ಎಂ.ಬಿ. ಪಾಟೀಲ್ 
ರಾಜಕೀಯ

ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಬೇಕು: ಸಚಿವ ಎಂ.ಬಿ. ಪಾಟೀಲ್

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು.

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುತ್ತಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಮೆಂಟರ್ (ಮಾನಸಿಕ) ಆಸ್ಪತ್ರೆಗೆ ಸೇರಿಸಬೇಕೆಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಜನರಿಂದ ದೂರ ಉಳಿದಿದ್ದ ಹೆಗಡೆಯವರು ಇದೀಗ ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಣಿಸಿಕೊಳ್ಳುತ್ತಿದ್ದಾರೆ. ಇಲ್ಲಿಯವರೆಗೆ ಎಲ್ಲೂ ಕಾಣಿಸಿಕೊಂಡಿರಲಿಲ್ಲ. ತಮ್ಮ ಮತದಾರರನ್ನು ಭೇಟಿ ಮಾಡಿಲ್ಲ. ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆಯಲ್ಲಿ ಸ್ಪರ್ಧಿಸುವ ಏಕೈಕ ಗುರಿಯೊಂದಿಗೆ ಹಿಂದೂ ಮತ್ತು ಮುಸ್ಲಿಮರ ಬಗ್ಗೆ ಹೇಳಿಕೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ ಎಂದು ಹೇಳಿದರು.

ಈ ಹಿಂದೆ ಕೇಂದ್ರ ಸಚಿವರಾಗಿದ್ದಾಗ ಸಂವಿಧಾನ ಬದಲಿಸಬೇಕು ಎಂದು ಹೇಳಿಕೆ ನೀಡಿದ್ದರು. ಇಂತಹವರನ್ನು ಜನ ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷಿಸಬೇಕು ಎಂದು ತಿಳಿಸಿದರು.

ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಮಾತನಾಡಿ ದೀಪ ಆರೋ ಮುಂಚೆ ದೊಡ್ಡದಾಗಿ ಉರಿಯುವಂತೆ ಸಂಸದ ಅನಂತ​ಕುಮಾರ್​ ಹೆಗಡೆ ವರ್ತಿಸುತ್ತಿದ್ದಾರೆಂದು ಕಿಡಿಕಾರಿದರು.

ಅನಂತಕುಮಾರ್​ ಹೆಗಡೆ ರಾಜಕೀಯವಾಗಿ ‌ಕಳೆದು ಹೋಗುವ ಮುನ್ನ ಅವಾಚ್ಯ ಶಬ್ದಗಳಿಂದ ಮಾತನಾಡುತ್ತಿದ್ದಾರೆ. ತಮ್ಮ ಅಸ್ತಿತ್ವವನ್ನು ತಾವೇ ಕಳೆದುಕೊಳ್ಳುತ್ತಿರುವ ಸಮಯ ಪ್ರಾರಂಭವಾಗಿದೆ. ವಿನಾಶ ಕಾಲೇ ವಿಪರೀತ ಬುದ್ಧಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!

ಜುಲೈ ಕಂಟಕ: ಕಳೆದ ವರ್ಷ ಹಠಾತ್ ಬಿರುಗಾಳಿಯಿಂದ ದೋಣಿ ಮಗುಚಿ 39 ಮಂದಿ ಸಾವು; ಈ ವರ್ಷ 15 ಮಂದಿ ದುರ್ಮರಣ!