCROLL FOR NEXT