ಸುಮಲತಾ ಅಂಬರೀಶ್ 
ರಾಜಕೀಯ

ಮಂಡ್ಯ ಟಿಕೆಟ್‌ಗೆ ಬಿಗಿಪಟ್ಟು: ಸುಮಲತಾ ನಿವಾಸದಲ್ಲಿ ಮಹತ್ವದ ಸಭೆ!

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಗೆ ಬಿಗಿಪಟ್ಟು ಹಿಡಿದಿರುವ ಸಂಸದೆ ಸುಮಲತಾ ಅಂಬರೀಶ್ ಭಾನುವಾರ ಜೆಪಿ ನಗರದ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಟಿಕೆಟ್ ಗೆ ಬಿಗಿಪಟ್ಟು ಹಿಡಿದಿರುವ ಸಂಸದೆ ಸುಮಲತಾ ಅಂಬರೀಶ್ ಭಾನುವಾರ ಜೆಪಿ ನಗರದ ತಮ್ಮ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.

ನಟ ದರ್ಶನ್, ರಾಕ್ ಲೈನ್ ವೆಂಕಟೇಶ್, ಬೆಂಬಲಿಗ ಇಂಡವಾಳು ಸಚ್ಚಿದಾನಂದ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಬೆಂಬಲಿಗರು, ಹಿತೈಷಿಗಳು ಪಾಲ್ಗೊಂಡಿದ್ದು, ಸುಮಲತಾ ಅವರ ನಡೆ ತೀವ್ರ ಕುತೂಹಲ ಮೂಡಿಸಿದೆ.

ಬಿಜೆಪಿ, ಜೆಡಿಎಸ್ ಹೊಂದಾಣಿಕೆ ಹಿನ್ನೆಲೆಯಲ್ಲಿ ಇತ್ತೀಚಿಗೆ ನವದೆಹಲಿಯಲ್ಲಿ ಅಮಿತ್ ಶಾ- ಕುಮಾರಸ್ವಾಮಿ ನಡುವೆ ನಡೆದ ಚರ್ಚೆ ವೇಳೆ ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡಲು ತೀರ್ಮಾನಿಸಲಾಗಿದೆ ಎಂಬಂತಹ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೇ ಕಳೆದ ಬಾರಿ ಪಕ್ಷೇತರ ವಾಗಿ ಸ್ಪರ್ಧಿಸಿ ಜಯಭೇರಿ ಬಾರಿಸಿದ್ದ ಸುಮಲತಾ, ಈ ಬಾರಿ ಒಂದು ವೇಳೆ ಬಿಜೆಪಿಯಿಂದ ಟಿಕೆಟ್ ಕೈ ತಪ್ಪಿದರೆ ಮುಂದೆ ಏನು ಮಾಡಬೇಕೆಂಬ ಬಗ್ಗೆ ಸಭೆಯಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ ಸಂಸದೆಯೊಂದಿಗೆ ಬಹಳ ದಿನಗಳಿಂದ ಅಂತರ ಕಾಯ್ದುಕೊಂಡಿದ್ದ ಬೆಂಬಲಿಗ ಇಂಡವಾಳು ಸಚ್ಚಿದಾನಂದ ಅವರ ಮುನಿಸು ಶಮನಗೊಳಿಸುವ ಪ್ರಯತ್ನ ನಡೆಯುತ್ತಿದೆ. ಸಚ್ಚಿ ಜೊತೆ ಮತ್ತೆ ಬಾಂಧವ್ಯ ಬೆಸಯಲು ಡಿ ಬಾಸ್ ಮೊರೆ ಹೋಗಿರುವ ಸುಮಲತಾ ಅವರು ಸಚ್ಚಿದಾನಂದ ಜೊತೆ ಸಂಧಾನ ಮಾಡಿಕೊಳ್ಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT