ಬಿ ಎಸ್ ಯಡಿಯೂರಪ್ಪ 
ರಾಜಕೀಯ

ಶೋಭಾ ಕರಂದ್ಲಾಜೆ ವಿರುದ್ಧ ರಾಜಕೀಯ ಷಡ್ಯಂತ್ರ, ಮೂರು ದಿನದಲ್ಲಿ ಬಿಜೆಪಿ ಮೊದಲ ಪಟ್ಟಿ: ಬಿ ಎಸ್ ಯಡಿಯೂರಪ್ಪ

ಈ ಬಾರಿ ಲೋಕಸಭೆ ಚುನಾವಣೆ (Loksabha Election 2024) ಸಮೀಪಿಸುತ್ತಿರುವಂತೆಯೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಜೋರಾಗಿದೆ.

ಚಿಕ್ಕಮಗಳೂರು: ಈ ಬಾರಿ ಲೋಕಸಭೆ ಚುನಾವಣೆ (Loksabha Election 2024) ಸಮೀಪಿಸುತ್ತಿರುವಂತೆಯೇ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರ ಟಿಕೆಟ್ ಪೈಪೋಟಿ ಜೋರಾಗಿದೆ. ಬಿಜೆಪಿ ಕಾರ್ಯಕರ್ತರ ಒಂದು ಬಣದ ‘ಶೋಭಾ ಹಠಾವೋ ಬಿಜೆಪಿ ಬಚಾವೋ’ ಅಭಿಯಾನ ತೀವ್ರಗೊಳ್ಳುತ್ತಿದ್ದಂತೆಯೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ಚಿಕ್ಕಮಗಳೂರಿಗೆ ಭೇಟಿ ನೀಡಿ ಬಿಜೆಪಿ ನಾಯಕರ ಜತೆ ಸಭೆ ನಡೆಸಿದ್ದಾರೆ.

ಚಿಕ್ಕಮಗಳೂರು ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ ಸೇರಿ ಹಲವರು ಭಾಗಿಯಾಗಿದ್ದು, ಶೋಭಾ ಗೋಬ್ಯಾಕ್ ಅಭಿಯಾನದ ಬಗ್ಗೆ ಮಾಹಿತಿ ಪಡೆದುಕೊಂಡರು.ಈ ವೇಳೆ ಮಾತನಾಡಿದ ಯಡಿಯೂರಪ್ಪ, ಇಂಥ ಅಭಿಯಾನಕ್ಕೆ ಹೆದರಬೇಕಿಲ್ಲ. ಶೋಭಾ ಕರಂದ್ಲಾಜೆ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಇದು ಷಡ್ಯಂತ್ರದ ಒಂದು ಭಾಗವಾಗಿದೆ. ಇನ್ನು ಮೂರು ದಿನದ ಒಳಗೆ ಎಲ್ಲವೂ ಗೊತ್ತಾಗುತ್ತದೆ ನೋಡುತ್ತಿರಿ, 3 ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆ ಆಗಬಹುದು. ಶೋಭಾ ಕರಂದ್ಲಾಜೆ ಮೋದಿ ಸಂಪುಟದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಈ ಬಾರಿಯೂ ಶೋಭಾ ಕರಂದ್ಲಾಜೆ ಗೆಲ್ಲುತ್ತಾರೆ ಎಂದು ಹೇಳಿದರು.

ಈ ಮೂಲಕ ಸಿ ಟಿ ರವಿ ಬಣಕ್ಕೆ ಉತ್ತರ ನೀಡಿದ್ದಾರೆ. ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಟಿಕೆಟ್ ಗಾಗಿ ಶೋಭಾ ಕರಂದ್ಲಾಜೆ ಮತ್ತು ಸಿ ಟಿ ರವಿ ಮಧ್ಯೆ ಪೈಪೋಟಿ ಏರ್ಪಟ್ಟಿದೆ.

ಮೂರು ದಿನದಲ್ಲಿ ಬಿಜೆಪಿ ಮೊದಲ ಪಟ್ಟಿ: ಶೋಭಾ ಕರಂದ್ಲಾಜೆ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಇದು ಷಡ್ಯಂತ್ರದ ಒಂದು ಭಾಗವಾಗಿದೆ. ಇನ್ನು ಮೂರು ದಿನದ ಒಳಗೆ ಎಲ್ಲವೂ ಗೊತ್ತಾಗುತ್ತೆ. ಮೂರು ದಿನದಲ್ಲಿ ಮೊದಲ ಪಟ್ಟಿ ಬಿಡುಗಡೆಯಾಗಬಹುದು. ಮೋದಿ ಸಂಪುಟದಲ್ಲಿ ಶೋಭಾ ಉತ್ತಮ ಕೆಲಸ ಮಾಡಿದ್ದಾರೆ. 10 ಕ್ಷೇತ್ರದಲ್ಲಿ ಅಭ್ಯರ್ಥಿಗಳ ನಡುವೆ ಪೈಪೋಟಿ ಇದೆ ಎನ್ನಲಾಗುತ್ತಿದೆ, ಮಂಡ್ಯ ಟಿಕೆಟ್ ಗಾಗಿ ಸುಮಲತಾ ಸಭೆ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT