ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ  
ರಾಜಕೀಯ

ಲೋಕಸಭಾ ಚುನಾವಣೆಯಲ್ಲಿ ನಿರ್ಮಲಾ ಸೀತಾರಾಮನ್, ಜೈಶಂಕರ್ ಸ್ಪರ್ಧೆ: ಪ್ರಹ್ಲಾದ್ ಜೋಶಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸೋಮವಾರ ಹೇಳಿದರು.

ಹುಬ್ಬಳ್ಳಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರು ಸ್ಪರ್ಧಿಸಲಿದ್ದು, ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸೋಮವಾರ ಹೇಳಿದರು.

ಕರ್ನಾಟಕದಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಿರ್ಮಲಾ ಮತ್ತು ಜೈಶಂಕರ್ ಕರ್ನಾಟಕದಿಂದ ಚುನಾವಣೆಗೆ ಸ್ಪರ್ಧಿಸಬಹುದು ಎಂಬ ಊಹಾಪೋಹಗಳಿವೆ. ಜೈ ಶಂಕರ್ ಕೂಡ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡುತ್ತಿರುವುದು ಈ ಊಹಾಪೋಹಗಳಿಗೆ ಇಂಬು ನೀಡಿದೆ.

ಈ ನಡುವೆ ಮಾಧ್ಯಮ ವರದಿಗಳ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ ಅವರು, ಪ್ರಭಾವಿ ಸಚಿವರು ಚುನಾವಣೆಗೆ ಸ್ಪರ್ಧಿಸುವುದು ಖಚಿತ, ಆದರೆ ಎಲ್ಲಿಂದ ಎಂದು ಇನ್ನೂ ನಿರ್ಧಾರವಾಗಿಲ್ಲ. ಇಬ್ಬರೂ ಕರ್ನಾಟಕ ಅಥವಾ ಇತರ ರಾಜ್ಯಗಳಿಂದ ಸ್ಪರ್ಧಿಸಬಹುದು ಎಂದು ಹೇಳಿದರು.

ಜೈಶಂಕರ್ ಅವರು ಬುಧವಾರ ಹುಬ್ಬಳ್ಳಿಗೆ ಭೇಟಿ ನೀಡಲಿದ್ದು, ಭೇಟಿ ವೇಳೆ ನರೇಂದ್ರ ಮೋದಿ ಸರ್ಕಾರದ 10 ವರ್ಷಗಳ ಸಾಧನೆ ಕುರಿತು ಕೈಗಾರಿಕೋದ್ಯಮಿಗಳು, ವಿದ್ಯಾರ್ಥಿಗಳು ಮತ್ತು ಪ್ರಮುಖ ವ್ಯಕ್ತಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಇದೇ ವೇಳೆ ಧಾರವಾಡದಿಂದ ನಾಲ್ಕು ಬಾರಿ ಸಂಸದರಾಗಿರುವ ಜೋಶಿ ಅವರ ಸಾಧನೆಗಳ ಕುರಿತ ಕಿರುಪುಸ್ತಕವನ್ನು ಬಿಡುಗಡೆ ಮಾಡಲಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿಚಾರ ಕುರಿತ ಪ್ರಶ್ನೆಗೆ ಉತ್ತರಿಸಿ, ಕೇಂದ್ರ ನಾಯಕತ್ವ ಶೀಘ್ರದಲ್ಲಿಯೇ ಎಲ್ಲ ಗೊಂದಲಗಳನ್ನು ನಿವಾರಿಸಲಿದೆ ಎಂದರು.

ಇದೇ ವೇಳೆ ಜೆಡಿಎಸ್ ಜೊತೆಗಿನ ಮನಸ್ತಾಪ ಕುರಿತ ವರದಿಗಳನ್ನು ತಳ್ಳಿಹಾಕಿದರು. ಪಕ್ಷ ದೊಡ್ಡದಾದಗಿದ್ದು, ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳು ಸಾಮಾನ್ಯ. ಆದರೆ ಆ ಎಲ್ಲ ಸಮಸ್ಯೆಗಳು ಬಗೆಹರಿಯಲಿವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್